ಬೆಂಗಳೂರು | ₹5 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಕಂದಾಯ ನಿರೀಕ್ಷಕ

Date:

  • ಪ್ರತಿ ಖಾತಾಗೆ ₹10 ಸಾವಿರದಂತೆ ಒಟ್ಟು ₹7,90 ಲಕ್ಷ ಹಣ ನೀಡುವಂತೆ ಬೇಡಿಕೆ
  • ಮುಕ್ತಾ ಡೆವಲಪರ್ಸ್‌ ಕಂಪನಿಯ ಮಾಲೀಕನಿಂದ ಲೋಕಾಯುಕ್ತ ಪೊಲೀಸರಿಗೆ ದೂರು

ಖಾಸಗಿ ರಿಯಲ್ ಎಸ್ಟೇಟ್ ಕಂಪನಿಗೆ ಖಾತಾ ಮಾಡಿಕೊಡಲು ₹5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಂದಾಯ ನಿರೀಕ್ಷಕರೊಬ್ಬರು ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ಬಿಬಿಎಂಪಿ ಕಂದಾಯ ನಿರೀಕ್ಷಕ ನಟರಾಜ್ ಹಾಗೂ ಮಧ್ಯವರ್ತಿ ಪವನ್ ಎಂಬುವವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಡಿಗೆಹಳ್ಳಿಯಲ್ಲಿ ಬೃಂದಾವನ ಅಪಾರ್ಟ್‌ಮೆಂಟ್ ಅನ್ನು ಮುಕ್ತಾ ಡೆವಲಪರ್ಸ್ ಕಂಪನಿ ನಿರ್ಮಾಣ ಮಾಡಿದೆ. ಈ ಬೃಂದಾವನದಲ್ಲಿ ಒಟ್ಟು 79 ಫ್ಲ್ಯಾಟ್‌ಗಳಿದ್ದು, ಫ್ಲ್ಯಾಟ್‌ಗಳ ಖಾತೆಗಾಗಿ ಕಂಪನಿ ಮಹದೇವಪುರ ವಲಯದ ಬಿಬಿಎಂಪಿ ಕಚೇರಿಗೆ ಅರ್ಜಿ ಸಲ್ಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಾತಾ ಮಾಡಿಕೊಡಲು ಬಿಬಿಎಂಪಿ ಕಂದಾಯ ನಿರೀಕ್ಷಕ ನಟರಾಜ್ ಪ್ರತಿ ಖಾತಾಗೆ ₹10 ಸಾವಿರದಂತೆ ಒಟ್ಟು ₹7,90 ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ನೇಹಿತನ ಜನ್ಮದಿನಾಂಕ ಹೇಳಲು ನಿರಾಕರಣೆ; ವಿದ್ಯಾರ್ಥಿ ಮೇಲೆ ಯುವತಿಯ ಗುಂಪಿನಿಂದ ಹಲ್ಲೆ

ಈ ಬಗ್ಗೆ ಮುಕ್ತಾ ಡೆವಲಪರ್ಸ್‌ ಕಂಪನಿಯ ಮಾಲೀಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಮಹದೇವಪುರ ಬಿಬಿಎಂಪಿ ಕಚೇರಿಯಲ್ಲಿ ಮುಂಗಡವಾಗಿ ₹5 ಲಕ್ಷ ಹಣ ಪಡೆಯುವ ವೇಳೆ ನಟರಾಜ್ ಹಾಗೂ ಪವನ್​​ ಲೋಕಾಯುಕ್ತ ಪೊಲೀಸರಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...