ಬೆಂಗಳೂರು | ಕಿಚಾಯಿಸಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿದ ಆರೋಪಿಗಳ ಬಂಧನ

Date:

ಪಾರ್ಟಿ ಮಾಡುತ್ತಿದ್ದಾಗ ಮಾತಿನ ನಡುವೆ ಕಿಚಾಯಿಸಿದ್ದಕ್ಕೆ ಸ್ನೇಹಿತನನ್ನೆ ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಲಕ್ಷ್ಮಣ್ ಮಾಂಜಿ (22) ಹತ್ಯೆಯಾದ ವ್ಯಕ್ತಿ. ಜಗದೇವ್ ಮತ್ತು ಚಂದನ್ ಕುಮಾರ್ ಬಂಧಿತರು. ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾಲಸನಹಳ್ಳಿಯ ಖಾಲಿ ಜಾಗದ ಪೊದೆಗಳ ನಡುವೆ ನ.16 ರಂದು ಶವ ಪತ್ತೆಯಾಗಿತ್ತು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ?

ಕೊಲೆಯಾದ ಮಾಂಜಿ ಮತ್ತು ಇಬ್ಬರು ಆರೋಪಿಗಳು ಬೆಂಗಳೂರಿಗೆ ಕೂಲಿ ಕೆಲಸ ಅರಸಿ ಬಂದಿದ್ದರು. ನಗರದ ಭೈರತಿಯಲ್ಲಿ ವಾಸವಾಗಿದ್ದರು. ಈ ಮೂವರು ಮೂಲತಃ ಜಾರ್ಖಂಡದವರು.

ಕೊಲೆಯಾದ ಲಕ್ಷ್ಮಣ ಯಾವಾಗಲೂ ಮಾತಿನ ನಡುವೆ ಗೆಳೆಯರ ಕಾಲು ಎಳೆದು ಮಾತಾಡುವ ಸ್ವಭಾವ ಹೊಂದಿದ್ದನು. ನ.16 ರಂದು ಮೂವರು ಸ್ನೇಹಿತರು ಸೇರಿ ಪಾರ್ಟಿಗೆ ಮಾಡುತ್ತಿದ್ದರು.

ಈ ವೇಳೆ, ಲಕ್ಷ್ಮಣ ಇಬ್ಬರು ಸ್ನೇಹಿತರನ್ನು ಕಿಚಾಯಿಸಿದ್ದನು. ಈ ವಿಚಾರವಾಗಿ ಮೂವರ ನಡುವೆ ಜಗಳವಾಗಿತ್ತು. ಬಳಿಕ, ಆರೋಪಿಗಳು ಲಕ್ಷ್ಮಣನನ್ನು ಖಾಲಿ ಜಾಗವೊಂದಕ್ಕೆ ಕರೆದುಕೊಂಡು ಹೋಗಿ ಇಟ್ಟಿಗೆಯಿಂದ ಆತನ ತಲೆಗೆ ಹೊಡೆದು ಕೊಲೆ ಮಾಡಿ ಜಾರ್ಖಂಡ್‌ಗೆ ಪರಾರಿಯಾಗಲು ಯತ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶುಲ್ಕ ತಪ್ಪಿಸಲು ಹೋಗಿ ಟೋಲ್ ಸಿಬ್ಬಂದಿಗೆ ಕಾರು ಗುದ್ದಿದ ಚಾಲಕ

ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಕೊತ್ತನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶ್ವಥ್ ನಾರಾಯಣಸ್ವಾಮಿ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ರೈಲಿನ ಮೂಲಕ ಪರಾರಿಯಾಗಲು ಯತ್ನಿಸುತ್ತಿದ್ದ ಜಗದೇವ್ ಹಾಗೂ ಚಂದನ್ ಕುಮಾರ್​ನನ್ನು ಬಂಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...