ಬೆಂಗಳೂರು | ಮಾಜಿ ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು ₹8.2 ಲಕ್ಷ ಕಳೆದುಕೊಂಡ ಯುವತಿ

Date:

ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು ಹೋಗಿ ಯುವತಿಯೊಬ್ಬಳು 8.2 ಲಕ್ಷ ಕಳೆದುಕೊಂಡ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ.

ಮೋಸ ಹೋದ ಯುವತಿ ಓರ್ವ ಯುವಕನನ್ನು ಪ್ರೀತಿ ಮಾಡುತ್ತಿದ್ದಳು. ಕಾರಣಾಂತರಗಳಿಂದ ಇಬ್ಬರ ನಡುವೆ ವೈಮನಸ್ಸು ಮೂಡಿ ದೂರ ಆಗಿದ್ದರು. ಬ್ರೇಕ್‌ ಅಪ್‌ನಿಂದ ನೊಂದಿದ್ದ ಯುವತಿ ತಾನು ಪ್ರೀತಿ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು ಮಾಟ ಮಂತ್ರ ಅಥವಾ ವಶೀಕರಣದ ಮೂಲಕ ಮತ್ತೆ ತನ್ನ ಬಳಿ ಸೆಳೆಯಲು ತನ್ನ ಸ್ನೇಹಿತನ ಸಹಾಯದಿಂದ ಆನ್‌ಲೈನ್ ಮೂಲಕ ವಶೀಕರಣ ಮಾಡುವ ಜ್ಯೋತಿಷಿಯೊಬ್ಬರನ್ನು ಸಂಪರ್ಕ ಮಾಡುತ್ತಾಳೆ.

ಮೊದಲಿಗೆ ಆನ್‌ಲೈನ್ ಮುಖಾಂತರ ಭೇಟಿ ಮಾಡಿದ ಜ್ಯೋತಿಷಿ, ‘ನಿನ್ನ ಪ್ರಿಯಕರ ನಿನಗೆ ಸಿಗುತ್ತಾನೆ. ಆದಷ್ಟು ಬೇಗ ಬಂದು ನಿನ್ನನ್ನು ತಲುಪುತ್ತಾನೆ’ ಎಂದು ಯುವತಿಯಲ್ಲಿ ಮೊದಲಿಗೆ ಭರವಸೆ ತುಂಬಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು ಹಾಗೂ ಆತನ ಪೋಷಕರ ಮೇಲೆ ಮಾಟಮಂತ್ರದ ಆಚರಣೆಗಳನ್ನು ಮಾಡಲು ಡಿಸೆಂಬರ್ 22 ರಂದು ಮೊದಲ ಹಂತವಾಗಿ 2.4 ಲಕ್ಷ ಯುವತಿ ಆನ್‌ಲೈನ್​​ ಮೂಲಕ ಜ್ಯೋತಿಷಿಗೆ ಪಾವತಿ ಮಾಡಿದ್ದಾಳೆ.

ಬಳಿಕ, ಪದೇ ಪದೆ ಹಣಕಾಸಿನ ಬೇಡಿಕೆ ಇಟ್ಟ ಸ್ವಾಮೀಜಿ, ಕೆಲವು ದಿನಗಳ ನಂತರ, ಹೆಚ್ಚುವರಿ 1.7 ಲಕ್ಷ ಪಾವತಿ ಮಾಡುವಂತೆ ಕೇಳುತ್ತಾನೆ. ನಿರಂತರವಾಗಿ ಹಣ ಕೇಳಿದಾಗ ಯುವತಿ ಹಣವಿಲ್ಲ ಎಂದಾಗ ‘ಹಣ ನೀಡದಿದ್ದರೆ ನಿನ್ನ ಮಾಜಿ ಪ್ರಿಯಕರನಿಗೆ ವಿಷಯ ತಿಳಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಯುವತಿ ಜನವರಿ 10ರಂದು ₹4.1 ಲಕ್ಷ ನೀಡಿದ್ದಾಳೆ. ಹೀಗೆ ಯುವತಿ ಜ್ಯೋತಿಷಿಗೆ ಬರೋಬ್ಬರಿ 8.2 ಲಕ್ಷ ನೀಡಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮದ್ಯಪಾನ ಮಾಡಿ ಶಾಲಾ ವಾಹನ ಓಡಿಸಿದ ಚಾಲಕರು; ಡಿಎಲ್ ಅಮಾನತಿಗೆ ಸೂಚನೆ

ಯುವತಿಯ ಈ ವಿಚಾರ ತಿಳಿದ ಪೋಷಕರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಜಾಲಹಳ್ಳಿ ಪೊಲೀಸ್​​​ ಠಾಣೆಯಲ್ಲಿ ಜ್ಯೋತಿಷಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸದ್ಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...