ಬೆಂಗಳೂರು | ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಎಫ್‌ಐಆರ್‌ ದಾಖಲು

Date:

ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ ಆರೋಪ ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ಮೇಲೆ ಕೇಳಿಬಂದಿದೆ.

ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ಅವರ ವಿರುದ್ಧ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ರಂಗನಾಥ್ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ಮೂಲದ ಯುವತಿಯನ್ನು ಕಳೆದ ಒಂದು ವರ್ಷದ ಹಿಂದೆ ರಂಗನಾಥ್ ಅವರು ಪರಿಚಯ ಮಾಡಿಕೊಂಡಿದ್ದರು. ಬಳಿಕ ಅವರನ್ನು ಕಳೆದ ಜನವರಿಯಲ್ಲಿ ಮೈಸೂರಿನ ಹೋಟೆಲ್‌ವೊಂದಕ್ಕೆ ಕರೆಸಿಕೊಂಡಿದ್ದಾರೆ. ಈ ವೇಳೆ, ಅವರೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರೀತಿ ಮಾಡಿ, ದೈಹಿಕ ಸಂಬಂಧ ಬೆಳೆಸಿ ಇದೀಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಯುವತಿ ಮತ್ತು ರಂಗನಾಥ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿವಾಹೇತರ ಸಂಬಂಧ; ಮಹಿಳೆಯ ಪತಿಯನ್ನ ಹತ್ಯೆಗೈದ ಆರೋಪಿ; ಬಂಧನ

ಪ್ರತಿ ದೂರು ದಾಖಲು ಮಾಡಿದ ರಂಗನಾಥ್

ಫೋಟೋ ಮತ್ತು ಆಡಿಯೋ ಇಟ್ಟುಕೊಂಡು ₹15 ಲಕ್ಷ ನೀಡುವಂತೆ ಬ್ಲಾಕ್‌ ಮೇಲ್ ಮಾಡುತ್ತಿದ್ದಾರೆ ಎಂದು ರಂಗನಾಥ್ ಅವರು ಯುವತಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲು ಮಾಡಿದ್ದಾರೆ.

ಪ್ರಕರಣದ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು, “ಯುವತಿ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರಿಗೂ ನೋಟಿಸ್ ನೀಡಲಾಗಿದೆ. ಅವರು ಇನ್ನೂ ವಿಚಾರಣೆಗೆ ಹಾಜರಾಗಿಲ್ಲ” ಎಂದರು.

ಸದ್ಯ ಯುವತಿ ಮತ್ತು ರಂಗನಾಥ್ ಅವರು ದೂರು ಮತ್ತು ಪ್ರತಿದೂರು ದಾಖಲು ಮಾಡಿದ್ದು, ಪೊಲೀಸ್ ತನಿಖೆ ಬಳಿಕ ಸತ್ಯಾಸತ್ಯತೆ ತಿಳಿದು ಬರಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...