ಬೆಂಗಳೂರು | ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಸವಾರರ ಬಂಧನ

Date:

  • ಬಂಧಿತರಿಂದ ಮೂರು ದ್ವಿಚಕ್ರ ವಾಹನ ವಶ
  • ಆರ್‌ಸಿ ಮತ್ತು ಚಾಲನಾ ಪರವಾನಗಿ ರದ್ದು

ರಾಜ್ಯ ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಗಳು ಸೇರಿದಂತೆ ಹಲವೆಡೆ ಬೈಕ್ ಸ್ಟಂಟ್‌ ಮತ್ತು ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ರಸ್ತೆಯಲ್ಲಿ ಸಾಹಸ ಪ್ರದರ್ಶಿಸುತ್ತಿದ್ದ ಇಬ್ಬರು ಬೈಕ್ ಸವಾರರನ್ನು ಬೆಂಗಳೂರು ಸಂಚಾರಿ ಪೊಲೀಸರು ಬಂಧಿಸಿದ್ದಾರೆ.

ರಸ್ತೆಗಳಲ್ಲಿ ಬೈಕ್ ಸ್ಟಂಟ್ ಮಾಡುವ ಮೂಲಕ ಇತರೆ ವಾಹನ ಸವಾರರಿಗೆ ಅಪಾಯ ತಂದೊಡ್ಡುವ ವಾಹನ ಸವಾರರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ದು, ಪಶ್ಚಿಮ ವಿಭಾಗದ ಸಂಚಾರಿ ವಿಶೇಷ ತಂಡ ಇಬ್ಬರನ್ನು ಬಂಧಿಸಿ ಅವರಿಂದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ಪ್ರಕರಣದ ಮೂರನೇ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಬಂದ ದೂರಿನ ಆಧಾರದ ಮೇಲೆ ವಿಶೇಷ ತಂಡವು ಮಾಗಡಿ ರಸ್ತೆ ಮತ್ತು ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ದರ್ಶನ್ ಗೌಡ (19) ಮತ್ತು ಅವರ ಸಹಚರ ಅಭಿಷೇಕ್ ಗೌಡ (21) ಅವರನ್ನು ಪತ್ತೆ ಮಾಡಿ, ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಬಂಧಿತರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಆರ್‌ಸಿ ಮತ್ತು ಚಾಲನಾ ಪರವಾನಗಿಯನ್ನು ಅಮಾನತುಗೊಳಿಸುವಂತೆ ಆರ್‌ಟಿಒ ಅಧಿಕಾರಿಗಳಿಗೆ ವರದಿ ಕಳುಹಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೈಕ್ ಸ್ಟಂಟ್ ಮಾಡುವ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಕುವ ಬೈಕ್ ಸವಾರರ ಮೇಲೆ ನಿಗಾ ಇಡಲು ಸಂಚಾರ ಪೊಲೀಸರು ಪ್ರತಿ ವಿಭಾಗದಲ್ಲಿ ವಿಶೇಷ ತಂಡಗಳನ್ನು ರಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ: ರಾಮಲಿಂಗಾರೆಡ್ಡಿ

ಅಪಾಯಕಾರಿ ಡ್ರೈವಿಂಗ್ ಮತ್ತು ಬೈಕ್ ಸ್ಟಂಟ್ ಪ್ರದರ್ಶನದ ಮೇಲಿನ ಶಿಸ್ತುಕ್ರಮವು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಂಟಾಗುವ ಮಾರಣಾಂತಿಕ ಅಪಘಾತಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...