ಬೆಂಗಳೂರು | ಕಾರ್ಮಿಕರು, ಸಲಕರಣೆಗಳ ಸಮಸ್ಯೆಯಿಂದ ಕಾವೇರಿ 5ನೇ ಹಂತದ ಯೋಜನೆ ವಿಳಂಬ ಸಾಧ್ಯತೆ

Date:

  • ಡಿಸೆಂಬರ್‌ನೊಳಗೆ ಯೋಜನೆ ಪೂರ್ಣಗೊಳಿಸಲು ಸಿದ್ಧತೆ ನಡೆಸಿದ ಬಿಡಬ್ಲೂಎಸ್‌ಎಸ್‌ಬಿ
  • ನಾನಾ ದೇಶಗಳಲ್ಲಿ ತಯಾರಾದ ಬಿಡಿಭಾಗಗಳು ರಾಜ್ಯಕ್ಕೆ ಆಗಮಿಸುವುದು ವಿಳಂಬ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶ ಹೊಂದಿರುವ ಕಾವೇರಿ 5ನೇ ಹಂತದ ಯೋಜನೆಗೆ ಇದೀಗ ಕಾರ್ಮಿಕರ ಕೊರತೆ ಮತ್ತು ಸಲಕರಣೆಗಳ ಸಮಸ್ಯೆ ಎದುರಾಗಿದ್ದು, ಯೋಜನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಈ ಯೋಜನೆ ಆರು ತಿಂಗಳು ವಿಳಂಬವಾಗಿದೆ. ಇದೀಗ ಸಲಕರಣೆ ಮತ್ತು ಕಾರ್ಮಿಕರ ಕೊರತೆ ಎದುರಾಗಿದೆ. ಆದರೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲೂಎಸ್‌ಎಸ್‌ಬಿ) ಈ ವರ್ಷದ ಡಿಸೆಂಬರ್‌ನೊಳಗೆ ಯೋಜನೆಯನ್ನು ಪೂರ್ಣಗೊಳಿಸಲು ಸಿದ್ಧತೆ ನಡೆಸಿದೆ.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಗುರಿ ಹೊಂದಿರುವ ಈ ಯೋಜನೆಗೆ ₹5,500 ಕೋಟಿ ಹಣವನ್ನು ಜಪಾನ್ ಇಂಟರ್‌ನ್ಯಾಶನಲ್ ಕೋಆಪರೇಷನ್ ಏಜೆನ್ಸಿ ನೀಡುತ್ತಿದೆ. ಈ ಯೋಜನೆಯು ಮಹದೇವಪುರ, ರಾಜರಾಜೇಶ್ವರಿನಗರ, ಬೊಮ್ಮನಹಳ್ಳಿ, ದಾಸರಹಳ್ಳಿ, ಯಲಹಂಕ, ಕೆ.ಆರ್‌.ಪುರಂ ಮತ್ತು ಬ್ಯಾಟರಾಯನಪುರಕ್ಕೆ ದಿನಕ್ಕೆ 775 ಮಿಲಿಯನ್ ಲೀಟರ್ ನೀರು ಸರಬರಾಜು ಮಾಡುವ ನಿರೀಕ್ಷೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀರಿಗಾಗಿ ತೊರೆಕಾಡನಹಳ್ಳಿ (ಟಿಕೆ ಹಳ್ಳಿ) ನಿಂದ ವಾಜರಹಳ್ಳಿಯವರೆಗೆ 70 ಕಿಮೀ ವರೆಗೆ 3,000 ಎಂಎಂ ವ್ಯಾಸದ ಪೈಪ್‌ಲೈನ್ ಹಾಕುತ್ತಿದ್ದೇವೆ. ಸುಮಾರು 85% ಕೆಲಸ ಪೂರ್ಣಗೊಂಡಿದೆ. ಗ್ರಾಮಗಳಿಗೆ ನೀರು ಹಾಯಿಸಲು ಈಗಿರುವ ಪಂಪಿಂಗ್ ಸ್ಟೇಷನ್ ಪಕ್ಕದ ಟಿ.ಕೆ.ಹಳ್ಳಿ, ಹಾರೋಹಳ್ಳಿ, ತಾತಗುಣಿಯಲ್ಲಿ ಹೊಸ ಪಂಪಿಂಗ್ ಸ್ಟೇಷನ್ ನಿರ್ಮಿಸಬೇಕು” ಎಂದು ಬಿಡಬ್ಲೂಎಸ್‌ಎಸ್‌ಬಿ ಅಧಿಕಾರಿಯೊಬ್ಬರು ತಿಳಿಸಿದರು.

“ಈ ಯೋಜನೆಯ ಕಾಮಗಾರಿಗೆ ಬಡಗಿಗಳು ಮತ್ತು ಬಾರ್ ಬೆಂಡರ್‌ಗಳಂತಹ ಕಾರ್ಮಿಕರು ಅವಶ್ಯಕವಾಗಿದ್ದು, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಬಿಹಾರದಿಂದ ಕರೆತರಬೇಕಾಗಿದೆ. ಕೋವಿಡ್ ಬಳಿಕ ಕಾರ್ಮಿಕರ ಸಮಸ್ಯೆ ಎದುರಾಗಿದೆ. ಸದ್ಯಕ್ಕೆ 40-50% ಕಾರ್ಮಿಕರ ಕೊರತೆಯಿದೆ. ಗುತ್ತಿಗೆದಾರರು ಆದಷ್ಟು ಬೇಗ ಕಾರ್ಮಿಕರನ್ನು ಕರೆತರಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

“ನಾನಾ ದೇಶಗಳಲ್ಲಿ ತಯಾರಾದ ಬಿಡಿಭಾಗಗಳು ರಾಜ್ಯಕ್ಕೆ ಆಗಮಿಸುವುದು ವಿಳಂಬವಾಗುತ್ತಿದೆ. ಇತ್ತೀಚೆಗೆ ಹೆಚ್ಚಿನ ಸಾಮರ್ಥ್ಯದ ಪಂಪ್‌ಗಳು (2000 HP), ಜಪಾನ್‌ನಿಂದ ಮೋಟಾರ್‌ ಹಾಗೂ ಟರ್ಕಿಯಿಂದ ಸ್ಲೂಸ್ ವಾಲ್ವ್‌ಗಳು ಬಂದಿವೆ. ಆಸ್ಟ್ರೇಲಿಯಾದಿಂದ ಪಂಪ್ ಮಾನಿಟರಿಂಗ್ ಸಿಸ್ಟಮ್‌ಗಳು ಬಂದಿವೆ. ಫ್ರಾನ್ಸ್, ಜರ್ಮನಿ ಮತ್ತು ಸ್ವಿಟ್ಜರ್‌ಲ್ಯಾಂಡ್‌ನಿಂದ ನೀರು ಶುದ್ಧೀಕರಣ ಮತ್ತು ಸೆನ್ಸಾರ್‌ಗಳು ಇನ್ನೂ ಬಂದಿಲ್ಲ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಂಕಿತ ಉಗ್ರರಿಗೆ ಟಾರ್ಗೆಟ್‌ ಆಗಿದ್ದ ಬೆಂಗಳೂರು: ಪೊಲೀಸ್‌ ಆಯುಕ್ತ ದಯಾನಂದ

“ಯೋಜನೆಗೆ ಒಂಬತ್ತು ವಿಭಿನ್ನ ಪ್ಯಾಕೇಜ್‌ಗಳೊಂದಿಗೆ ವಿಭಿನ್ನ ಗಡುವನ್ನು ನೀಡಲಾಗಿದೆ. 2020ರ ಅಂತ್ಯದ ವೇಳೆಗೆ ಒಪ್ಪಂದಗಳನ್ನು ಅಂತಿಮಗೊಳಿಸಲಾಗಿದೆ. ಅಂತಿಮ ಪ್ಯಾಕೇಜ್‌ನ ಗಡುವು ಜುಲೈ 2023ರಲ್ಲಿ ಮುಕ್ತಾಯಗೊಂಡಿದೆ. ಸಾಂಕ್ರಾಮಿಕ ರೋಗ ಮತ್ತು ಕಾರ್ಮಿಕರ ಕೊರತೆಯಿಂದ ಎಲ್ಲ ಕೆಲಸಗಳು ವಿಳಂಬವಾಗಿದೆ. ರಾಜ್ಯದ ಎಲ್ಲ ಇನ್ಫ್ರಾ ಯೋಜನೆಗಳಂತೆ ಈ ಯೋಜನೆಗೆ ಆರು ತಿಂಗಳ ವಿಸ್ತರಣೆ ನೀಡಲಾಯಿತು. ಈಗ ಡಿಸೆಂಬರ್ ವೇಳೆಗೆ ಯೋಜನೆಯನ್ನು ಪೂರ್ಣಗೊಳಿಸುವ ಹಾದಿಯಲ್ಲಿದ್ದೇವೆ” ಎಂದು ಅವರು ಹೇಳಿದರು.

“ಪೈಪ್‌ಲೈನ್‌ಗಳನ್ನು ಹಾಕುವ ಕಾರ್ಯ ಪೂರ್ಣಗೊಂಡಿದೆ. ಟಿ.ಕೆ.ಹಳ್ಳಿಯಲ್ಲಿ 775 ಎಂಎಲ್ ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕ ನಿರ್ಮಿಸಲಾಗುತ್ತಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...