ಬೈಕ್ ಅಪಘಾತದಿಂದ ಗಾಯಗೊಂಡಿದ್ದ ವೃದ್ಧ ಸಾವು; ನಿಮ್ಹಾನ್ಸ್‌ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದ ಕುಟುಂಬಸ್ಥರು

Date:

  • ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಬೆಡ್‌ ಇಲ್ಲವೆಂಬ ಕಾರಣ ನೀಡಿ ವೈದ್ಯರು ಚಿಕಿತ್ಸೆ ನಿರಾಕರಿಸಿದ್ದರು
  • ಆಸ್ಪತ್ರೆಯ ಶುಲ್ಕ ಪಾವತಿಸಿದ ವಿಲ್ಸನ್​ ಗಾರ್ಡನ್​ ಸಂಚಾರ ಠಾಣೆಯ ಸಿಬ್ಬಂದಿ ಪ್ರಸನ್ನಕುಮಾರ್

ಬೈಕ್ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ್ದ ವೃದ್ಧ ಮೃತಪಟ್ಟಿದ್ದು, ನಿಮ್ಹಾನ್ಸ್​ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವಿಲ್ಸನ್​ ಗಾರ್ಡನ್​ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ್​(60) ಸಾವನ್ನಪ್ಪಿದ ವ್ಯಕ್ತಿ. ಇವರು ಮೂಲತಃ ಬಳ್ಳಾರಿಯವರು. ಮೇ 1ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದುಕೊಂಡು ಹೋಗುವಾಗ ಬೈಕ್​ ಡಿಕ್ಕಿಯಾಗಿ ಗಾಯಗೊಂಡಿದ್ದರು. ಈ ಘಟನೆ ಬೆಂಗಳೂರಿನ ಅಶೋಕ ಪಿಲ್ಲರ್​ ಬಳಿ ನಡೆದಿದೆ.

ಅಸ್ವಸ್ಥರಾದ ಇವರನ್ನು ಕುಟುಂಬಸ್ಥರು ನಿಮ್ಹಾನ್ಸ್‌ ಆಸ್ಪತ್ರೆಗೆ ಸೇರಿಸಲು ತೆರಳಿದ್ದರು. ಆದರೆ, ಆ ಆಸ್ಪತ್ರೆಯಲ್ಲಿ ಬೆಡ್‌ ಇಲ್ಲವೆಂಬ ಕಾರಣ ನೀಡಿ ವೈದ್ಯರು ಚಿಕಿತ್ಸೆ ನಿರಾಕರಿಸಿದ್ದರು. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಗಣೇಶ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬೈಕ್​ನಲ್ಲಿದ್ದ ಇಬ್ಬರು ಸವಾರರಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆಗೆ ಯತ್ನ; ಟ್ವೀಟ್‌ನಲ್ಲಿ ಘಟನೆ ವಿವರಿಸಿದ ವ್ಯಕ್ತಿ!

ಗಣೇಶ್ ಅವರಿಗೆ ಅಪಘಾತ ಸಂಭವಿಸಿದ ಸಮಯದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲು 108ಗೆ ಕರೆ ಮಾಡಲಾಗಿದೆ. ಆದರೆ, ಯಾವುದೇ ಸ್ಪಂದನೆ ಸಿಗದ ಕಾರಣ 3 ಗಂಟೆಗಳ ಬಳಿಕ ಖಾಸಗಿ ಆಂಬುಲೆನ್ಸ್‌ನಲ್ಲಿ ಗಾಯಾಳುವನ್ನು ಕರೆದುಕೊಂಡು ಹೋಗಲಾಯಿತು. ಆದರೆ, ನಿಮ್ಹಾನ್ಸ್‌ನಲ್ಲಿ ವೈದ್ಯರು ಪರಿಸ್ಥಿತಿ ನೋಡಿ ಗಾಯಾಳುವನ್ನು ಅಡ್ಮಿಟ್‌ ಮಾಡಿಕೊಳ್ಳದೇ, ಬೆಡ್‌ ಇಲ್ಲವೆಂದು ಕಾರಣ ನೀಡಿ, ಚಿಕಿತ್ಸೆ ನೀಡಿಲ್ಲ. ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ನೀಡಿದ್ದರೆ ಗಣೇಶ್ ಬದುಕುಳಿಯುತ್ತಿದ್ದರು ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಗಣೇಶ್​ ಕೊನೆಯುಸಿರೆಳೆದಿದ್ದಾರೆ. ಖಾಸಗಿ ಆಸ್ಪತ್ರೆಯ ಬಿಲ್​ ₹12,000 ಕಟ್ಟುವಂತೆ ಸಿಬ್ಬಂದಿ ತಿಳಿಸಿದ್ದಾರೆ. ಮೃತಪಟ್ಟ ವೃದ್ಧ ಗಣೇಶ್​ ಕುಟುಂಬದ ಬಳಿ ಹಣವಿಲ್ಲದೆ ಪರದಾಡಿದ್ದಾರೆ. ಈ ವೇಳೆ, ವಿಲ್ಸನ್​ ಗಾರ್ಡನ್​ ಸಂಚಾರ ಠಾಣೆಯ ಸಿಬ್ಬಂದಿ ಪ್ರಸನ್ನಕುಮಾರ್ ಎಂಬುವವರು ಆಸ್ಪತ್ರೆಯ ಶುಲ್ಕವನ್ನು ಪಾವತಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...