ಬೆಂಗಳೂರು | ಕಾರು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನ; ಮೂವರ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಬೈಕ್‌ಗೆ ಢಿಕ್ಕಿ ಹೊಡೆದಿದ್ದೀರಿ’ ಎಂದು ಕಾರನ್ನು ಅಡ್ಡಗಟ್ಟಿ ಸುಲಿಗೆ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ, ನಗರದ ಸರ್ಜಾಪುರ-ಅತ್ತಿಬೆಲೆ ರಸ್ತೆಯಲ್ಲಿ ಟೆಕ್ಕಿಯೊಬ್ಬರ ಕಾರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನಿಸಿದ ಮೂವರನ್ನು ಬೆಂಗಳೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಚರಣ್ ಪಾಲ್ ಸಿಂಗ್ ಟೆಕ್ಕಿ. ಇವರು ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾನುವಾರ ಸಾಯಂಕಾಲ ಬೆಂಗಳೂರಿನ ಸರ್ಜಾಪುರ-ಅತ್ತಿಬೆಲೆ ರಸ್ತೆಯಲ್ಲಿ ಕಾರಿನಲ್ಲಿ ಸಹೋದ್ಯೋಗಿಗಳ ಜತೆಗೆ ತೆರಳುತ್ತಿದ್ದರು.

ಈ ವೇಳೆ, ಸ್ಕೋಟರ್‌ನಲ್ಲಿ ಬಂದ ನಾಲ್ವರು ಕಿಡಿಗೇಡಿಗಳು ‘ನಮ್ಮ ಬೈಕ್​ಗೆ ಡಿಕ್ಕಿ ಹೊಡೆದಿದ್ದೀರಿ, ಹಣ ನೀಡಿ’ ಎಂದು  ಕಾರ್‌ನ್ನು ಅಡ್ಡಗಟ್ಟಿ ಹಣ ನೀಡುವಂತೆ ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಮಯದಲ್ಲಿ ಚರಣ್ ಸಿಂಗ್ ಹಾಗೂ ಸಹೋದ್ಯೋಗಿಗಳು ಕಾರಿನಲ್ಲಿಯೇ ಕುಳಿತಿದ್ದರು. ಚರಣ್ ಅವರು ನಾವು ಯಾವುದೇ ವಾಹನಕ್ಕೆ ಢಿಕ್ಕಿ ಹೊಡೆದಿಲ್ಲ ಹಣ ನೀಡುವುದಿಲ್ಲ ಎಂದು ಹೇಳಿದರೂ ಕೇಳದ ನಾಲ್ವರು ಕಿಡಿಗೇಡಿಗಳು ಕಾರಿನ ಗಾಜನ್ನು ಓಡೆದು ಬೆದರಿಕೆ ಹಾಕಲು ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೇವಾಲಯಗಳಲ್ಲಿ ಜ.10 ರಿಂದ ವಸ್ತ್ರಸಂಹಿತೆ ಜಾರಿ

ಕಾರು ಮುಂದೆ ತೆರಳದಂತೆ ಓರ್ವ ಕಿಡಿಗೇಡಿ ವಾಹನದ ಮುಂದೆ ನಿಂತರೇ, ಮತ್ತೋರ್ವ ಕಿಟಕಿಯ ಬಳಿ ಬಂದು ಬೆದರಿಕೆ ಹಾಕುತ್ತಿದ್ದನು. ಚರಣ ಅವರು ಭಯದಿಂದ ಕಾರನ್ನು ಚಾಲನೆ ಮಾಡಿ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಈ ವೇಳೆ, ಆರೋಪಿಗಳು ಸಹ ವಾಹನವನ್ನು ಹಿಂಬಾಲಿಸಿದ್ದಾರೆ. ಇಡೀ ಘಟನೆ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಬಗ್ಗೆ ಸಾಫ್ಟ್‌ವೇರ್ ಎಂಜಿನಿಯರ್ ಚರಣ್ ಪಾಲ್ ಸಿಂಗ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವು ಜನ ಕಮೆಂಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...