ಬೆಂಗಳೂರು | ರಾಜಕಾಲುವೆ ಒತ್ತುವರಿ ಗುರುತಿಸಲು ಪಾಲಿಕೆ ಜತೆ ಕೈಜೋಡಿಸಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ರಾಜಕಾಲುವೆಗಳ ಮೇಲೆ ಹೊಸದಾಗಿ ಒತ್ತುವರಿಗಳು ಇದ್ದಲ್ಲಿ, ಅಂತಹ ಒತ್ತುವರಿಗಳನ್ನು ತುರ್ತಾಗಿ ಗುರುತಿಸಿ, ಸದರಿ ಒತ್ತುವರಿಯನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ತಿಳಿಸಿದೆ. ಅದರಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜಕಾಲುವೆಗಳ ಮೇಲೆ ಇರುವ ಒತ್ತುವರಿಗಳನ್ನು ಗುರುತಿಸಲು ಕ್ರಮಕೈಗೊಂಡಿದ್ದು, ಇದಕ್ಕೆ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಮನವಿ ಮಾಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, “ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಹಂತಗಳ ರಾಜಕಾಲುವೆಗಳಲ್ಲಿ ಒತ್ತುವರಿ/ಅತಿಕ್ರಮಣಗಳನ್ನು ಗುರುತಿಸಲು ಸಾರ್ವಜನಿಕರು ಕೈಜೋಡಿಸಿದಲ್ಲಿ ಹೆಚ್ಚಿನ ಒತ್ತುವರಿಗಳನ್ನು ಗುರುತಿಸುವಲ್ಲಿ ಪಾಲಿಕೆಗೆ ಸಹಕಾರಿಯಾಗುತ್ತದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹7.83 ಕೋಟಿ ಮೌಲ್ಯದ ಡ್ರಗ್ಸ್‌ ವಶ; 14 ಆರೋಪಿಗಳ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದರಿ ಇರುವ ಒತ್ತುವರಿಗಳನ್ನು ತೆರವುಗೊಳಿಸಿಕೊಂಡು ರಾಜಕಾಲುವೆಗಳನ್ನು ನಿರ್ಮಾಣ ಮಾಡುವುದರಿಂದ ಮಳೆನೀರು ಸರಾಗವಾಗಿ ಹರಿದು ಹೋಗುತ್ತದೆ. ಇದರಿಂದ ಮಳೆಗಾಲದಲ್ಲಿ ಉಂಟಾಗುವ ಪ್ರವಾಹ ಹಾನಿಯನ್ನು ತಡೆಗಟ್ಟಬಹುದು. ಹಾಗಾಗಿ, ಸ್ಥಳೀಯ/ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರುವ ರಾಜಕಾಲುವೆಗಳ ಮೇಲೆ ಯಾವುದಾದರೂ ಒತ್ತುವರಿಗಳು ಮಾಡಿಕೊಂಡಿರುವುದು ತಮ್ಮ ಗಮನಕ್ಕೆ ಬಂದಿದ್ದರೆ, ಅಂತಹ ಒತ್ತುವರಿಗಳ ಮಾಹಿತಿಯನ್ನು ಭಾವಚಿತ್ರದೊಂದಿಗೆ ಆಯಾ ವಿಭಾಗದ ಕಾರ್ಯಪಾಲಕ ಅಭಿಯಂತರರು, ಬೃಹತ್ ನೀರುಗಾಲುವೆ ರವರಿಗೆ ಸೆ.20ರ ಮಧ್ಯಾಹ್ನ 2 ಗಂಟೆಯ ಒಳಗಾಗಿ ಸಲ್ಲಿಸಿ” ಎಂದು ಬಿಬಿಎಂಪಿ ಎಂಜಿನಿಯರಿಂಗ್ ವಿಭಾಗದ ಪ್ರಧಾನ ಅಭಿಯಂತರ ಪ್ರಹ್ಲಾದ್ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...