ಬೆಂಗಳೂರು | ಗಲ್ಲಾ ಪೆಟ್ಟಿಗೆಯಲ್ಲಿದ್ದ ₹2.50 ಲಕ್ಷ ನಗದು ಕದ್ದ ಲಾಡ್ಜ್‌ನ ಉದ್ಯೋಗಿ

Date:

ಬೆಂಗಳೂರಿನ ಗಾಂಧಿನಗರದ ಎಸ್‌.ಸಿ.ರಸ್ತೆಯ ಶ್ರೀಹರಿ ಪ್ರೆಸೆಂಟಾ ಲಾಡ್ಜ್‌ನ ಉದ್ಯೋಗಿ ಗಲ್ಲಾ ಪೆಟ್ಟಿಗೆಯಲ್ಲಿದ್ದ ₹2.50 ಲಕ್ಷ ನಗದು ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.

ಉಪ್ಪಾರಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಳ್ಳರು ಕಳ್ಳತನ ಮಾಡುವ ವೇಳೆ ಕ್ಯಾಶಿಯರ್ ಕೌಂಟರ್‌ನಲ್ಲಿದ್ದ ಸಿಸಿಟಿವಿ ಕ್ಯಾಮರಾಗಳನ್ನು ಆಫ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

“ಬೆಂಗಳೂರಿನ ಗಾಂಧಿನಗರದ ಎಸ್‌.ಸಿ.ರಸ್ತೆಯ ಶ್ರೀಹರಿ ಪ್ರೆಸೆಂಟಾ ಲಾಡ್ಜ್‌ನಲ್ಲಿ ಮೊಹಮ್ಮದ್‌ ಮಿದಲಾಜ್‌ ಎಂಬುವವರು ಕಳೆದ ಒಂದೂವರೆ ವರ್ಷದಿಂದ ಕ್ಯಾಶಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಜು.24ರಂದು ಬೆಳಗ್ಗೆ 9.30ಕ್ಕೆ ಲಾಡ್ಜ್‌ನ ಸಿಸಿಟಿವಿ ಕ್ಯಾಮರಾ ಆಫ್‌ ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿದ್ದ ₹2.50 ಲಕ್ಷ ನಗದು ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಅಲ್ಲದೇ, ಈತ ತನ್ನ ಮೊಬೈಲ್‌ ಸ್ವಿಚ್‌ಆಫ್‌ ಮಾಡಿಕೊಂಡಿದ್ದಾನೆ” ಎಂದು ಲಾಡ್ಜ್‌ನ ಮ್ಯಾನೇಜರ್‌ ಮೊಹಮ್ಮದ್‌ ಸರ್ಫರಾಜ್‌ ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಶಿಯರ್‌ ಮೊಹಮ್ಮದ್‌ ಮಿದಲಾಜ್‌ (29) ಎಂಬಾತನ ವಿರುದ್ಧ ಲಾಡ್ಜ್‌ನ ಮ್ಯಾನೇಜರ್‌ ಮೊಹಮ್ಮದ್‌ ಸರ್ಫರಾಜ್‌ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾದಚಾರಿ ಸ್ಥಳ ಅತಿಕ್ರಮಣ ತೆರವು; 1.5 ಸಾವಿರ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ

ಲಾಡ್ಜ್‌ನ ಮ್ಯಾನೇಜರ್‌ ಮೊಹಮ್ಮದ್‌ ಸರ್ಫರಾಜ್‌ ನೀಡಿದ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...