ಬೆಂಗಳೂರು | ಪಾದಚಾರಿ ಮೇಲೆ ಹರಿದ ಬಿಬಿಎಂಪಿ ಕಸದ ಲಾರಿ; ಮಹಿಳೆಯ ಸ್ಥಿತಿ ಗಂಭೀರ

Date:

ಬೆಂಗಳೂರಿನ ಹಡ್ಸನ್ ವೃತ್ತದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆ ಕಾಲಿನ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿಯೊಂದು ಹರಿದಿದೆ.

ರಸ್ತೆ ದಾಟುತ್ತಿದ್ದಾಗ ಮಹಿಳೆಗೆ ಬಿಬಿಎಂಪಿ ಕಸದ ಲಾರಿ ಬಂದು ಡಿಕ್ಕಿ ಹೊಡೆದಿದೆ. ಈ ವೇಳೆ, ಕೆಳಗೆ ಬಿದ್ದ ಮಹಿಳೆಯ ಎರಡೂ ಕಾಲುಗಳ ಮೇಲೆ ಲಾರಿಯ ಚಕಗ್ರಗಳು ಹರಿದಿವೆ. ಇದರ ಪರಿಣಾಮ, ಆಕೆಯ ಎರಡೂ ಕಾಲುಗಳು ತೀವ್ರವಾಗಿ ಗಾಯಗೊಂಡಿವೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಹಲಸೂರು ಗೇಟ್ ಸಂಚಾರ ವ್ಯಾಪ್ತಿಯ ಹಡ್ಸನ್ ಸರ್ಕಲ್ ಬಳಿ ನಡೆದಿದೆ.

ಸ್ಥಳೀಯರು ಮಹಿಳೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಸಂಬಂಧ ಹಲಸೂರು ಗೇಟ್‌ ಸಂಚಾರ ಪೊಲೀಸ್‌ ಠಾಣೆ ಪೊಲೀಸರು ಬಿಬಿಎಂಪಿ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...