ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆಯಲ್ಲಿ ಬಿಎಂಟಿಸಿಯದ್ದೇ ಬಹು ಪಾಲು: ಒಂದೇ ವರ್ಷದಲ್ಲಿ 34 ಜನ ಬಲಿ

Date:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್‌ಗಳ ಸಂಚಾರ ನಿಯಮ ಉಲ್ಲಂಘನೆ ಕಳೆದ ಮೂರು ವರ್ಷಗಳಿಗೆ ಹೋಲಿಕೆ ಮಾಡಿದರೆ, ಈ ವರ್ಷ ಪ್ರಮಾಣ ಕಡಿಮೆಯಾಗಿದೆ. ಆದರೆ, ಅಪಘಾತಗಳ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಇನ್ನು ಕೆಎಸ್ಆರ್​ಟಿಸಿಗಿಂತ ಬಿಎಂಟಿಸಿ ಬಸ್‌ ಹೆಚ್ಚು ಸಂಚಾರ ನಿಯಮ ಉಲ್ಲಂಘಿಸಿವೆ.

ಸಂಚಾರ ನಿಯಮ ಉಲ್ಲಂಘನೆ, ಅಪಘಾತಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಪೊಲೀಸ್‌ ಇಲಾಖೆಯ ಸಹಯೋಗದಲ್ಲಿ ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ಪೊಲೀಸ್‌ ಟ್ರಾಫಿಕ್‌ ಕಮಾಂಡ್‌ ಸೆಂಟರ್‌ ಸಂಚಾರ ನಿಯಮ ಪಾಲನೆ ತರಬೇತಿಯನ್ನು ಸೋಮವಾರ ಆರಂಭಿಸಿದೆ. ಪ್ರತಿದಿನ 50 ಚಾಲಕರಂತೆ ಡಿಸೆಂಬರ್‌ 30ರ ವರೆಗೆ ಟ್ರಾಫಿಕ್‌ ಕಮಾಂಡ್‌ ಸೆಂಟರ್‌ನಲ್ಲಿ ಈ ತರಬೇತಿ ನಡೆಯಲಿದೆ.

ಬಿಎಂಟಿಸಿ ಸಂಸ್ಥೆಯಲ್ಲಿ ಒಟ್ಟು 30 ಸಾವಿರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಪೈಕಿ 25 ಸಾವಿರ ಚಾಲನಾ ಸಿಬ್ಬಂದಿ ಇದ್ದಾರೆ. ಟ್ರಾಫಿಕ್ ನಿಯಮ ಉಲ್ಲಂಘನೆ ನಗರದಲ್ಲಿ ಉಂಟಾಗುವ ಹಲವು ಅಪಘಾತಗಳಿಗೆ ಕಾರಣವಾಗಿದೆ. ಅಲ್ಲದೇ, ಸಂಚಾರ ನಿಯಮ ಉಲ್ಲಂಘನೆಯಿಂದಾಗಿ ಸಂಸ್ಥೆ ಕೋಟ್ಯಂತರ ರೂಪಾಯಿ ದಂಡ ಕಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಲಕರ ನಿರ್ಲಕ್ಷವೇ ಸಂಚಾರ ನಿಯಮ ಉಲ್ಲಂಘನೆ ಹಾಗೂ ಬಸ್ ಅಪಘಾತಕ್ಕೆ ಕಾರಣ ಎಂಬುದು ಬಯಲಾಗಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಅಪಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕೊಂಚ ಹೆಚ್ಚಳವಾಗುತ್ತಿದೆ. 2023ರ ಒಂದೇ ವರ್ಷದಲ್ಲಿ 34 ಜನರು ಬಿಎಂಟಿಸಿ ಬಸ್‌ಗೆ ಬಲಿಯಾಗಿದ್ದಾರೆ.

ಬಸ್‌ ಅಪಘಾತ

ಈ ವರ್ಷ(2023) ಬಿಎಂಟಿಸಿ ಬಸ್‌ ಅಪಘಾತದಿಂದ 34 ಜನ ಸಾವನ್ನಪ್ಪಿದ್ದು, 97 ಜನ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅದೇ ರೀತಿ ಈ ವರ್ಷ ಕೆಎಸ್‌ಆರ್‌ಟಿಸಿಯಿಂದ 10 ಜನ ಸಾವನ್ನಪ್ಪಿದ್ದರೆ, 28 ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

2020ರಲ್ಲಿ ಬಿಎಂಟಿಸಿ ಬಸ್‌ಗೆ 22 ಜನರು ಬಲಿಯಾಗಿದ್ದು, 49 ಜನರು ಗಾಯಗೊಂಡಿದ್ದಾರೆ. 2021ರಲ್ಲಿ 27 ಜನರು ಸಾವನ್ನಪ್ಪಿದ್ದರೆ, 58 ಜನರು ಗಾಯಗೊಂಡಿದ್ದಾರೆ. 2022ರಲ್ಲಿ 37 ಜನರು ಬಲಿಯಾಗಿದ್ದರೆ, 85 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಸಂಚಾರ ನಿಯಮ ಉಲ್ಲಂಘಣೆ

ಬಿಎಂಟಿಸಿ 2023ರಲ್ಲಿ 13,917 ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದು, ಬರೋಬ್ಬರಿ ₹1,04 ಕೋಟಿ ದಂಡ ಕಟ್ಟಿದೆ. ಕೆಎಸ್‌ಆರ್‌ಟಿಸಿ 3,347 ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದು, ₹14 ಲಕ್ಷ ದಂಡ ಪಾವತಿಸಿದೆ.

2022ರಲ್ಲಿ 32,066 ಪ್ರಕರಣಗಳಿಂದ ₹2.39 ಕೋಟಿ ದಂಡ ಸಂಗ್ರಹಿಸಲಾಗಿತ್ತು. ಅದೇ ರೀತಿ 2021ರಲ್ಲಿ 18,946 ಪ್ರಕರಣ ದಾಖಲಾಗಿದ್ದರೆ, ₹1.46 ಕೋಟಿ ದಂಡ ವಸೂಲಿ ಮಾಡಲಾಗಿತ್ತು. ಅದೇ ರೀತಿ ಸಾವಿರಾರು ಉಲ್ಲಂಘನೆ ಪ್ರಕರಣಗಳಿಂದ ಕೋಟ್ಯಂತರ ರೂಪಾಯಿ ದಂಡದ ಹಣ ಬಾಕಿ ಉಳಿದಿದೆ.

2022ರಲ್ಲಿ 17,664 ಪ್ರಕರಣಗಳಿಂದ ₹6.83 ಕೋಟಿ ದಂಡ ಹಾಗೂ 2021ರಲ್ಲಿ 10,689 ಕೇಸ್ ಗಳಿಂದ ₹57 ಲಕ್ಷ ದಂಡ ವಸೂಲಿ ಬಾಕಿಯಿದೆ ಎಂದು ಸಂಚಾರ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳು ಶಿಸ್ತುಪಥ, ಸಿಗ್ನಲ್ ಜಂಪ್, ನೋ ಪಾರ್ಕಿಂಗ್‌ನಲ್ಲಿ ಬಸ್‌ ನಿಲುಗಡೆ ಸೇರಿದಂತೆ ಹಲವು ಸಂಚಾರ ನಿಯಮ ಉಲ್ಲಂಘನೆ ಮಾಡಿವೆ. ಈ ಬಗ್ಗೆ ದಂಡ ಪಾವತಿ ಮಾಡುವಂತೆ ಸಾರಿಗೆ ಇಲಾಖೆಗೆ ಬೆಂಗಳೂರು ಸಂಚಾರ ಪೊಲೀಸ್‌ ಇಲಾಖೆ ಪತ್ರ ಬರೆದಿತ್ತು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಸೈಟ್​ ಕೊಡಿಸುವುದಾಗಿ ಎನ್​ಆರ್​ಐಗೆ ₹30 ಲಕ್ಷ ವಂಚನೆ: ಟ್ವೀಟ್ ಮೂಲಕ ನಗರ ಪೊಲೀಸ್ ಕಮೀಷನರ್​ಗೆ ದೂರು

ಈ ಬಗ್ಗೆ ಮಾತನಾಡಿದ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್, “ಅಪಘಾತ ಮತ್ತು ಸಂಚಾರ ನಿಯಮ ಉಲ್ಲಂಘನೆಗಳಿಗೆ ಚಾಲಕರ ಬೇಜಾವಾಬ್ದಾರಿತನ ಕಾರಣ. ಸಂಚಾರ ನಿಯಮ ಉಲ್ಲಂಘಿಸದಂತೆ ಈಗಾಗಲೇ ತಿಳಿಸಲಾಗಿದೆ. ಸರ್ಕಾರಿ ಮತ್ತು ಖಾಸಗಿ ಬಸ್‌ ಚಾಲಕರಿಗೂ ಸಂಚಾರ ನಿಯಮ ಪಾಲಿಸುವಂತೆ ಸೂಚಿಸಲಾಗಿದೆ. ಒಂದು ವೇಳೆ, ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ, ಚಾಲಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಬಿಎಂಟಿಸಿ ಬಸ್‌ಗಳು ಹೆಚ್ಚಾಗಿ ಸಿಗ್ನಲ್ ಜಂಪ್ ಮಾಡಿವೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...