ಬೆಂಗಳೂರು | ಗುದನಾಳದಲ್ಲಿಟ್ಟು ₹3 ಕೋಟಿ ಮೌಲ್ಯದ 5 ಕೆ.ಜಿ ಚಿನ್ನ ಸಾಗಣೆಗೆ ಯತ್ನ; ಜಪ್ತಿ

Date:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತುಗಳನ್ನು ಸಾಗಣೆ ಮಾಡುವ ಪ್ರಕರಣಗಳು ಹೆಚ್ಚಳವಾಗಿ ಕಂಡುಬರುತ್ತಿವೆ. ಅಕ್ರಮವಾಗಿ ಚಿನ್ನ, ಡ್ರಗ್ಸ್‌ ಸೇರಿದಂತೆ ಹಲವು ನಿರ್ಬಂಧಿತ ವಸ್ತುಗಳನ್ನು ಸಾಗಾಟ ಮಾಡಲು ದುಷ್ಕರ್ಮಿಗಳು ನಾನಾ ರೀತಿಯಲ್ಲಿ ಯತ್ನಿಸುತ್ತಿದ್ದಾರೆ.

ಪ್ಯಾಂಟ್ ಜೀಪ್, ಬ್ಲೌಸ್ ಸೇರಿದಂತೆ ಅನೇಕ ಅನ್ಯ ದಾರಿಗಳ ಮೂಲಕ ಅಕ್ರಮವಾಗಿ ವಸ್ತುಗಳನ್ನು ಸಾಗಿಸಲು ಪ್ರಯತ್ನಿಸುತ್ತಾರೆ. ಇದೀಗ ಬರೋಬ್ಬರಿ ₹3 ಕೋಟಿ ಮೌಲ್ಯದ 5 ಕೆಜಿ ಚಿನ್ನವನ್ನು ಗುದನಾಳದಲ್ಲಿ ಕ್ಯಾಪ್ಸುಲ್‌ ಮಾದರಿಯಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸಲು ಪ್ರಯತ್ನಿಸಿದ ಐವರು ಆರೋಪಿಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ. ಜತೆಗೆ ಆರೋಪಿಗಳಿಂದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಏರ್ ಕಸ್ಟಮ್ಸ್‌ ಅಧಿಕಾರಿಗಳು ನವೆಂಬರ್ 7 ಮತ್ತು 8 ರಂದು ಕುವೈತ್, ದುಬೈ, ಶಾರ್ಜಾ, ಅಬುಧಾಬಿ ಮತ್ತು ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡಿದ್ದಾರೆ. ಮಹಿಳೆಯರ ವ್ಯಾನಿಟ್ ಬ್ಯಾಗ್‌ನ ಹಿಡಿಕೆ ಮತ್ತು ಒಳಉಡುಪಿನ ಅಕ್ರಮವಾಗಿ ಸಾಗಾಟಣೆ ಮಾಡಲು ಯತ್ನಿಸಿದ್ದು, ಕೂಡಲೇ ಪ್ರಯಾಣಿಕರನ್ನು ವಶಕ್ಕೆ ಪಡೆದ ಅಧಿಕಾರಿಗಳು ತಪಾಸಣೆ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ: ಎಲ್ಲೆಲ್ಲಿ? ಇಲ್ಲಿದೆ ನೋಡಿ

ನವೆಂಬರ್‌ 8 ರಂದು ನಡೆದ ಮತ್ತೊಂದು ಪ್ರಕರಣದಲ್ಲಿ ಆರೋಪಿ ಪ್ಯಾಂಟ್‌ ಜಿಪ್‌ ಒಳಗಡೆ ₹18 ಲಕ್ಷ ಮೌಲ್ಯದ 284 ಗ್ರಾಂ ಚಿನ್ನವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ್ದನು. ಸದ್ಯ ಆರೋಪಿಯಿಂದ ಕಸ್ಟಮ್ಸ್‌ ಅಧಿಕಾರಿಗಳು ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...