ಹುಲಿ ಉಗುರು ಧರಿಸಿರುವ ಆರೋಪ; ನಟ ಜಗ್ಗೇಶ್ ವಿರುದ್ಧ ದೂರು

Date:

ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ನಟ ಜಗ್ಗೇಶ್‌ಗೂ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರು ಹುಲಿ ಉಗುರು ಲಾಕೆಟ್​​​​ ಧರಿಸಿರುವ ವಿಡಿಯೋ ವೈರಲ್​ ಆಗುತ್ತಿದೆ.

ನಟ ಜಗ್ಗೇಶ್​ ವಿರುದ್ಧ ಕಾಂಗ್ರೆಸ್​ನ ಮಾಜಿ ಎಂಎಲ್​ಸಿ ಪಿ.ಆರ್ ರಮೇಶ್, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ. ಈ ಹಿಂದೆ ತಮ್ಮ ಬಳಿ ಹುಲಿ ಉಗುರು ಇರುವ ಬಗ್ಗೆ ಜಗ್ಗೇಶ್ ಬಹಿರಂಗವಾಗಿಯೇ ಹೇಳಿಕೆ‌ ನೀಡಿದ್ದರು. ಹುಲಿ ಉಗುರು ಧರಿಸುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ʼನನಗೆ 20 ವರ್ಷ ಆದಾಗ ನನ್ನಮ್ಮ ನನ್ನ ಮಗ ಹುಲಿ ಇದ್ದಂಗೆ ಇರಬೇಕು ಅಂತ ಹೇಳಿ ಒರಿಜಿನಲ್ ಹುಲಿ ಉಗುರಿನಲ್ಲಿ ಈ ಲಾಕೆಟ್ ಇರುವ ಸರ ಮಾಡಿಸಿ ಹಾಕಿದ್ದರು’ ಎಂದಿರುವ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಉಗುರು ಧರಿಸಿದ್ದಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನದ ಬೆನ್ನಲ್ಲೇ ಹಲವರು ಹುಲಿ ಉಗುರಿನ ಲಾಕೆಟ್​ ಧರಿಸಿಕೊಂಡಿದ್ದು, ಇದೀಗ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಪ್ರಕಾರ, ಯಾವುದೇ ವನ್ಯಜೀವಿಗೆ ಸಂಬಂಧಿಸಿದ ಚರ್ಮ, ಮೂಳೆ, ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹ ತಪ್ಪು. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3ರಿಂದ 7ವರ್ಷ ಜೈಲು ಮತ್ತು ಕನಿಷ್ಠ 10,000 ರೂ. ದಂಡ ವಿಧಿಸಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...