ಬೆಂಗಳೂರು | ಕೂಲಿ ಕಾರ್ಮಿಕನ ಕತ್ತು ಸೀಳಿ ಬರ್ಬರ ಕೊಲೆ

Date:

  • ಮೇ 29ರಂದು ಜಗಳವಾಗಿ ಕೊಲೆಯಾಗಿರುವ ಶಂಕೆ
  • ಮೇ 30ರಂದು ಕೆರೆಯಲ್ಲಿ ಅಪರಿಚಿತ ಶವ ಪತ್ತೆ

ಬೆಂಗಳೂರಿನಲ್ಲಿ ಮೇ 29ರಂದು ಕೂಲಿ ಕಾರ್ಮಿಕನನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ವಿವಿಪುರಂ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಆನಂದ್ ಕೊಲೆಯಾದ ದುರ್ದೈವಿ. ಅವರು ಕೆ.ಆರ್‌ ಮಾರ್ಕೆಟ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಮೇ 29ರಂದು ಜಗಳವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಕೆ ಆರ್ ರಸ್ತೆಯ ಬಸ್ ನಿಲ್ದಾಣದ ಬಳಿ ಆನಂದ್​​​ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ವಿವಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಬಳಿಕ ಕೊಲೆಯ ಬಗ್ಗೆ ಕಾರಣ ತಿಳಿದು ಬರಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮರಗಳ ಗಣತಿಗೆ ಮುಂದಾದ ಬಿಬಿಎಂಪಿ

ಕೆರೆಯಲ್ಲಿ ತೇಲಿ ಬಂತು ಅಪರಿಚಿತ ವ್ಯಕ್ತಿಯ ಶವ

ಬೆಂಗಳೂರಿನ ಬ್ಯಾಡರಹಳ್ಳಿಯ ಹೇರೊಹಳ್ಳಿ ಕೆರೆಯಲ್ಲಿ ಮೇ 30ರಂದು ಬೆಳಿಗ್ಗೆ ಕೆರೆಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ.

ಬೆಳಗಿನ ಜಾವ ಕೆರೆಯ ದಂಡೆಯಲ್ಲಿ ವಾಯುವಿಹಾರ ನಡೆಸುತ್ತಿರುವವರು ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ಕೆರೆಯಲ್ಲಿ ಸಿಕ್ಕ ಮೃತ ಅಪರಿಚಿತ ವ್ಯಕ್ತಿಯ ಬಗ್ಗೆ ಇನ್ನೂ ತಿಳಿದಿಲ್ಲ. ಇತನು ಅಂದಾಜು 38-40ವರ್ಷದ ವ್ಯಕ್ತಿಯೆಂದು ಗುರುತಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...