ಬೆಂಗಳೂರು | ಗಾಂಜಾ ಮಾರಾಟ ಆರೋಪ ; ಮೂವರು ಮಹಿಳೆಯರ ಬಂಧನ

Date:

  • 7.9 ಕೆ.ಜಿ ಗಾಂಜಾ ಮತ್ತು ₹4 ಸಾವಿರ ನಗದು ಜಪ್ತಿ ಮಾಡಿದ ಪೊಲೀಸರು
  • ಪರಾರಿಯಾದ ಆರೋಪಿ ದರ್ಶನ್ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿರುವ ಪೊಲೀಸರು

ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಮಹಿಳೆಯರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ನಗರದ ಐಟಿಸಿ ಕಾಲೋನಿಯ ನಿವಾಸಿಗಳಾದ ಪ್ರೇಮಾ, ಸುನೀತ ಹಾಗೂ ಮುತ್ತ್ಯಾಲಮ್ಮ ಬಂಧಿತ ಆರೋಪಿಗಳು. ಇವರು ಹೊರ ರಾಜ್ಯದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಅವರಿಂದ, 7.9 ಕೆ.ಜಿ ಗಾಂಜಾ ಮತ್ತು ₹4 ಸಾವಿರ ನಗದು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೇಮಾ ಮತ್ತು ಸುನೀತ ಮೂಲತಃ ಜಾರ್ಖಂಡ್‌ನವರಾಗಿದ್ದಾರೆ. ಅವರು ಕಳೆದ ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಮುತ್ಯಾಲಮ್ಮ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು. ಆಗಾಗ ಜಾರ್ಖಂಡ್‌ಗೆ ಹೋಗಿ ಬರುತ್ತಿದ್ದ ಇಬ್ಬರೂ, ಗಾಂಜಾವನ್ನು ತಂದು, ಮುತ್ಯಾಲಮ್ಮ ಮತ್ತು ಆಕೆಯ ಮಗ ದರ್ಶನ್ ನೆರವಿನಿಂದ ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಬ್ಬರೂ ಮಹಿಳೆರಿಂದ ಮುತ್ಯಾಲಮ್ಮ ಬಾಡಿಗೆ ಪಡೆಯುತ್ತಿರಲಿಲ್ಲ. ಬದಲಾಗಿ ಗಾಂಜಾ ಪಡೆಯುತ್ತಿದ್ದರು. ಅದನ್ನು ಮಾರಿ, ಹಣ ಸಂಪಾದಿಸುತ್ತಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಸಕರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ; ಅಧಿಕಾರಿಗಳ ಅಮಾನತು

ಸದ್ಯ, ಮೂವರು ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ದರ್ಶನ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...