ಬೆಂಗಳೂರು | ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಕಾಮುಕನ ಬಂಧನ

Date:

  • ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಸಂತ್ರಸ್ತೆಯ ತಾಯಿ
  • ನಿರ್ಮಾಣ ಹಂತದ ಕಟ್ಟಡದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಆರೋಪಿ

ಮನೆಯಲ್ಲಿ ಒಬ್ಬಂಟಿಯಾಗಿದ್ದ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಕಾಮುಕನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇಬ್ರಾಹಿಂ ಬಾಷಾ ಬಂಧಿತ ವ್ಯಕ್ತಿ. ಈತನು ಮೂಲತಃ ತಮಿಳುನಾಡಿನವನು. ನಗರದ ಕೊಟ್ಟಿಗೆಪಾಳ್ಯ ಸಮೀಪದ ಶ್ರೀಗಂಧ ಕಾವಲುನಲ್ಲಿ ನೆಲೆಸಿದ್ದನು. ‘ಡಿ’ ಗ್ರೂಪ್‌ ಲೇಔಟ್‌ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಈತ ಗಾರೆ ಕೆಲಸ ಮಾಡುತ್ತಿದ್ದನು.

ಸಂತ್ರಸ್ತೆ ಆಕೆಯ ತಾಯಿಯ ಜತೆಗೆ ಕೊಟ್ಟಿಗೆಪಾಳ್ಯ ಸಮೀಪ ನೆಲೆಸಿದ್ದಳು. ಆಕೆಯ ತಾಯಿ ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೆಲಸಕ್ಕೆ ತೆರಳುವಾಗ ಮಗಳನ್ನು ಮನೆಯಲ್ಲಿ ಒಬ್ಬಂಟಿಯಾಗಿ ಬಿಟ್ಟು ತಾಯಿ ಕೆಲಸಕ್ಕೆ ಹೋಗುತ್ತಿದ್ದರು. ಬಿಡುವಿನ ಸಮಯದಲ್ಲಿ ಮನೆಗೆ ಬಂದು ಮಗಳನ್ನು ನೋಡಿಕೊಂಡು ಹೋಗುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯೂ ಅದೇ ಪ್ರದೇಶದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದನು. ಯುವತಿಯನ್ನು ನೋಡಿದ್ದನು. ಜೂನ್‌ 22ರಂದು ಎಂದಿನಂತೆ ತಾಯಿ ಮಗಳನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ತೆರಳಿದ್ದ ವೇಳೆ, ಯುವತಿ ಒಬ್ಬಳೇ ಇರುವುದನ್ನು ಗಮನಿಸಿದ ಆರೋಪಿಯು ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದನು.

ಈ ಸುದ್ದಿ ಓದಿದ್ದೀರಾ? 500 ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದ ತಹಶೀಲ್ದಾರ್ ಅಜಿತ್ ರೈ 7 ದಿನ ಪೊಲೀಸ್ ವಶಕ್ಕೆ

ಈ ವೇಳೆ, ಸಂತ್ರಸ್ತೆ ಬಲವಾಗಿ ವಿರೋಧಿಸಿದ್ದಾಳೆ. ಕೋಪದಿಂದ ಯುವತಿ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿಯಾಗಿದ್ದನು. ಕೆಲ ಹೊತ್ತಿನ ಬಳಿಕ ಮನೆಗೆ ಮರಳಿದ ತಾಯಿ ಬಳಿ ಸಂತ್ರಸ್ತೆ ನೋವು ತೋಡಿಕೊಂಡಿದ್ದಳು.

ಈ ಬಗ್ಗೆ ಸಂತ್ರಸ್ತೆ ತಾಯಿ ನೀಡಿದ ದೂರಿನ ಮೇರೆಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...