ಬೆಂಗಳೂರು | ಮುಕ್ತ ಕಾಲುದಾರಿ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರ ಪೊಲೀಸ್‌

Date:

  • ನಗರದಲ್ಲಿ ಅಕ್ರಮವಾಗಿ ಒತ್ತುವರಿಯಾದ ಪಾದಚಾರಿ ಮಾರ್ಗಗಳು
  • ಅಕ್ರಮವಾಗಿ ನಿಲುಗಡೆ ಮಾಡಿದ ವಾಹನ ಮತ್ತು ಅವಶೇಷಗಳ ತೆರವು

ಬೆಂಗಳೂರಿನ ಫುಟ್‌ಪಾತ್‌ಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡಿ, ಪಾದಚಾರಿಗಳ ಓಡಾಟಕ್ಕೆ ಅನುಕೂಲ ಮಾಡಿಕೊಡಲು ಬೆಂಗಳೂರು ಸಂಚಾರ ಪೊಲೀಸರು ಮುಂದಾಗಿದ್ದಾರೆ.

ಜುಲೈ 10ರಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರು ‘ಮುಕ್ತ ಕಾಲುದಾರಿ’ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

“ಬೆಂಗಳೂರಿನಲ್ಲಿ ಪಾದಚಾರಿಗಳು, ನಿರ್ಗತಿಕರು ಇತ್ತೀಚಿಗೆ ಅಪಘಾತಕ್ಕೆ ಈಡಾಗುತ್ತಿದ್ದರು. ಹಾಗಾಗಿ, ಬೆಳ್ಳಂಬೆಳಗ್ಗೆ ಸ್ಪೆಷಲ್ ಡ್ರೈವ್ ಮಾಡಿದ್ದಿವಿ. ಹಲವಾರು ನಿರ್ಗತಿಕರಿಗೆ ತಿಂಡಿ ಕೊಟ್ಟು ತಿಳಿವಳಿಕೆ ಹೇಳಿ ಭಿಕ್ಷುಕರ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಎಲ್ಲರೂ ಮನುಷ್ಯರೇ. ನಾವು ಮಾಡಿದ್ದು ಸರಿ ಅಂತ ನಮಗನಿಸ್ತಿದೆ ನಿಮ್ಗೆ?” ಎಂದು ಬೆಂಗಳೂರು ಸಂಚಾರ ಪೊಲೀಸ್‌ ಟ್ವೀಟ್‌ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

48 ಟ್ರಾಫಿಕ್ ಪೊಲೀಸ್ ಠಾಣೆಗಳಲ್ಲಿ ಪ್ರತಿ ದಿನವೂ ತಮ್ಮ ವ್ಯಾಪ್ತಿಗೆ ಬರುವ ಒಂದು ಫುಟ್‌ಪಾತ್ ಮೇಲೆ ಕೇಂದ್ರೀಕರಿಸಿ, ಅಕ್ರಮವಾಗಿ ನಿಲುಗಡೆ ಮಾಡಿದ ವಾಹನಗಳು ಮತ್ತು ಅವಶೇಷಗಳನ್ನು ತೆರವುಗೊಳಿಸುತ್ತಿದೆ.

ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಎಮ್ ಎನ್ ಅನುಚೇತ್ ಮಾತನಾಡಿ, “ಈ ಡ್ರೈವ್ ಚಾಲ್ತಿಯಲ್ಲಿರುವ ‘ಮುಕ್ತ ಕಾಲುದಾರಿ’ (ReclaimFootpaths) ಅಭಿಯಾನದ ಭಾಗವಾಗಿದೆ. ಇದನ್ನು ಇತರ ಅಭಿಯಾನಗಳೊಂದಿಗೆ ಏಕಕಾಲದಲ್ಲಿ ನಡೆಸಲಾಗುವುದು” ಎಂದರು.

“ಈ ಅಭಿಯಾನದಲ್ಲಿ ಫುಟ್‌ಪಾತ್‌ಗಳಲ್ಲಿ ಅಕ್ರಮವಾಗಿ ನಿಲುಗಡೆ ಮಾಡಿದ ವಾಹನಗಳನ್ನು ತೆರವುಗೊಳಿಸುತ್ತೇವೆ. ಇದರಿಂದ ಪಾದಚಾರಿಗಳು ಫುಟ್‌ಪಾತ್‌ಗಳನ್ನು ಮುಕ್ತವಾಗಿ ಬಳಸಬಹುದು. ಫುಟ್‌ಪಾತ್‌ಗಳ ಸುಧಾರಣೆ ಅಥವಾ ಮೂಲಸೌಕರ್ಯ ಬದಲಾವಣೆಗಳ ಅಗತ್ಯವಿದ್ದರೆ ಸಂಚಾರ ಪೊಲೀಸರು ಪುರಸಭೆಯ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಾರೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಸೀದಿಯಲ್ಲಿ ಮಲಗಲು ಜಾಗ ನೀಡಿಲ್ಲವೆಂದು ಹುಸಿ ಬಾಂಬ್‌ ಕರೆ; ಬಿಎಸ್‌ಸಿ ಪದವೀಧರ ಬಂಧನ

2022ರಲ್ಲಿ ಬೆಂಗಳೂರಿನಲ್ಲಿ 248 ಜನ ಪಾದಚಾರಿಗಳು ಸಾವನ್ನಪ್ಪಿದ್ದಾರೆ. ಇನ್ನೂ 819 ಪಾದಚಾರಿಗಳು ಗಾಯಗೊಂಡಿದ್ದಾರೆ. ಪಾದಚಾರಿ ಮಾರ್ಗಗಳು ಅಕ್ರಮವಾಗಿ ಒತ್ತುವರಿಯಾದ ಕಾರಣ ಜನರು ಓಡಾಡಲು ಸ್ಥಳಾವಕಾಶದ ಕೊರತೆಯಾಗುತ್ತದೆ. ಇದರಿಂದ ಜನರು ರಸ್ತೆಯ ಮೇಲೆ ನಡೆಯಬೇಕಾಗುತ್ತದೆ. ಈ ವೇಳೆ, ಪಾದಚಾರಿಗಳು ಅಪಘಾತ ಮತ್ತು ಸಾವುಗಳಿಗೆ ಒಳಗಾಗುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...