ಬೆಂಗಳೂರು | ಮೂರು ದಿನವಾದರೂ ಬೋನಿಗೆ ಬೀಳದ ಚಿರತೆ; ವೈದ್ಯ ಸೇರಿದಂತೆ ಮೂವರ ಮೇಲೆ ದಾಳಿ

Date:

ಬೆಂಗಳೂರಿನ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ಅ.29ರ ರಾತ್ರಿ ಕಾಣಿಸಿಕೊಂಡಿದ್ದ ಚಿರತೆ, ನಗರಕ್ಕೆ ಬಂದು ಮೂರು ದಿನ ಕಳೆದರೂ ಇನ್ನೂ ಬೋನಿಗೆ ಚಿರತೆ ಬಿದ್ದಿಲ್ಲ. ಇದರಿಂದ ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಹೆಚ್.ಎಸ್.ಆರ್ ಲೇಔಟ್ ಸೇರಿದಂತೆ ಸುತ್ತಮುತ್ತಲಿನ ಜನರು ಆತಂಕಗೊಂಡಿದ್ದಾರೆ.

ಬೊಮ್ಮನಹಳ್ಳಿ ಭಾಗದ ಕೂಡ್ಲು ಸಮೀಪ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಪತ್ತೆಯಾಗಿದೆ. ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಸತತವಾಗಿ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೂ, ಚಿರತೆಯ ಕುರುಹು ಪತ್ತೆಯಾಗಿರಲಿಲ್ಲ.

ಅ.31ರಂದು ಅರಣ್ಯಾಧಿಕಾರಿಗಳು ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಚಿರತೆಗೆ ಅರವಳಿಕೆ ಮದ್ದನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ, ಅರವಳಿಕೆ ಚುಚ್ಚುಮದ್ದು ನೀಡುವ ಸಮಯದಲ್ಲಿ ವೈದ್ಯ ಕಿರಣ್ ಮೇಲೆ ಚಿರತೆ ದಾಳಿ ಮಾಡಿ ಅವರ ಕುತ್ತಿಗೆಗೆ ಪರಚಿ ಪರಾರಿಯಾಗಿದೆ. ಇದೇ ವೇಳೆ, ಚಿರತೆ ಶಾರ್ಪ್​ ಶೂಟರ್ ಧನ್‌ರಾಜ್ ಎಂಬುವವರ ಮೇಲೂ ದಾಳಿ ಮಾಡಿ ಅವರ ಕಾಲು ಮತ್ತು ಭುಜಕ್ಕೆ ಗಾಯಗೊಳಿಸಿದೆ. ಕಾರ್ಯಾಚರಣೆಯಲ್ಲಿದ್ದ ಇನ್ನೊರ್ವ ಬಿಬಿಎಂಪಿ ಸಿಬ್ಬಂದಿ ಮಹೇಶ್ ಎಂಬವರ ಮೇಲೆ ದಾಳಿ ಮಾಡಿ, ಅವರ ಕಾಲಿಗೆ ಗಾಯಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ಅಂಬ್ಯುಲೆನ್ಸ್​ ಮೂಲಕ ವೈದ್ಯ ಕಿರಣ್ ಸೇರಿದಂತೆ ಮೂವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಲಾಗಿದೆ. ಆದರೆ, ಅರವಳಿಕೆ ನೀಡಿದ 15 ನಿಮಿಷ ಮಾತ್ರ ಅದರ ಪರಿಣಾಮ ಇರುತ್ತದೆ. ಚಿರತೆ ಕಣ್ಣಿಗೆ ಕಾಣದಂತೆ ತಪ್ಪಿಸಿಕೊಳ್ಳುತ್ತಿದ್ದು, ಅಧಿಕಾರಿಗಳನ್ನು ಚಿಂತೆಗೀಡು ಮಾಡಿದೆ. ಈ ಹಿನ್ನೆಲೆಯಲ್ಲಿ ಚಿರತೆಗೆ ‘ಹೈಡೋಸ್’ ಇರುವ​ ಅರಿವಳಿಕೆ ಮದ್ದು ನೀಡಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಸಿದ್ದತೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇಶದ ಬ್ಯಾಂಕ್‌ಗಳಿಗೆ ನವೆಂಬರ್ ತಿಂಗಳಲ್ಲಿ 15 ದಿನ ರಜೆ; ಯಾಕೆ? ಇಲ್ಲಿದೆ ಮಾಹಿತಿ

ಅ.29ರಂದು ತಡರಾತ್ರಿ ಕೃಷ್ಣಾರೆಡ್ಡಿ ಇಂಡಸ್ಟ್ರೀಯಲ್ ಏರಿಯಾದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ರಾತ್ರಿ 11 ಗಂಟೆ ವೇಳೆ ಕಾಂಪೌಂಡ್ ಜಿಗಿದು ಚಿರತೆ ಓಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಥರ್ಮಲ್ ಡ್ರೋಣ್‌ನಲ್ಲಿ ಚಿರತೆಯ ಚಲನವಲನ ಸೆರೆಯಾಗಿತ್ತು. ಸದ್ಯ, ಹುಣಸೂರು ವನ್ಯಜೀವಿ ವಿಭಾಗದಿಂದ ಆಗಮಿಸಿದ್ದ ತಂಡ ಕಾರ್ಯಾಚರಣೆ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...