ಬೆಂಗಳೂರು | ರೇಸ್‌ಕೋರ್ಸ್‌ ಮೇಲೆ ಸಿಸಿಬಿ ದಾಳಿ; ₹3 ಕೋಟಿ 47 ಲಕ್ಷ ಹಣ ಜಪ್ತಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ರೇಸ್‌ಕೋರ್ಸ್‌ ಮೇಲೆ ಜನವರಿ 12ರ ತಡರಾತ್ರಿ ಒಂದು ಗಂಟೆಗೆವರೆಗೂ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್‌ಟಿ ಕಟ್ಟದೆ ಸರ್ಕಾರಕ್ಕೆ ವಂಚನೆ ಮಾಡಿದ ಆರೋಪದ ಮೇಲೆ ಈ ದಾಳಿ ನಡೆದಿದೆ.

ತಡರಾತ್ರಿ ಒಂದು ಗಂಟೆಯವರೆಗೂ ಈ ದಾಳಿ ನಡೆದಿದ್ದು, ಬರೋಬ್ಬರಿ ₹3 ಕೋಟಿ 47 ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೇಸ್‌ಕೋರ್ಸ್ ಬುಕ್ಕಿಂಗ್ ಕೌಂಟರ್‌ಗಳನ್ನ ಲಾಕ್ ಮಾಡಲಾಗಿದೆ. ಅಲ್ಲದೇ, ಕೌಂಟರ್‌ನಲ್ಲಿನ ಸಿಬ್ಬಂದಿ ಹೊರ ಹೋಗದಂತೆ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಒಂದೊಂದು ಕೌಂಟರ್‌ಗೂ ಸಿಬ್ಬಂದಿ ಭದ್ರತೆ ಒದಗಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಳಿ ವೇಳೆ, ಸಿಸಿಬಿ ಪೊಲೀಸರು ಹಲವರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಸುಮಾರು 60 ಜನರನ್ನು ವಶಕ್ಕೆ ಪಡೆದು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಇನ್ನು ದಾಳಿ ವೇಳೆ ಲೆಕ್ಕಕ್ಕಿಂತ ಅಧಿಕ ಹಣ ಪತ್ತೆಯಾದ ಹಿನ್ನೆಲೆ, ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದು, ಹೆಚ್ಚುವರಿಯಾಗಿ ದೊರೆತ ಹಣಕ್ಕೆ ಲೆಕ್ಕ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ?  ಬೆಂಗಳೂರು | ಬೀದಿ ವ್ಯಾಪಾರಿಗಳಿಗೆ ಮಾರ್ಷಲ್‌ಗಳ ಕಿರುಕುಳ; ಆರೋಪ

ಒಂದು ವೇಳೆ ಹೆಚ್ಚುವರಿ ಹಣಕ್ಕೆ ಲೆಕ್ಕ ನೀಡಲು ವಿಫಲವಾದರೆ, ಈ ಪ್ರಕರಣದ ಬಗ್ಗೆ ಇಡಿ ಇಲಾಖೆಗೆ ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡುವ ಸಾಧ್ಯತೆ ಇದೆ.

ಎಎ ಅಸೋಸಿಯೇಟ್ಸ್, ಸಾಮ್ರಾಟ್ ಅಂಡ್ ಕೋ. ನೀಲಕಂಠ, ಮೆಟ್ರೊ ಅಸೋಸಿಯೇಟ್ಸ್, ಶೆಟ್ಟಿ ಅಸೋಸಿಯೇಟ್ಸ್, ಮೇಘನ ಎಂಟರ್ ಪ್ರೈಸಸ್, ಮಂಜು ಅಸೋಸಿಯೇಟ್ಸ್, ಮಾರುತಿ ಎಂಟರ್ ಪ್ರೈಸಸ್, ಆದಿತ್ಯ ಎಂಟರ್ ಪ್ರೈಸಸ್, ಪರಸ್ ಅಂಡ್ ಕೋ, ಬನಶಂಕರಿ ಎಂಟರ್ ಪ್ರೈಸಸ್, ಶ್ರೀಹರಿ ಎಂಟರ್ ಪ್ರೈಸಸ್, ತೇಜಸ್ವಿನಿ ಎಂಟರ್ ಪ್ರೈಸಸ್, ಸೂರ್ಯ ಅಂಡ್ ಕೋ, ಹೆಚ್ಎನ್ಎಸ್ ಅಂಡ್ ಕೋ, ಸಾಯಿ ರತನ್, ವಿಕ್ರಾಂತ್ ಎಂಟರ್ ಪ್ರೈಸಸ್, ನಿರ್ಮಲ್ ಅಂಡ್ ಕೋ, ಶ್ರೀರಾಮ ಎಂಟರ್ ಪ್ರೈಸಸ್, ಚಾಮುಂಡೇಶ್ವರಿ ಎಂಟರ್ ಪ್ರೈಸಸ್, ಆರ್.ಆರ್ ಎಂಟರ್ ಪ್ರೈಸಸ್, ರಾಯಲ್ ಇಎನ್ ಟಿಪಿ, ಆರ್.ಕೆ.ಎಂಟರ್ ಪ್ರೈಸಸ್ ಶ್ರೀವಾರಿ ಆ್ಯಂಡ ಕಂಪನಿ, ಕಾರ್ತಿಕ್ ಆ್ಯಂಡ ಕಂಪನಿ, ಅಮೃತಾಯ ಕೌಂಟರ್‌ಗಳಲ್ಲಿ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...