ಬೆಂಗಳೂರು | ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವನ ಬಂಧನ

Date:

ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿ, ಸ್ಥಳ ಮಹಜರು ನಡೆಸಿದ್ದಾರೆ.

ಬಂಧಿತನನ್ನು ಬಿಹಾರದ ಮೂಲದ ಸೈಯದ್ ನಸ್ರು ಎಂದು ಗುರುತಿಸಲಾಗಿದೆ. ಆರೋಪಿಯನ್ನು ಜನವರಿ 24ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕುಡಿದ ಮತ್ತಿನಲ್ಲಿ ಆರೋಪಿ ಈ ಕೃತ್ಯವೆಸಗಿದ್ದಾನೆ ಎಂದು ಪೊಲಿಸರು ತಿಳಿಸಿದ್ದಾರೆ.

ಕೃತ್ಯ ನಡೆದ ಸ್ಥಳದಿಂದ ಸುಮಾರು 50 ಮೀಟರ್‌ನಷ್ಟು ದೂರ ಇರುವ ಪ್ಲಾಸ್ಟಿಕ್ ಹಾಗೂ ಬ್ಯಾಗ್‌ ಹೊಲಿಗೆ ಅಂಗಡಿಯಲ್ಲಿ ಆರೋಪಿ ಕೆಲಸ ಮಾಡುತ್ತಿದ್ದ. ಮದ್ಯದ ನಶೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಒಬ್ಬನೇ ಕೃತ್ಯ ಎಸಗಿದ್ದಾನೆ. ಬೇರೆ ಯಾರೂ ಭಾಗಿ ಆಗಿಲ್ಲ. ಆದರೂ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಆರೋಪಿಯನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗಿದ್ದು, ಜನವರಿ 24ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಹಸುಗಳ ಮಾಲೀಕ ಕರ್ಣ ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ​ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ.

ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ.

ಸ್ಥಳೀಯ ಶಾಸಕರು ಆಗಿರುವ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಕಾಟನ್‌ ಪೇಟೆ ಪಶು ಆಸ್ಪತ್ರೆಗೆ ಭೇಟಿ ನೀಡಿ ಹಸುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ನೀಡಿದ ಭರವಸೆಯಂತೆ ಹಸುಗಳ ಮಾಲೀಕ ಕರ್ಣ ಅವರಿಗೆ ಭಾನುವಾರವೇ ಮೂರು ಹಸುಗಳನ್ನು ಕೊಡಿಸಿದ್ದಾರೆ ಎಂದು ಸಚಿವರ ಕಚೇರಿ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...