ಬೆಂಗಳೂರು | 4 ತಿಂಗಳ ಬಳಿಕ ಶುದ್ಧ ಕುಡಿಯುವ ನೀರಿನ ನಿರೀಕ್ಷೆಯಲ್ಲಿ ಮೈಕಲ್ ಪಾಳ್ಯದ ನಿವಾಸಿಗಳು

Date:

  • ಕಲುಷಿತ ನೀರು ಕುಡಿದು ಅಸ್ವಸ್ಥರಾದ ಮೈಕಲ್ ಪಾಳ್ಯದ ನಿವಾಸಿಗಳು
  • ಅಶುದ್ಧ ನೀರಿನ ಸೋರಿಕೆ ಗಮನಿಸಿ, ಸಮಸ್ಯೆ ಪರಿಹರಿಸಲಾಗಿದೆ ಎಂದ ಅಧಿಕಾರಿಗಳು

ರಾಜ್ಯ ರಾಜಧಾನಿ ಬೆಂಗಳೂರಿನ ಮೈಕಲ್ ಪಾಳ್ಯದ 1 ಮತ್ತು 5ನೇ ಕ್ರಾಸ್‌ನಲ್ಲಿರುವ ಸುಮಾರು 150-200 ಮನೆಗಳು ಕಲುಷಿತ ನೀರು ಪೂರೈಕೆಯಿಂದ ತೊಂದರೆ ಅನುಭವಿಸುತ್ತಿವೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ನಿವಾಸಿಗಳಿಗೆ ನೀರು ಸರಬರಾಜು ಮಾಡುತ್ತಿರುವ ಕಾವೇರಿ ನೀರು ಮಾರ್ಚ್‌ 18 ರಿಂದ ದುರ್ವಾಸನೆ ಬೀರುತ್ತಿದೆ. ಜನರು ಶುದ್ಧ ನೀರಿಗಾಗಿ ಪರದಾಡುತ್ತಿದ್ದಾರೆ.

“ಬಿಡಬ್ಲ್ಯೂಎಸ್‌ಎಸ್‌ಬಿ ಜತೆಗೆ ಈಗಾಗಲೇ ಹಲವಾರು ಬಾರಿ ಸಮಸ್ಯೆ ಹೇಳಿಕೊಂಡರು ಅಧಿಕಾರಿಗಳು ಬಂದು ಸಮಸ್ಯೆ ಸರಿಯಾಗಿದೆ ಎಂದು ಹೇಳಿದ ಮೂರು ದಿನಕ್ಕೆ ಮತ್ತೆ ಅದೇ ಪರಿಸ್ಥಿತಿ ಎದುರಾಗುತ್ತಿದೆ. ಸೋಮವಾರ ಸಾಯಂಕಾಲದಿಂದ ಅಶುದ್ಧ ನೀರು ಬರುವುದು ನಿಲ್ಲುತ್ತದೆ ಎಂದು ಬಿಡಬ್ಲ್ಯೂಎಸ್‌ಎಸ್‌ಬಿ ಅಧಿಕಾರಿಗಳು ಹೇಳಿದ್ದಾರೆ. ಆದರೂ, ನಿವಾಸಿಗಳು ಜಾಗರೂಕರಾಗಿದ್ದಾರೆ. ನಲ್ಲಿಗಳಿಂದ ಶುದ್ಧ ನೀರು ಹರಿಯುತ್ತಿದ್ದರೂ, ಹಿಂದಿನ ಇಂತಹ ಪರಿಹಾರಗಳು ಹೆಚ್ಚು ಕಾಲ ಉಳಿಯಲಿಲ್ಲ. ಹಾಗಾಗಿ, ಈಗಲಾದರೂ ಶಾಶ್ವತವಾಗಿ ಸಮಸ್ಯೆ ಬಗೆಹರಿಯಬಹುದು ಎಂಬ ಆಶಯ ಹೊಂದಿದ್ದೇವೆ” ಎನ್ನುತ್ತಾರೆ ಮೈಕಲ್ ಪಾಳ್ಯದ ನಿವಾಸಿಗಳು.

“ಬಿಡಬ್ಲ್ಯೂಎಸ್‌ಎಸ್‌ಬಿ ಸಿಬ್ಬಂದಿ ಪ್ರದೇಶದಲ್ಲಿನ ಪೈಪ್‌ಲೈನ್‌ನಿಂದ ನೀರನ್ನು ಹೊರಹಾಕುತ್ತಿದ್ದಾರೆ. ಅಶುದ್ಧ ನೀರಿನ ಸೋರಿಕೆಯನ್ನು ಗಮನಿಸಲಾಗಿದೆ. ಸಮಸ್ಯೆಯನ್ನು ಪರಿಹರಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಿಂಗಳ ಪ್ರಯೋಗದ ನಂತರ ಅಶುದ್ಧ ನೀರು ಸೋರಿಕೆಯಾಗುತ್ತಿರುವ ಪೈಪ್‌ಲೈನ್ ಅನ್ನು ಮುಚ್ಚಲು ನಿರ್ಧರಿಸಿದ್ದೇವೆ. ಈ ಭಾಗದಲ್ಲಿ ಎರಡು ಪೈಪ್‌ಲೈನ್‌ಗಳು ಚಾಲನೆಯಲ್ಲಿವೆ. ಎಲ್ಲ ಲೈನ್‌ಗಳು ನೆಲದಡಿಯಲ್ಲಿ ಪರಸ್ಪರ ಸಂಪರ್ಕ ಹೊಂದಿರುವುದರಿಂದ ಡ್ರೈನ್‌ಪೈಪ್‌ನಿಂದ ಒಳಚರಂಡಿ ಹಳೆಯ ಪೈಪ್‌ಲೈನ್‌ಗೆ ಸೋರಿಕೆಯಾಗಿದೆ ಎಂದು ಶಂಕಿಸಲಾಗಿದೆ. ಹಾಗಾಗಿ, ವಾಲ್ವ್ ಅನ್ನು ಮುಚ್ಚಿದ್ದೇವೆ. ಹೊಸ ಪೈಪ್‌ಲೈನ್ ಮೂಲಕ ಮಾತ್ರ ಮೈಕೆಲ್ ಪಾಳ್ಯಕ್ಕೆ ಕುಡಿಯುವ ನೀರು ಸರಬರಾಜು ಮಾಡಲಾಗುವುದು” ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಧನ್ವಂತ್ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿಯ ಇಂದಿರಾನಗರ ಉಪವಿಭಾಗದ ಕಾರ್ಯಪಾಲಕ ಎಂಜಿನಿಯರ್ ಬಸವರಾಜ್ ಹೇಳಿದರು.

“ನಿತ್ಯ ಸಂಜೆ 4:30ರಿಂದ ಕಲುಷಿತ ನೀರು ಹರಿಯಲು ಪ್ರಾರಂಭಿಸುತ್ತದೆ. ಹೀಗಾಗಿ, ನಾವು ನಲ್ಲಿಯ ಟ್ಯಾಪ್‌ ಅನ್ನು ತೆರೆಯುವುದಿಲ್ಲ. ಏಕೆಂದರೆ, ಒಮ್ಮೆ ಸಂಪ್‌ಗಳಿಗೆ ಒಳಚರಂಡಿ ನೀರು ಸಂಗ್ರಹಣೆ ಆದರೆ, ಮತ್ತೆ ನಾವು ಅವುಗಳನ್ನು ಸ್ವಚ್ಛಗೊಳಿಸಬೇಕಾಗುತ್ತದೆ. ಈಗಾಗಲೇ ಕಳೆದ ತಿಂಗಳುಗಳಲ್ಲಿ ಟ್ಯಾಂಕ್ ಮತ್ತು ಸಂಪ್ ಅನ್ನು 6-7 ಬಾರಿ ಸ್ವಚ್ಛಗೊಳಿಸಿದ್ದೇವೆ. ಪ್ರತಿ ಬಾರಿ ₹1,500 ಬೇಕಾಗುತ್ತದೆ” ಎಂದು ನಿವಾಸಿ ಪಿಜೆ ಅಲೆಕ್ಸಾಂಡರ್ ಹೇಳಿದರು.

“ಸುಮಾರು 30-40 ನಿವಾಸಿಗಳು ಕಲುಷಿತ ನೀರು ಸೇವಿಸಿದ ನಂತರ ಅಸ್ವಸ್ಥರಾಗಿದ್ದಾರೆ. 15ಕ್ಕೂ ಹೆಚ್ಚು ಜನರು ಮಾರ್ಚ್‌ನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ನನ್ನ ನೆರೆಹೊರೆಯವರ ಮಗಳು ಮತ್ತು ವಯಸ್ಸಾದ ತಾಯಿ ಅತಿಸಾರದಂತಹ ಪರಿಸ್ಥಿತಿಗಳಿಂದಾಗಿ 4-5 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದರು” ಎಂದರು.

ಈ ಸುದ್ದಿ ಓದಿದ್ದೀರಾ? ಮುಂಗಾರು ಮಳೆಯಿಂದಾಗುವ ಸಮಸ್ಯೆ ನಿಭಾಯಿಸಲು ಸಂಪೂರ್ಣ ಸನ್ನದ್ಧ : ತುಷಾರ್ ಗಿರಿನಾಥ್

“ಈ ಕಲುಷಿತ ನೀರು ಕುಡಿದು ಹಲವಾರು ಜನ ಆಸ್ಪತ್ರೆ ಸೇರಿದ್ದಾರೆ. ಇಂತಹ ನೀರಿನ ಪೂರೈಕೆಯಿಂದಾಗಿ ಚಿಕಿತ್ಸೆಗಾಗಿ ಪ್ರತಿ ರೋಗಿಗೆ ಸರಾಸರಿ ₹15,000 ವೆಚ್ಚವಾಗಿದೆ” ಎಂದು ಇನ್ನೊಬ್ಬ ನಿವಾಸಿ ಅನಂತರಾಮನ್ ಹೇಳಿದರು.

“ಕಳೆದ ನಾಲ್ಕು ತಿಂಗಳುಗಳಲ್ಲಿ ಹಲವಾರು ಬಾರಿ ಸಮಸ್ಯೆ ಪರಿಹರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ಶೀಘ್ರದಲ್ಲೇ ಸಮಸ್ಯೆ ಮರುಕಳಿಸುತ್ತದೆ. ಈ ಬಾರಿಯಾದರೂ ಸಮಸ್ಯೆ ಬಗೆಹರಿದಿದೆಯೇ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು” ಎಂದು ಸ್ಥಳೀಯ ನಿವಾಸಿ ಡಿ ಶೇಖರ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...