ಬೆಂಗಳೂರು | ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಮೇಲ್

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಹುಸಿ ಬಾಂಬ್‌ ಬೆದರಿಕೆ ಕರೆಗಳು ಹೆಚ್ಚಳವಾಗಿವೆ. ಕಳೆದ ಕೆಲವು ದಿನಗಳ ಹಿಂದೆ ನಗರದಲ್ಲಿರುವ 65ಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಮೆಸೇಜ್‌ ಬಂದಿತ್ತು. ಇದೀಗ ಮತ್ತೊಂದು ಇಂತಹದೇ ಘಟನೆ ನಡೆದಿದ್ದು, ದುಷ್ಕರ್ಮಿಗಳು ಶುಕ್ರವಾರ ಸರ್‌.ಎಂ.ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಹಾಕಿದ್ದಾರೆ.

ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಬೆದರಿಕೆ ಮೇಲ್ ಬಂದಿದೆ. ಎಂದಿನಂತೆ ಸಿಬ್ಬಂದಿ ಮೇಲ್ ಚೆಕ್‌ ಮಾಡುವ ಹಾಗೇ ಇಂದೂ ಕೂಡ ಮೇಲ್ ಚೆಕ್ ಮಾಡಿದ್ದಾರೆ. ಆಗ Morgue999lol ಎಂಬ ಮೇಲ್ ಐಡಿಯಿಂದ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಸಂದೇಶ ಬಂದಿದೆ.

ಮ್ಯೂಸಿಯಂ ಒಳಗೆ ಗೌಪ್ಯ ಸ್ಥಳದಲ್ಲಿ ಸ್ಫೋಟಕ ವಸ್ತು ಇಟ್ಟಿದ್ದೇವೆ. ಈ ಬಾಂಬ್‌ ಬೆಳಗ್ಗೆ ಸ್ಫೋಟಗೊಂಡು ಮ್ಯೂಸಿಯಂ ನಲ್ಲಿರುವ ಎಲ್ಲರೂ ಸಾವನ್ನಪ್ಪಲ್ಲಿದ್ದಾರೆ. ನಾವುಟೆರರಿಸರ್ಸ್ 111′ ಎಂಬ ಸಂಘಟನೆಗೆ ಸೇರಿದವರು. ನಮ್ಮ ಗ್ರೂಪ್ ಹೆಸರನ್ನ ಮಾಧ್ಯಮದವರಿಗೆ ನೀಡಿ ಎಂದು ಮೇಲ್ ಕಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇಲ್ ನೋಡಿದ ಕೂಡಲೇ ಆಡಳಿತ ಮಂಡಳಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿತ್ತು. ಸ್ಥಳಕ್ಕಾಗಮಿಸಿದ ಪೊಲೀಸ್ ಸಿಬ್ಬಂದಿ, ಶ್ವಾನ ದಳ, ಬಾಂಬ್ ನಿಶ್ಕ್ರಿಯ ದಳದ ತಂಡ ಪರಿಶೀಲನೆ ನಡೆಸಿದೆ. ಈ ವೇಳೆ, ಇಲ್ಲಿ ಯಾವುದೇ ಸ್ಫೋಟಕ ವಸ್ತು ಕಂಡು ಬಂದಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ?  ಮಾರ್ಚ್‌ನಲ್ಲಿ ಬಿಬಿಎಂಪಿ ಬಜೆಟ್ ಮಂಡನೆ ಸಾಧ್ಯತೆ

ಈ ಮ್ಯೂಸಿಯಂಗೆ ಪ್ರತಿ ದಿನ ಶಾಲಾ ಮಕ್ಕಳು ಸೇರಿದಂತೆ ಸಾವಿರಾರು ಜನ ಭೇಟಿ ನೀಡುತ್ತಾರೆ. ಈ ಘಟನೆಯಿಂದಾಗಿ ಕೆಲಕಾಲ ಮ್ಯೂಸಿಯಂ ಸುತ್ತ-ಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸದ್ಯ ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹಿಂದೆ, ಬೆಂಗಳೂರು ಹಾಗೂ ಆನೇಕಲ್‌ನ 65ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ಬೆದರಿಕೆಯ ಮೇಲ್ಬಂದಿತ್ತುಆದರೆ, ಶಾಲೆಗಳಿಗೆ ಬಾಂಬ್ ಮೇಲ್ ಕಳಿಸಿದ್ದವರ ಗುರುತು ಇನ್ನೂ ಪತ್ತೆಯಾಗಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...