ಬೆಂಗಳೂರು | ಬಿಬಿಎಂಪಿ ಕಸ ಸಂಗ್ರಹಿಸುವ ಆಟೋ ಚಾಲಕನ ಮೇಲೆ ಹಲ್ಲೆ

Date:

  • ಮನೆಗಳ ಎದುರು ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಹಲ್ಲೆ ದೃಶ್ಯ ಸೆರೆ
  • ಗಂಭಿರವಾಗಿ ಗಾಯಗೊಂಡಿರುವ ಸತೀಶ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕಸ ಸಂಗ್ರಹಿಸುವ ಆಟೋ ಚಾಲಕ ಸತೀಶ್ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಜುಲೈ 2ರಂದು ನಗರದ ಕಾಟನಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಜಾಲಿ ಮೊಹಲ್ಲದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಕಸ್ತೂರಬಾ ನಗರದ ನಿವಾಸಿ ಸತೀಶ್(24) ಎಂಬುವವರು ಹಲ್ಲೆಗೊಳಗಾದವರು. ಎರಡು ಗುಂಪುಗಳು ಮಾರಕಾಸ್ತ್ರಗಳನ್ನು ಹಿಡಿದು ರಸ್ತೆಯಲ್ಲಿ ಪರಸ್ಪರ ಹಲ್ಲೆ ನಡೆಸುತ್ತಿರುವ ದೃಶ್ಯ ರಸ್ತೆ ಪಕ್ಕದ ಅಂಗಡಿ ಮತ್ತು ಮನೆಗಳ ಎದುರು ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಂಭೀರವಾಗಿ ಗಾಯಗೊಂಡಿರುವ ಸತೀಶ್ ಅವರನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

“ತನ್ನ ಸ್ನೇಹಿತ ಮತ್ತು ಇತರರು ಕಸದ ವಾಹನವನ್ನು ಚಲಾಯಿಸುತ್ತಿದ್ದಾಗ ಮಾರಕಾಸ್ತ್ರಗಳೊಂದಿಗೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಸತೀಶ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಎಮ್‌ಸಿ ಮೊದಲ ಮುಸ್ಲಿಂ ಮಹಿಳಾ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಡಾ. ಅಸಿಮಾ ಬಾನು

ಸತೀಶ್ ಅವರ ಸ್ನೇಹಿತರಾದ ರಾಮಮೂರ್ತಿ, ರಿತಿಕ್, ಮೋಹನ್ ರನ್ನು ಪೊಲೀಸರು ಬಂಧಿಸಿದ್ದಾರೆ.

“ದಾಳಿಕೋರರೊಂದಿಗೆ ಸತೀಶ್ ಗೆಳೆತನವಿತ್ತು. ಆದರೆ, ಅವರೊಂದಿಗೆ ಭಿನ್ನಾಭಿಪ್ರಾಯ ಬೆಳೆದು ದಾಳಿಗೆ ಕಾರಣವಾಗಿದೆ. ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಮತ್ತು ಕೊಲೆ ಯತ್ನದಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...