ಬೆಂಗಳೂರು | ವಿವಾಹೇತರ ಸಂಬಂಧ; ಮಹಿಳೆಯ ಪತಿಯನ್ನ ಹತ್ಯೆಗೈದ ಆರೋಪಿ; ಬಂಧನ

Date:

ಮಹಿಳೆಯೊಂದಿಗೆ ವಿವಾಹೇತರ ಸಂಬಂಧಕ್ಕೆ ಅಡ್ಡಿ ಮಾಡುತ್ತಿದ್ದನೆಂದು ಆಕೆಯ ಪತಿಯನ್ನು ಕೊಲೆ ಮಾಡಿದ ಆರೋಪಿಯನ್ನು ಬೆಂಗಳೂರಿನ ತಿಲಕ್‌ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ತಬ್ರೇಜ್ ಪಾಷಾ ಕೊಲೆಯಾದ ದುರ್ದೈವಿ. ಶಬ್ಬೀರ್ ಬಂಧಿತ ಆರೋಪಿ. ತಬ್ರೇಜ್ ಪಾಷಾ ಮತ್ತು ಶಬ್ಬೀರ್ ಇಬ್ಬರೂ ಸಂಬಂಧಿಗಳು. ತಬ್ರೇಜ್ ಪಾಷಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಶಬ್ಬೀರ್ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದನು.

ತಬ್ರೇಜ್ ಪತ್ನಿಯ ಜತೆಗೆ ಶಬ್ಬೀರ್ ವಿವಾಹೇತರ ಸಂಬಂಧ ಹೊಂದಿದ್ದನು. ಈ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು. ಪಂಚಾಯತಿ ನಡೆಸಿ ಸಮಸ್ಯೆಯನ್ನು ಬಗೆಹರಿಸಲಾಗಿತ್ತು. ಆದರೂ, ಶಬ್ಬೀರ್ ವಿವಾಹೇತರ ಸಂಬಂಧ ಮುಂದುವರೆಸಿದ್ದ ಎಂದು ಹೇಳಲಾಗಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಚಾರವಾಗಿ ಮತ್ತೆ ಇಬ್ಬರ ನಡುವೆ ಜಗಳ ನಡೆದಿತ್ತು. ಬುಧವಾರ ಮಧ್ಯಾಹ್ನ ಎಸ್.ಆರ್.ಕೆ. ಗಾರ್ಡನ್ ಬಳಿ ತಬ್ರೇಜ್ ಪಾಷಾನನ್ನು ಅಡ್ಡಗಟ್ಟಿದ ಆರೋಪಿ, ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ತಬ್ರೇಜ್ ಸ್ಥಳದಲ್ಲೇ ಮೃತಪಟ್ಟಿದ್ದರು. ಹತ್ಯೆ ಮಾಡಿದ ಶಬ್ಬೀರ್ ಪರಾರಿಯಾಗಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯರಿಗೆ ಲಕ್ಷಾಂತರ ರೂ. ವಂಚನೆ; ಬಂಧನ

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ತಿಲಕ್ ನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು, “ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ” ಎಂದು ಹೇಳಿದರು.

ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...