ಬೆಂಗಳೂರು | ದಿನದ 24 ಗಂಟೆಯೂ ಹೋಟೆಲ್ ತೆರೆಯಲು ಅನುಮತಿ ನೀಡಿ ಎಂದ ಬಿಬಿಎಚ್ಎ

Date:

  • ರಾತ್ರಿ ಹೋಟೆಲ್ ತೆರೆಯುವುದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿ
  • ಸಂಘದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದಿನದ 24 ಗಂಟೆಯು ಹೋಟೆಲ್ ವ್ಯವಹಾರ ನಡೆಸಲು ಅನುಮತಿ ನೀಡಬೇಕೆಂದು ಬೃಹತ್ ಬೆಂಗಳೂರು ಹೋಟೆಲ್ ಸಂಘ (ಬಿಬಿಎಚ್‌ಎ) ಸರ್ಕಾರಕ್ಕೆ ಒತ್ತಾಯಿಸಿದೆ.

ಜೂನ್‌ 22ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಬೃಹತ್ ಬೆಂಗಳೂರು ಹೋಟೆಲ್ ಸಂಘದ ಅಧ್ಯಕ್ಷ ಪಿ.ಸಿ ರಾವ್ ನೇತೃತ್ವದ ನಿಯೋಗವು ಮನವಿಯನ್ನು ಸಲ್ಲಿಸಿದೆ.

ಈ ಬಗ್ಗೆ ಮಾತನಾಡಿದ ಬೃಹತ್ ಬೆಂಗಳೂರು ಹೋಟೆಲ್ ಸಂಘದ ಅಧ್ಯಕ್ಷ ಪಿ.ಸಿ ರಾವ್, “ಹೋಟೆಲ್ ವಲಯವನ್ನು ಕೈಗಾರಿಕೆ ಎಂದು ಮಾನ್ಯ ಮಾಡಬೇಕು. ಉದ್ಯಮಕ್ಕೆ ಸಿಂಗಲ್ ವಿಂಡೋ ವ್ಯವಸ್ಥೆ ಜಾರಿ ಮಾಡಬೇಕು ಎಂಬ ಬೇಡಿಕೆ ಈಡೇರಿಸುವುದರೊಂದಿಗೆ ಹೊಸ ಸರ್ಕಾರವು ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕೆಂದು ಒತ್ತಾಯಿಸಲಾಗಿದೆ. ಸಂಘದ ಮನವಿಗೆ ಉಪಮುಖ್ಯಮಂತ್ರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಿನದ 24 ಗಂಟೆಯೂ ಹೋಟೆಲ್ ತೆರೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿ ಇದೆ. ಆದರೆ, ಪೋಲಿಸ್ ಇಲಾಖೆ ಅವಕಾಶ ನೀಡುತ್ತಿಲ್ಲ. ರಾತ್ರಿ 1 ಗಂಟೆಯವರೆಗೆ ಮಾತ್ರ ಹೋಟೆಲ್ ತೆರೆಯಲು ಪೋಲಿಸ್ ಇಲಾಖೆ ಅವಕಾಶ ನೀಡಿದೆ. ಕೇರಳ, ದೆಹಲಿ, ತಮಿಳುನಾಡು, ಗುಜರಾತ್ ಮಾದರಿಯಲ್ಲಿ 24 ಗಂಟೆಯೂ ಹೋಟೆಲ್ ತೆರೆಯಲು ಅವಕಾಶ ನೀಡಬೇಕು” ಎಂದರು.

“ರಾಜಧಾನಿಯಲ್ಲಿ ಹಲವು ಜನ ಶಿಫ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಾರೆ. ಹಲವು ಜನರಿಗೆ ರಾತ್ರಿಯ ಆಹಾರದ ಅಗತ್ಯವಿದೆ. ಹೋಟೆಲ್‌ಗಳಲ್ಲಿ ಕುಡಿಯುವ ನೀರು, ಶೌಚಾಲಯ ಉಚಿತವಾಗಿ ಪೂರೈಸುತ್ತೇವೆ. ರಾತ್ರಿ ಹೋಟೆಲ್ ತೆರೆಯುವುದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ಪ್ರವಾಸೋದ್ಯಮಕ್ಕೂ ಹೆಚ್ಚು ಒತ್ತು ನೀಡಿದಂತಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಡೇ ಕೇರ್ ಸೆಂಟರ್‌ | ಚಿಕ್ಕ ಮಗು ಮೇಲೆ ಪದೇ ಪದೆ ಹಲ್ಲೆ ನಡೆಸಿದ ದೊಡ್ಡ ಮಗು

“ಹೋಟೆಲ್ ಸಂಘದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶೀಘ್ರದಲ್ಲೇ ಸಭೆ ಕರೆಯುವುದಾಗಿ ಹೇಳಿದ್ದಾರೆ” ಎಂದರು ಪಿ.ಸಿ.ರಾವ್ ತಿಳಿಸಿದರು.

ನಿಯೋಗದಲ್ಲಿ ಸಂಘದ ಕಾರ್ಯದರ್ಶಿ ವಿರೇಂದ್ರ ಕಾಮತ್, ಸಂತೋಷ್ ಪೈ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...