ಬೆಂಗಳೂರು | ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ

Date:

  • ಗಿರಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
  • ಜೂ. 6ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಯ ಮೇಲೆ ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಮಾಡಿರುವ ದುರ್ಘಟನೆ ನಡೆದಿದೆ.

ಈ ಘಟನೆ ಜೂನ್‌ 6ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗಿರಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪುರುಷೋತ್ತಮ್ ಹಾಗೂ ಚೇತನ್ ಬಂಧಿತರು. ಪುರುಷೋತ್ತಮ್ ಹಾಗೂ ಯುವತಿ, ಇಬ್ಬರು ಮೂಲತಃ ತುಮಕೂರು ಜಿಲ್ಲೆಯ ಕೊರಟಗೆರೆಯವರು. ಕಳೆದ ಒಂದು ವರ್ಷದಿಂದ ಇವರು ಪ್ರೀತಿಸುತ್ತಿದ್ದರು. ಕಳೆದ ಒಂದು ವಾರದ ಹಿಂದೆ ಯುವತಿಯನ್ನ ಭೇಟಿ ಮಾಡಿದ್ದ ಆರೋಪಿ ಪ್ರಿಯಕರ ಪುರುಷೋತ್ತಮ್ ಯುವತಿಯ ಮೊಬೈಲ್ ಕಿತ್ತುಕೊಂಡು ಬೆಂಗಳೂರಿಗೆ ಬಂದಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವತಿ ಪ್ರಿಯಕರನಿಗೆ ಕರೆ ಮಾಡಿ ಮೊಬೈಲ್ ವಾಪಸ್ ನೀಡುವಂತೆ ಕೇಳಿದ್ದಳು. ಬೆಂಗಳೂರಿನ ಮೆಜೆಸ್ಟಿಕ್ ಬಳಿ ಬಂದರೆ ಮೊಬೈಲ್ ವಾಪಸ್ ಕೊಡುವುದಾಗಿ ಪ್ರಿಯಕರ ಹೇಳಿದ್ದನು. ಈ ಹಿನ್ನೆಲೆ, ಜೂನ್ 6ರಂದು ಯುವತಿಯೂ ಬೆಂಗಳೂರಿಗೆ ಬಂದಿದ್ದಾಳೆ. ಈ ವೇಳೆ ಪುರುಷೋತ್ತಮ್ ಮೊಬೈಲ್ ನೀಡದೆ ರೂಮ್‌ನಲ್ಲಿದೆ ಎಂದು ಹೇಳಿ ಯುವತಿಯನ್ನು ಗಿರಿನಗರದ ಈರಣ್ಣಗುಡ್ಡೆಯ ತನ್ನ ಸ್ನೇಹಿತ ಚೇತನ್ ಮನೆಗೆ ಕರೆದುಕೊಂಡು ಹೋಗಿದ್ದಾನೆ.

ಬಳಿಕ ಯುವತಿ ನನ್ನ ಮೊಬೈಲ್ ಕೊಡು ಊರಿಗೆ ಹೋಗಬೇಕೆಂದು ಹೇಳಿದ್ದಾಳೆ. ಆದರೆ, ಪುರುಷೋತ್ತಮ್ ಮೊಬೈಲ್ ನೀಡದೆ ಸತಾಯಿಸಿ ಬಲವಂತವಾಗಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಳೆಗಾಲದಲ್ಲಿ ಬೀಳುವ ರಸ್ತೆಗುಂಡಿ ಮುಚ್ಚಲು ಕೋಲ್ಡ್‌ ಮಿಕ್ಸ್‌ನೊಂದಿಗೆ ಸಜ್ಜಾದ ಬಿಬಿಎಂಪಿ

ನಂತರ ರೂಮ್‌ಗೆ ಬಂದಿದ್ದ ಸ್ನೇಹಿತ್ ಚೇತನ್ ಸಹ ಯುವತಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ. ಯುವತಿಯ ಚೀರಾಟ ಕೇಳಿ ಅಕ್ಕಪಕ್ಕದ ಮನೆಯವರು ಜಮಾವಣೆಗೊಂಡು ಗಿರಿನಗರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಸದ್ಯ ಯುವತಿಯನ್ನ ರಕ್ಷಣೆ ಮಾಡಿ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ನಂತರ ಪೋಷಕರ ಬಳಿ ಬಿಟ್ಟಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಪೊಲೀಸರು ತನಿಖೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...