ಬೆಂಗಳೂರು | ಪಾದಚಾರಿ ಮಹಿಳೆ ಮೇಲೆ ಹರಿದ ಬಿಬಿಎಂಪಿ ಕಸದ ಲಾರಿ : ಸಾವು

Date:

  • ಹಲಸೂರು ಗೇಟ್ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ಚಿಕಿತ್ಸೆ ಫಲಕಾರಿಯಾಗದೇ ಕೆಲ ಗಂಟೆಗಳ ಬಳಿಕ ಸಾವನ್ನಪ್ಪಿದ ಮಹಿಳೆ

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ವಯೋವೃದ್ಧ ಪಾದಚಾರಿಯೊಬ್ಬರು ರಸ್ತೆ ದಾಟುತ್ತಿದ್ದಾಗ ಹಿಂಬದಿಯಿಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಕೋಡಿಗೆಹಳ್ಳಿಯ ಗಂಗಾ ಭವಾನಿ ರಸ್ತೆಯ ನಿವಾಸಿ ಮುನಿಯಮ್ಮ (61) ಎಂದು ಗುರುತಿಸಲಾಗಿದೆ. ಇವರು ವಿಧಾನಸೌಧದ ನಿವೃತ್ತ ‘ಡಿ’ ಗ್ರೂಪ್ ಉದ್ಯೋಗಿಯಾಗಿದ್ದರು. ಸೋಮವಾರ ಮಧ್ಯಾಹ್ನ 1.45 ರ ಸುಮಾರಿಗೆ ಹಡ್ಸನ್ ಸರ್ಕಲ್ ಬಳಿ ಮಹಿಳೆ ರಸ್ತೆ ದಾಟುತ್ತಿದ್ದಾಗ ಹಿಂಬದಿಯಿಂದ ಬಂದ ಬಿಬಿಎಂಪಿಗೆ ಸೇರಿದ ಕಸದ ಲಾರಿ ವೇಗವಾಗಿ ಡಿಕ್ಕಿ ಹೊಡೆದಿದೆ.

ಮಹಿಳೆಯ ಕಾಲುಗಳ ಮೇಲೆ ಲಾರಿ ಹರಿದ ಪರಿಣಾಮ ತೀವ್ರ ರಸ್ತಸ್ರಾವವಾಗಿದೆ. ಸಮೀಪದಲ್ಲಿದ್ದ ಕಾನ್‌ಸ್ಟೆಬಲ್ ಯೋಗೇಶ್ ಎಸ್, ದಾರಿಹೋಕರ ಸಹಾಯದಿಂದ ಮುನಿಯಮ್ಮ ಅವರನ್ನು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೆಲ ಗಂಟೆಗಳ ಬಳಿಕ ಮಹಿಳೆ ಕೊನೆಯುಸಿರೆಳೆದಿದ್ದಾಳೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಲಾರಿ ಜಪ್ತಿ ಮಾಡಿ ಚಾಲಕ ಶಿವಕುಮಾರನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಲಸೂರು ಗೇಟ್ ಸಂಚಾರ ಪೊಲೀಸರು ಐಪಿಸಿ ಸೆಕ್ಷನ್ 279 (ಅತಿವೇಗದ ಚಾಲನೆ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಟ್ರಕ್ ಚಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ವರ್ಷ ರೂ. 4,600 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲು ಗುರಿ ನಿಗದಿಪಡಿಸಿದ ಬಿಬಿಎಂಪಿ

ಬೆಂಗಳೂರು | ಬೈಕ್ ಡಿಕ್ಕಿಯಾಗಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸಾವು

ಬೆಂಗಳೂರಿನ ಹೆಸರಘಟ್ಟದಲ್ಲಿ ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.

22 ವರ್ಷದ ರಾಕೇಶ್ ಎಚ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇವರು ನಗರದ ಈಶಾನ್ಯ ಭಾಗದಲ್ಲಿರುವ ಖಾಸಗಿ ತಂತ್ರಜ್ಞಾನ ಸಂಸ್ಥೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ಟಿಬಿ ಕ್ರಾಸ್ ಬಳಿ ರಾಕೇಶ್ ಅವರು ಹೆಸರಘಟ್ಟದ ತಮ್ಮ ಮನೆಯಿಂದ ಕಾಲೇಜಿಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ ಎಂದು ಜಾಲಹಳ್ಳಿ ಸಂಚಾರ ಪೊಲೀಸರು ತಿಳಿಸಿದ್ದಾರೆ.

“ಮತ್ತೊಬ್ಬ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎರಡೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಎಫ್‌ಐಆರ್‌ ದಾಖಲಿಸಲಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...