ಬೆಂಗಳೂರು | ನೋಟ್ಸ್‌ ಕೇಳಲು ವಿದ್ಯಾರ್ಥಿನಿ ಜೊತೆ ಮಾತಾಡಿದ ವಿದ್ಯಾರ್ಥಿ; ಸಹಪಾಠಿಗಳಿಂದ ಹಲ್ಲೆ

Date:

  • ಬಾಲಕರ ವಿರುದ್ಧ ಬಾಲಾಪರಾಧ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲು
  • ಜಗಳ ಮಾಡುವ ವೇಳೆ ನಾಲ್ವರಿಗೆ ಬೈದು ಬುದ್ಧಿವಾದ ಹೇಳಿದ್ದ ದೈಹಿಕ ಶಿಕ್ಷಕಿ

ರಾಜಧಾನಿ ಬೆಂಗಳೂರಿನ ಶ್ರೀರಾಂಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಸಹಪಾಠಿಗಳು ಹಲ್ಲೆ ಮಾಡಿರುವ ಘಟನೆ ನಡೆದಿದೆ.

ನಗರದ ಮಾಗಡಿ ರೋಡ್ ನಿವಾಸಿ ಆದರ್ಶ್‌ (15) (ಹೆಸರು ಬದಲಾಯಿಸಲಾಗಿದೆ) ಹಲ್ಲೆಗೊಳಗಾದ ವಿದ್ಯಾರ್ಥಿ. ಈತನ ಸಹಪಾಠಿ ರೋಹನ್ (ಹೆಸರು ಬದಲಾಯಿಸಲಾಗಿದೆ) ಸೇರಿದಂತೆ ಇನ್ನಿತರರು ಹಲ್ಲೆ ಮಾಡಿದವರು.

ಜುಲೈ 27ರಂದು ಆದರ್ಶ್‌ ತನ್ನ ಸಹಪಾಠಿ ವಿದ್ಯಾರ್ಥಿನಿಯಿಂದ ನೋಟ್ಸ್‌ ಪಡೆಯುವ ವಿಚಾರವಾಗಿ ಆಕೆಯೊಂದಿಗೆ ಕೆಲ ನಿಮಿಷಗಳ ಕಾಲ ಮಾತನಾಡಿದ್ದಾನೆ. ಇದನ್ನು ತಪ್ಪಾಗಿ ಗ್ರಹಿಸಿದ ಸಹಪಾಠಿಗಳು ಆದರ್ಶ್‌ನೊಂದಿಗೆ ಗಲಾಟೆ ಆರಂಭಿಸಿದ್ದಾರೆ. ಈ ಗಲಾಟೆಯನ್ನು ಕಂಡ ದೈಹಿಕ ಶಿಕ್ಷಕಿ ಮಧ್ಯೆ ಪ್ರವೇಶಿಸಿ ಗಲಾಟೆ ಮಾಡಿದವರಿಗೆ ಬೈದು ಬುದ್ಧಿವಾದ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೋರ್ಟ್‌ ಆದೇಶ; ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್​ಐಆರ್ ದಾಖಲು

ಇಷ್ಟಕ್ಕೆ ಸುಮ್ಮನಾಗದ ಸಹಪಾಠಿಗಳು ಜುಲೈ 27ರಂದು ಮಧ್ಯಾಹ್ನ 3:45ರ ಸುಮಾರಿಗೆ ಆದರ್ಶ್‌ ಮನೆಗೆ ಹಿಂತಿರುಗುವ ವೇಳೆ ನಾಲ್ವರು ಯುವಕರು ಅಡ್ಡಗಟ್ಟಿ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಅದೇ ದಿನ ಆದರ್ಶ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಮನೆಗೆ ಬಂದಿದ್ದಾನೆ. ಇದನ್ನು ಕಂಡ ಆದರ್ಶನ ತಾಯಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ರೋಹನ್ ಮತ್ತು ಇತರ ಮೂವರು ಸಹಪಾಠಿಗಳು ಸೇರಿ ಆದರ್ಶ್‌ನನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ. ಇದರಿಂದ ಆದರ್ಶನ ಹಲ್ಲುಗಳು ಮುರಿದಿವೆ ಹಾಗೂ ಆದರ್ಶನ ಕಣ್ಣಿಗೆ ಪೆಟ್ಟಾಗಿದೆ. ವೈದ್ಯರ ಪ್ರಕಾರ ಆದರ್ಶನ ಕಣ್ಣಿಗೆ ಹಾನಿಯಾಗಿದೆ. ಆದರ್ಶ್‌ ಚಿಕಿತ್ಸೆ ಪಡೆಯುತ್ತಿದ್ದು, ಸುಮಾರು ಒಂದು ತಿಂಗಳ ಕಾಲ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ.

“ನಾಲ್ವರು ಬಾಲಕರ ವಿರುದ್ಧ ಬಾಲಾಪರಾಧ ನ್ಯಾಯ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...