ಬೆಂಗಳೂರು | ಕರಗಕ್ಕೆ ಕರಗಿದ ಬಿಬಿಎಂಪಿ ಅನುದಾನ

Date:

  • ₹1.50 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದ ಬಿಬಿಎಂಪಿ
  • ಅನುದಾನ ಬಿಡುಗಡೆಗೆ ಏ.1ರಿಂದ ಆರ್ಥಿಕ ವರ್ಷ ಆರಂಭ ಎಂದು ಸಬೂಬು

ಈ ವರ್ಷ ಬೆಂಗಳೂರು ಧರ್ಮರಾಯಸ್ವಾಮಿಯ ಐತಿಹಾಸಿಕ ದ್ರೌಪದಿ ಕರಗ ಉತ್ಸವಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ₹50 ಲಕ್ಷ ಅನುದಾನ ಕಡಿತಗೊಳಿಸಿದೆ. ಈ ಹಿಂದೆ, ₹1.50 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಪಾಲಿಕೆ ಹೇಳಿತ್ತು. ಇದೀಗ, ₹1 ಕೋಟಿ ಅನುದಾನ ನೀಡಿದ್ದು, ಕೊನೆಯ ಹಂತದಲ್ಲಿ ಅನುದಾನ ಕಡಿತಗೊಳಿಸಿದೆ ಎಂದು ಕರಗೋತ್ಸವ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಅನುದಾನ ಕಡಿತದ ಬಗ್ಗೆ ಈ ದಿನ.ಕಾಮ್ ಜತೆಗೆ ಮಾತನಾಡಿದ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನ ಕಮಿಟಿ ಅಧ್ಯಕ್ಷ ಸತೀಶ್, “ಇಲ್ಲಿಯವರೆಗೂ 40 ಲಕ್ಷದ 30 ಸಾವಿರ ಹಣವನ್ನು ಬಿಬಿಎಂಪಿ ನೀಡಿದೆ. ಏಪ್ರಿಲ್ 1ರಿಂದ ಆರ್ಥಿಕ ವರ್ಷ ಆರಂಭವಾಗುತ್ತದೆ. ಹಾಗಾಗಿ, ಉಳಿದ ₹75 ಲಕ್ಷ ಏಪ್ರಿಲ್ ತಿಂಗಳು ಕಳೆದಾದ ಮೇಲೆ ಕೊಡುತ್ತೇವೆಂದು ಹೇಳಿದ್ದಾರೆ. ಇನ್ನೂ ಮೂರು ದಿನದಲ್ಲಿ ಕರಗ ಮಹೋತ್ಸವದ ಖರ್ಚು-ವೆಚ್ಚಗಳ ಲೆಕ್ಕ ಹಾಕಿ ಆಡಿಟ್ ವರದಿ ಮಾಡಿ ಬಿಬಿಎಂಪಿಗೆ ನೀಡುತ್ತೇವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...