ನಗರ ಕಮಿಷನರ್‌ ದಯಾನಂದ್ ಅಮಾನತು: ಆಯುಕ್ತರಾಗಿ ಸೀಮಂತ್‌ ಕುಮಾರ್ ನೇಮಕ

Date:

ಐಪಿಎಲ್‌ನಲ್ಲಿ ಆರ್‌ಸಿಬಿ ವಿಜಯೋತ್ಸವ ಸಂಭ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿದ್ದ ಬಿ ದಯಾನಂದ್‌ ಅವರನ್ನು ಅಮಾನತು ಮಾಡಲಾಗಿದೆ. ದಯಾನಂದ್ ಅಮಾನತಿನಿಂದ ತೆರವಾದ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಿಸಲಾಗಿದೆ.

ಸೀಮಂತ್ ಕುಮಾರ್ ಅವರು ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್‌ನ ಎಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ, ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಹುದ್ದೆಗೆ ವರ್ಗಾಯಿಸಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ‌ ಇಲಾಖೆಯ ಕಾರ್ಯದರ್ಶಿ ಟಿ ಮಹಂತೇಶ್ ಆದೇಶ ಹೊರಡಿಸಿದ್ದಾರೆ.

ಜೂನ್ 3ರಂದು ನಡೆದ ಐಪಿಎಲ್‌ ಫೈನಲ್‌ನಲ್ಲಿ ಆರ್‌ಸಿಬಿ ಗೆದ್ದು, ಚಾಂಪಿಯನ್ ಆಗಿತ್ತು. ಆರ್‌ಬಿಸಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ‌ ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಮತ್ತು ಅವ್ಯವಸ್ಥೆಯ ಕಾರಣದಿಂದಾಗಿ ನೂಕುನುಗ್ಗಲು, ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿರುವ ಸರ್ಕಾರ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್, ಬೆಂಗಳೂರು ಸೆಂಟ್ರಲ್‌ ಡಿಸಿಪಿ, ಬೆಂಗಳೂರು ಸೆಂಟ್ರಲ್‌ ಎಸಿಪಿ, ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಹಾಗೂ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳು ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಉಸ್ತುವಾರಿಯನ್ನು ಅಮಾನತು ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...