ಬೆಂಗಳೂರು | ಬಿಎಂಟಿಸಿ ಬಸ್‌ ಢಿಕ್ಕಿ; ಮಹಿಳೆ ಸಾವು

Date:

ರಸ್ತೆ ದಾಟುತ್ತಿದ್ದ ಮಹಿಳೆಗೆ ಬಿಎಂಟಿಸಿ ಬಸ್‌ ಢಿಕ್ಕಿ ಹೊಡೆದಿದ್ದು, ಮಹಿಳೆ ಮೃತಪಟ್ಟಿರುವ ಘಟನೆ ಬೆಂಗಳೂರಿನ ಶಾಂತಿ ನಗರ ಬಳಿಯ ಸುಬ್ಬಯ್ಯ ವೃತ್ತದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಕಬ್ಬನ್‌ಪೇಟೆ ನಿವಾಸಿ ಪುಷ್ಪಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಹಿಳೆಯ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಅಪಘಾತ ಎಸಗಿದ ಬಿಎಂಟಿಸಿ ಬಸ್ ಚಾಲಕ ನಾಗರಾಜ್ ಅವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಾಲಕನ್ನು ವಿಚಾರಣೆ ಒಳಪಡಿಸಿದ್ದಾರೆ. ಅಲ್ಲದೆ, ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದುಕೊಂಡು, ಪರಿಶೀಲನೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...