ಬೆಂಗಳೂರು | ಸೈಬರ್ ವಂಚಕರ ಬಲೆಗೆ ಬಿದ್ದು 24 ಲಕ್ಷ ರೂ. ಕಳೆದುಕೊಂಡ ಕಾಲೇಜು ಪ್ರಾಂಶುಪಾಲೆ

Date:

ಬೆಂಗಳೂರಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಸೈಬರ್ ವಂಚಕರ ‘ಡಿಜಿಟನ್‌ ಬಂಧನ’ಕ್ಕೆ (ಡಿಜಿಟಲ್ ಅರೆಸ್ಟ್‌) ಒಳಗಾಗಿ, 24 ಲಕ್ಷ ರೂ. ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ನಗರದ ವೈಟ್‌ಫೀಲ್ಡ್‌ನಲ್ಲಿರುವ ಕಾಲೇಜಿನ ಪ್ರಾಂಶುಪಾಲರನ್ನು ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಮತ್ತು ಕೇಂದ್ರೀಯ ತನಿಖಾ ದಳದ (ಸಿಬಿಐ) ಹೆಸರಿನಲ್ಲಿ ವಂಚಕರು ಡಿಜಿಟಲ್ ಬಂಧನಕ್ಕೆ ಒಳಪಡಿಸಿದ್ದಾರೆ. ಮಾನವ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಕ್ರಿಮಿನಲ್ ಮೊಕದ್ದಮೆಗಳನ್ನು ಹಾಕುವುದಾಗಿ ಪ್ರಾಂಶುಪಾಲರನ್ನು ಬೆದರಿಸಿ 24 ಲಕ್ಷ ರೂ.ಗಳನ್ನು ಸುಲಿಗೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಸೈಬರ್ ವಂಚನೆಗೆ ಒಳಗಾದ ಪ್ರಾಂಶುಪಾಲೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ. “ತಮಗೆ ಕಳೆದ ತಿಂಗಳು ಭಾರತೀಯ ಟೆಲಿಕಾಂ ಅಧಿಕಾರಗಳಂತೆ ಕರೆ ಮಾಡಿ ಮಾತನಾಡಿದ್ದ ವ್ಯಕ್ತಿಯೊಬ್ಬ ತಾನು ಟ್ರಾಯ್‌ ಸಂಸ್ಥೆಯ ಅಧಿಕಾರಿಯೆಂದು ಹೇಳಿಕೊಂಡಿದ್ದ. ಮಾನವ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ನನ್ನ ಮೊಬೈಲ್‌ ಸಂಖ್ಯೆಯೊಂದಿಗೆ ಲಿಂಕ್‌ ಇರುವುದಾಗಿ ಬೆದರಿಕೆ ಹಾಕಿದ್ದ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಂಗಾಪುರದಲ್ಲಿ ಭಾರತದ ಸುಮಾರು 180 ಮಕ್ಕಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಮಾನವ ಕಳ್ಳಸಾಗಣೆ ಮಾಡಲಾಗಿದೆ. ಆ ಮಕ್ಕಳ ಪೋಷಕರು ಪೊಲೀಸರಿಗೆ ದೂರುಗಳನ್ನು ದಾಖಲಿಸಿದ್ದಾರೆ. ಆ ಪ್ರಕರಣಗಳಲ್ಲಿ ನನ್ನ ಮೊಬೈಲ್‌ ಸಂಖ್ಯೆ ಲಿಂಕ್‌ ಆಗಿದ್ದು, ನನ್ನ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ. ಪ್ರಕರಣಕ್ಕೆ ತಳುಕುಹಾಕಿಕೊಂಡಿರುವ ನನ್ನ ಹೆಸರಿನ 16 ಪಾಸ್‌ಪೋರ್ಟ್‌ಗಳು, 58 ಡೆಬಿಟ್‌ ಕಾರ್ಡ್‌ಗಳು ಹಾಗೂ 140 ಗ್ರಾಂ ಎಡಿಎಂಎ ಔಷಧ ರವಾನೆಯಾಗಿರುವ ಕೊರಿಯರ್ ದಾಖಲೆಗಳಿರುವುದಾಗಿ ಆತ ಹೆದರಿಸಿದ್ದ” ಎಂದು ಪ್ರಾಂಶುಪಾಲೆ ಆರೋಪಿಸಿದ್ದಾರೆ.

“ಬಳಿಕ, ಮತ್ತೆ ಕರೆ ಮಾಡಿದ ವಂಚಕರು, ನನ್ನ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಎಂದು ಹೇಳಿದರು. ಅದಾದ ಕೆಲವೇ ನಿಮಿಷಗಳಲ್ಲಿ, ಸಿಬಿಐ ಅಧಿಕಾರಿಯೆಂದು ಹೇಳಿಕೊಂಡು ಮತ್ತೊಬ್ಬ ವ್ಯಕ್ತಿವಾಟ್ಸ್‌ಆ್ಯಪ್ ಕರೆ ಮಾಡಿದರು. ನನ್ನ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸುವುದಾಗಿ ಹೇಳಿದರು. ನಾನು ವಿರೋಧಿಸಿದಾಗ, ನಾನು ಪ್ರಕರಣದ ಆರೋಪಿಯಲ್ಲ ಎಂಬುದನ್ನು ಪರಿಶೀಲಿಸಲು ತಾವು ಹೇಳುವ ಎರಡು ಬ್ಯಾಂಕ್‌ ಖಾತೆಗಳಿಗೆ ಹಣವನ್ನು ವರ್ಗಾಯಿಸುವಂತೆ ಹೇಳಿದರು. ಅದರಂತೆ, ಎರಡು ವಿಭಿನ್ನ ಬ್ಯಾಂಕ್ ಖಾತೆಗಳಿಗೆ 24 ಲಕ್ಷ ರೂ.ಗಳನ್ನು ವರ್ಗಾಯಿಸಿದೆ. ಹಣ ವರ್ಗಾಯಿಸಿದ ಬಳಿಕ ಮರಳು ಕರೆ ಮಾಡಿದೆ. ಆದರೆ, ಕರೆ ಸ್ವೀಕರಿಸಲಿಲ್ಲ. ಆಗ, ನಾನು ಮೋಸ ಹೋಗಿದ್ದೇನೆ ಎಂಬುದು ಅರಿವಾಯಿತು” ಎಂದು ಪ್ರಾಂಶುಪಾಲೆ ಹೇಳಿಕೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. “ತನಿಖೆಯ ಸಂದರ್ಭದಲ್ಲಿ,ಪ್ರಾಂಶುಪಾಲೆ ವರ್ಗಾಯಿಸಿದ್ದ ಹಣವನ್ನು ಇತರ ಒಂಬತ್ತು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ. ಅದರಲ್ಲಿ ಹೆಚ್ಚಿನ ಹಣವನ್ನು ವಿತ್‌ಡ್ರಾ ಮಾಡಲಾಗಿದೆ ಎಂಬುದು ಕಂಡುಬಂದಿದೆ. ನಾವು ಅಪರಾಧಿಗಳನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ” ಎಂದು ತನಿಖಾಧಿಕಾರಿಯೊಬ್ಬರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...