ಬೆಂಗಳೂರು | ಕರ್ತವ್ಯಲೋಪ ಆರೋಪದಡಿ ಅಶೋಕನಗರ ಇನ್ಸ್‌ಪೆಕ್ಟರ್ ಅಮಾನತು

Date:

  • ಸಿಸಿಬಿ ದಾಳಿ ವೇಳೆ 54 ಜನ ಗ್ರಾಹಕರು ವಶಕ್ಕೆ, 19 ಯುವತಿಯರ ರಕ್ಷಣೆ
  • ಕರ್ತವ್ಯಲೋಪ ಕಂಡುಬಂದಿದ್ದರಿಂದ ಇನ್ಸ್‌ಪೆಕ್ಟರ್ ಅಮಾನತು

ಕಳೆದ ಹಲವು ದಿನಗಳಿಂದ ಅಶೋಕ್‌ನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಕರ್ತವ್ಯ ನಿರ್ವಹಿಸದೆ ನಿರ್ಲಕ್ಷ್ಯ ವಹಿಸಿದ ಆರೋಪದಡಿ ಠಾಣೆಯ ಇನ್ಸ್‌ಪೆಕ್ಟರ್ ಶ್ರೀಕಾಂತ್ ಎಫ್ ತೋಟಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ ಆದೇಶ ಹೊರಡಿಸಿದ್ದಾರೆ.

ಹಲವು ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಇನ್ಸ್‌ಪೆಕ್ಟರ್ ಶ್ರೀಕಾಂತ್ ಕ್ರಮಕೈಗೊಳ್ಳದ ಬಗ್ಗೆ ಸಿಸಿಬಿ ವರದಿ ನೀಡಿತ್ತು. ವರದಿ ಆಧರಿಸಿ ತನಿಖೆ ನಡೆಸಿ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ಅವರು ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ ವರದಿ ನೀಡಿದ್ದರು. 

ನಗರದ ನಾನಾ ಸ್ಥಳಗಳಲ್ಲಿ ಖಾಸಗಿ ಹೋಟೆಲ್‌ಗಳು, ಬಾರ್‌ಗಳು, ಪಬ್‌ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಅಶೋಕ್‌ ನಗರ ಠಾಣಾ ವ್ಯಾಪ್ತಿಯ ‘ದಿ ಪ್ರೈಡ್’ ಹೋಟೆಲ್ ಮೇಲೆ ಸಿಸಿಬಿ ತಂಡ ಇತ್ತೀಚೆಗೆ ದಾಳಿ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಳಿ ವೇಳೆ, ರಾತ್ರಿ ಅವಧಿ ಮೀರಿ ಪಾರ್ಟಿ ಮಾಡುತ್ತಿದ್ದರು, ಆದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೋಟೆಲ್‌ನಲ್ಲಿ ಯುವತಿಯರನ್ನು ಕರೆತಂದು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಹೊರ ರಾಜ್ಯದ ಯುವತಿಯರಿಂದ ಗ್ರಾಹಕರಿಗೆ ಲೈಂಗಿಕ ಪ್ರಚೋದನೆ ನೀಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಿದ್ದರು. ಸಿಸಿಬಿ ದಾಳಿಯ ವೇಳೆ 54 ಜನ ಗ್ರಾಹಕರನ್ನು ವಶಕ್ಕೆ ಪಡೆದು 19 ಯುವತಿಯರನ್ನು ರಕ್ಷಿಸಲಾಗಿತ್ತು.  

ಈ ಸುದ್ದಿ ಓದಿದ್ದೀರಾ? ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ ಆಚರಣೆ ; ಗಣ್ಯರಿಂದ ಶುಭಾಶಯ

ವರದಿ ಪರಿಶೀಲಿಸಿ ಕರ್ತವ್ಯಲೋಪ ಕಂಡುಬಂದಿದ್ದರಿಂದ ಇನ್ಸ್‌ಪೆಕ್ಟರ್ ಶ್ರೀಕಾಂತ್ ತೋಟಗಿರನ್ನ ಅಮಾನತು ಮಾಡಿ ಪೊಲೀಸ್ ಕಮಿಷನರ್ ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...