ಬೆಂಗಳೂರು | ಶಾಲೆಗಳ ಸಮೀಪ ತಂಬಾಕು ಮಾರಾಟ ಮಾಡುತ್ತಿದ್ದ 186 ಅಂಗಡಿಗಳ ಮೇಲೆ ದಾಳಿ

Date:

  • ಪೊಲೀಸರಿಂದ ಶುಕ್ರವಾರ 81 ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ
  • ಅಂಗಡಿ ಮಾಲೀಕರಿಂದ ₹32,400 ದಂಡ ಸಂಗ್ರಹಿಸಿದ ಪೂರ್ವ ವಿಭಾಗದ ಪೊಲೀಸರು

ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದ 186 ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಬಿ ಎಂ ಲಕ್ಷ್ಮೀ ಪ್ರಸಾದ್ ಅವರ ಸೂಚನೆಯಂತೆ ದಾಳಿ ನಡೆಸಲಾಗಿದ್ದು, ತಂಬಾಕು ಉತ್ಪನ್ನಗಳ ಮಾರಾಟದ ಅಂಗಡಿಗಳ ವಿರುದ್ಧ ಪೊಲೀಸರು ವಿಶೇಷ ಅಭಿಯಾನ ನಡೆಸುತ್ತಿದ್ದಾರೆ. ಅದರಂತೆಯೇ ಇದೀಗ ನಗರದ ನಾನಾ ಭಾಗಗಳಲ್ಲಿ 186 ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.

ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ, 2003 (COTPA) ಅಡಿಯಲ್ಲಿ 242 ಪ್ರಕರಣಗಳನ್ನು ಪೋಲಿಸರು ದಾಖಲಿಸಿದ್ದು, ಅಂಗಡಿ ಮಾಲೀಕರ ವಿರುದ್ಧ 19 ಎಫ್‌ಐಆರ್‌ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ಈಶಾನ್ಯ ವಿಭಾಗದ ಪೊಲೀಸರು ಶುಕ್ರವಾರ 81 ಅಂಗಡಿಗಳ ಮೇಲೆ ದಾಳಿ ನಡೆಸಿದರು. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ ಅಡಿಯಲ್ಲಿ 72 ಪ್ರಕರಣಗಳನ್ನು ದಾಖಲಿಸಿದ್ದಾರೆ. ಎಂಟು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ನ್ಯಾಯಾಲಯದಲ್ಲಿ ಹಣ ಪಾವತಿಸುವಂತೆ ಪೊಲೀಸರು ಅಂಗಡಿ ಮಾಲೀಕರಿಗೆ ತಿಳಿಸಿದ್ದಾರೆ.

ಪೂರ್ವ ಪೊಲೀಸ್ ಉಪ ಆಯುಕ್ತರಾದ ಭೀಮಾಶಂಕರ ಎಸ್ ಗುಳೇದ್ ಅವರ ನೇತೃತ್ವದಲ್ಲಿ ಪೂರ್ವ ವಿಭಾಗದ ಪೊಲೀಸರು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಅಂಗಡಿಗಳಲ್ಲಿ ವಿಶೇಷ ಆಂದೋಲನ ನಡೆಸಿ ತಂಬಾಕು ಉತ್ಪನ್ನಗಳು ಮತ್ತು ಮಾದಕ ವಸ್ತುಗಳ ಮಾರಾಟವನ್ನು ಪರಿಶೀಲಿಸಿದರು. ಶನಿವಾರ ತಡರಾತ್ರಿಯವರೆಗೆ 105 ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದ್ದು, ಎರಡು ಪ್ರಕರಣಗಳು ದಾಖಲಾಗಿವೆ. ಪೂರ್ವ ವಿಭಾಗದ ಪೊಲೀಸರು ಶನಿವಾರ ತಮ್ಮ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 170 ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ ಪ್ರಕರಣಗಳು ದಾಖಲಾಗಿವೆ. 11 ಎಫ್‌ಐಆರ್‌ ದಾಖಲಾಗಿವೆ. ಅಂಗಡಿ ಮಾಲೀಕರಿಂದ ₹32,400 ದಂಡವನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಿಂಗಳೊಳಗೆ ಉಳಿದ 19 ‘ನಮ್ಮ ಕ್ಲಿನಿಕ್’ ಆರಂಭ

“ತನಿಖಾ ತಂಡಗಳು ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲ ಅಂಗಡಿಗಳ ಮೇಲೆ ದಾಳಿ ನಡೆಸಿವೆ. ಸಿಗರೇಟ್‌ ಹಾಗೂ ಇನ್ನಿತರ ತಂಬಾಕು ಉತ್ಪನ್ನಗಳನ್ನು ಹೊಂದಿದ್ದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ವಶಪಡಿಸಿಕೊಂಡ ವಸ್ತುಗಳನ್ನು ಜಪ್ತಿ ಮಾಡಿದ್ದೇವೆ. ಈಶಾನ್ಯ ವಿಭಾಗದ ಪೊಲೀಸರು ಆಯಾ ವಿಭಾಗಗಳಲ್ಲಿ ದಾಳಿ ನಡೆಸಿದರು. ಪ್ರತಿ ಪೊಲೀಸ್ ಠಾಣೆಗಳಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ” ಎಂದು ಪ್ರಸಾದ್ ಮಾಹಿತಿ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...