ಬೆಂಗಳೂರು | ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ಯತ್ನ; ಇಬ್ಬರ ವಿರುದ್ಧ ಎಫ್‌ಐಆರ್ ದಾಖಲು

Date:

ರಾಜ್ಯ ರಾಜಧಾನಿ ಬೆಂಗಳೂರಿನ ವಿಧಾನಸೌಧದ ಪೂರ್ವ ದ್ವಾರದ ಬಳಿ ಡ್ರೋನ್‌ ಹಾರಾಟ ನಡೆಸಲು ಯತ್ನಿಸಿದ ಇಬ್ಬರು ಯುವಕರ ವಿರುದ್ಧ ವಿಧಾನಸೌಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಶನಿವಾರ ಬೆಳಿಗ್ಗೆ 6:45ರ ಸುಮಾರಿಗೆ ಈ ಘಟನೆ ನಡೆದಿದೆ. ಇವೆಂಟ್ ಮ್ಯಾನೇಜ್​ಮೆಂಟ್‌ ಕೆಲಸ ಮಾಡುವ ಅರುಣ್​ ಮತ್ತು ವಿನೋದ್ ಎಂಬ ಯುವಕರ ವಿರುದ್ಧ ಅತಿಕ್ರಮ ಪ್ರವೇಶ ಮತ್ತು ನಿರ್ಲಕ್ಷ್ಯ ಆರೋಪದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸದ್ಯ ಇಬ್ಬರಿಗೂ ಠಾಣಾ ಜಾಮೀನು​​​ ನೀಡಿ ಕಳುಹಿಸಲಾಗಿದೆ.

“ಖಾಸಗಿ ಕಂಪನಿಯೊಂದರ 15 ವರ್ಷಗಳ ಸಂಭ್ರಮಾಚರಣೆ ಹಿನ್ನೆಲೆ, ಅರುಣ್​ ಮತ್ತು ವಿನೋದ್ ಇಬ್ಬರು ಯುವಕರು ವಿಧಾನಸೌಧದ ವಿಡಿಯೋ ಚಿತ್ರೀಕರಣಕ್ಕೆ ಬಂದಿದ್ದರು. ವಿಧಾನಸೌಧದಲ್ಲಿ ಡ್ರೋನ್ ಹಾರಿಸುವುದು ನಿರ್ಬಂಧಿಸಿರುವ ವಿಚಾರ ತಿಳಿಯದೆ ಯುವಕರು ಡ್ರೋನ್ ಮುಖಾಂತರ ಚಿತ್ರಿಕರಣಕ್ಕೆ ಮುಂದಾಗಿದ್ದರು” ಎಂದು ಪೊಲೀಸ್‌ ತನಿಖೆ ವೇಳೆ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...