ಬೆಂಗಳೂರು | ಹಾಡಹಗಲೇ ಜೋಡಿ ಕೊಲೆ; ಮೂವರು ಆರೋಪಿಗಳ ಬಂಧನ

Date:

  • ಮೊಬೈಲ್ ನಂಬರ್ ಟವರ್ ಡಂಪ್ ಆಧರಿಸಿ ಆರೋಪಿಗಳ ಬೆನ್ನತ್ತಿದ ಪೊಲೀಸರು
  • ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಎಂಡಿ ಮತ್ತು ಸಿಇಒ ಕೊಲೆ ಮಾಡಿದ ಆರೋಪಿಗಳು

ರಾಜ್ಯ ರಾಜಧಾನಿ ಬೆಂಗಳೂರಿನ ಪಂಪಾ ಬಡಾವಣೆಯಲ್ಲಿ ಜೋಡಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಳವಾರ ಏರೋನಿಕ್ಸ್ ಇಂಟರ್‌ನೆಟ್ ಕಂಪನಿ ಸಿಇಒ ವಿನುಕುಮಾರ್ ಮತ್ತು ಏರೋನಿಕ್ಸ್‌ ಇಂಟರ್‌ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಮಣ್ಯ ಅವರ ಹತ್ಯೆಯಾಗಿದೆ.

ಶಿವಮೊಗ್ಗ ಮೂಲದ ಫೆಲಿಕ್ಸ್‌ (ಶಬರೀಶ್)​, ಬೆಂಗಳೂರಿನ ರೂಪೇನಾ ಅಗ್ರಹಾರದ ವಿನಯ್​ ರೆಡ್ಡಿ ಹಾಗೂ ಶಿವು ಬಂಧಿತರು. ಇವರನ್ನು ಮೊಬೈಲ್ ನಂಬರ್ ಟವರ್ ಡಂಪ್ ಆಧರಿಸಿ ಬೆನ್ನತ್ತಿದ ಪೊಲೀಸರು ಅಂತಿಮವಾಗಿ ಕುಣಿಗಲ್ ಬಳಿ ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ವಿವರ

ಫೆಲಿಕ್ಸ್‌ ಅಲಿಯಾಸ್ ಜೋಕರ್ ಶಬರೀಶ್ ಎಂಬಾತ ಏರೋನಿಕ್ಸ್‌ ಇಂಟರ್ನೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಈತನನ್ನು ಇತ್ತೀಚೆಗೆ ಕಂಪನಿಯ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಕೆಲಸದಿಂದ ತೆಗೆದು ಹಾಕಿದ್ದರು ಎಂದು ತಿಳಿದುಬಂದಿದೆ.

ಫೆಲಿಕ್ಸ್ ಕಂಪನಿಯಿಂದ ಹೊರಬಂದು ತನ್ನದೆ ಸ್ವಂತ ಕಂಪನಿ ಸ್ಥಾಪಿಸಿದ್ದನು. ಈ ಉದ್ಯಮಕ್ಕೆ ಫಣೀಂದ್ರ ಎದುರಾಳಿಯಾಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಫೆಲಿಕ್ಸ್, ಎದುರಾಳಿ ಫಣೀಂದ್ರರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾನೆ.

ಫೆಲಿಕ್ಸ್‌ ತನ್ನ ಮೂವರು ಸಹಚರರ ಜತೆಗೆ ಸೇರಿ ಪಂಪಾ ಬಡವಾಣೆಯಲ್ಲಿರುವ ಏರೋನಿಕ್ಸ್ ಕಂಪನಿಗೆ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ತೆರಳಿ ಕಂಪನಿಯ ಎಂಡಿ ಮತ್ತು ಸಿಇಒ ಜೊತೆ ಅರ್ಧ ಗಂಟೆಗಳ ಕಾಲ ಮಾತನಾಡಿದ್ದಾರೆ. ಬಳಿಕ, ಏಕಾಏಕಿ ಫೆಲಿಕ್ಸ್‌ ತಲ್ವಾರನಿಂದ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇದೇ ವೇಳೆ, ಎಂಡಿಯನ್ನು ರಕ್ಷಿಸಲು ಬಂದ ವಿನುಕುಮಾರ್ ಮೇಲೆಯೂ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಈ ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ ಬಂಧಿಸಲಾಗಿದೆ.

ಆರೋಪಿಗಳ ಪತ್ತೆಗೆ ಕಾರ್ಯಪ್ರವೃತ್ತರಾದ ಪೊಲೀಸರು

ರಾಜಧಾನಿಯಲ್ಲಿ ಜೋಡಿ ಕೊಲೆ ಪ್ರಕರಣ ದಾಖಲಾಗುತ್ತಿದ್ದಂತೆ, ಅಮೃತಹಳ್ಳಿ ಪೊಲೀಸರು ಎಚ್ಚೆತ್ತುಕೊಂಡು ಆರೋಪಿಗಳ ಪತ್ತೆಗೆ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾರ್ಗದರ್ಶನದಲ್ಲಿ 5 ತಂಡ ರಚಿಸಿದ್ದರು.

ಆರೋಪಿಗಳ ಪತ್ತೆಗೆ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಮೊಬೈಲ್ ನಂಬರ್ ಟವರ್ ಡಂಪ್ ಆಧರಿಸಿ ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಾಡಹಗಲೇ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಜೋಡಿ ಕೊಲೆ

ಕೊಲೆಗೆ ಸಾಥ್ ನೀಡಿದ ಸಹಚರರು

ಫೆಲಿಕ್ಸ್‌ನ ಸಹಚರರು ಹಾಗೂ ಆರೋಪಿಗಳಾದ ವಿನಯ್ ಹಾಗೂ ಶಿವು ಎನ್ನುವವರಿಗೆ ಜೋಡಿ ಹತ್ಯೆ ಮಾಡುವ ಉದ್ದೇಶವಿರಲಿಲ್ಲ ಎನ್ನಲಾಗಿದೆ. ಫೆಲಿಕ್ಸ್ ಮಾತು ಕೇಳಿ ಹತ್ಯೆಗೆ ಕೈ ಜೋಡಿಸಿದ್ದಾರೆ.

ಜೋಡಿ ಕೊಲೆಗೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದೇವೆ. ಈಗಾಗಲೇ ಪ್ರಮುಖ ಆರೋಪಿಯ ಬಗ್ಗೆ ಮಾಹಿತಿ ಇದೆ. ಹಿಂದುತ್ವ ಸ್ಟೇಟಸ್‌ ಬಗ್ಗೆ ಮಾಹಿತಿ ಇಲ್ಲ. ತನಿಖೆ ನಡೆಸದೆ ಈ ಹಂತದಲ್ಲಿ ಏನು ಹೇಳಲು ಸಾಧ್ಯವಿಲ್ಲ ಎಂದು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...