ಬೆಂಗಳೂರು | ಪರೀಕ್ಷೆ ಬರೆಯುವಾಗ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿ ಆತ್ಮಹತ್ಯೆ

Date:

ಪರೀಕ್ಷೆ ಬರೆಯುವಾಗ ನಕಲು ಮಾಡಿ, ಸಿಕ್ಕಿಬಿದ್ದ ವಿದ್ಯಾರ್ಥಿಯೊಬ್ಬ ಮನನೊಂದು ಕಾಲೇಜಿನ 8ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಿಇಎಸ್‌ ಕಾಲೇಜಿನಲ್ಲಿ ನಡೆದಿದೆ.

ಆದಿತ್ಯ ಪ್ರಭು (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಇವರು ಮೂಲತಃ ಮಂಗಳೂರಿನವರು. ಬೆಂಗಳೂರಿನ ಪಿಇಎಸ್ ಕಾಲೇಜಿನಲ್ಲಿ ಬಿ.ಟೆಕ್​ ಸೆಕೆಂಡ್ ಸೆಮಿಸ್ಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.

ಏನಿದು ಘಟನೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಪಿಇಎಸ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಆದಿತ್ಯ ಪ್ರಭು ಬಿ.ಟೆಕ್‌ ವಿದ್ಯಾಭ್ಯಾಸ ಮಾಡುತ್ತಿದ್ದರು. ಪರೀಕ್ಷೆಯ ಸಮಯದಲ್ಲಿ ಮೊಬೈಲ್‌ ನೋಡಿಕೊಂಡು ಕಾಪಿ ಮಾಡುತ್ತಿದ್ದನು. ಇದನ್ನು ಗಮನಿಸಿದ ಉಪನ್ಯಾಸಕರು ವಿದ್ಯಾರ್ಥಿಯ ಮೊಬೈಲ್ ಕಿತ್ತುಕೊಂಡು ಪರೀಕ್ಷಾ ಕೊಠಡಿಯಿಂದ ಹೊರಗೆ ಕಳುಹಿಸಿದ್ದಾರೆ.

ಬಳಿಕ ಆದಿತ್ಯ ಅವರ ತಾಯಿಗೆ ಕರೆ ಮಾಡಿ ಮಗ ಪರೀಕ್ಷೆ ವೇಳೆ ನಕಲು ಮಾಡುತ್ತಿದ್ದ ಬಗ್ಗೆ ದೂರು ನೀಡಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ ಕಾಲೇಜಿನ ಎಂಟನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜುಲೈ 17, 18ರಂದು ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ನಡೆದ ಘಟನೆಯನ್ನು ಪೊಲೀಸರು ಮೃತ ವಿದ್ಯಾರ್ಥಿಯ ಪೋಷಕರಿಗೆ ತಿಳಿಸಿದ್ದಾರೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮರಣೋತ್ತರ ಪರೀಕ್ಷೆಯನ್ನು ನಡೆಸಿದ ನಂತರ ಪೋಷಕರಿಗೆ ಹಸ್ತಾಂತರ ಮಾಡಲಾಗುವುದು ಎಂದು ದಕ್ಷಿಣ ವಲಯದ ಡಿಸಿಪಿ ಕೃಷ್ಣಕಾಂತ್ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...