ಬೆಂಗಳೂರು | ಮನೆಗೆ ನುಗ್ಗಿ ದರೋಡೆ ಮಾಡಿದ ದುಷ್ಕರ್ಮಿಗಳು

Date:

ಸೇಲ್ಸ್‌ ಮ್ಯಾನೇಜರ್‌ವೊಬ್ಬರು ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಕೊಠಡಿಗೆ ದಿಢೀರನೆ ನುಗ್ಗಿದ ದುಷ್ಕರ್ಮಿಗಳು, ಹಲ್ಲೆ ಮಾಡಿ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.

ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಮಿಳುನಾಡಿನ ಕೃಷ್ಣಗಿರಿ ಮೂಲದವರಾಗಿರುವ ಆರ್.ಅಣ್ಣಾದೊರೈ(41) ಅವರು ನಗರದ ವೈದ್ಯಕೀಯ ಉಪಕರಣಗಳ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂದಿರಾನಗರದ ಅಪ್ಪಾರೆಡ್ಡಿ ಪಾಳ್ಯದ 9ನೇ ಅಡ್ಡರಸ್ತೆಯ ಮನೆಯೊಂದರಲ್ಲಿ ವಾಸವಿದ್ದರು. ಬುಧವಾರ ರಾತ್ರಿ 9.45ರ ಸುಮಾರಿಗೆ ಅಣ್ಣಾದೊರೈ ಅವರು ಫೋನ್‌ನಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ರೂಮಿಗೆ ನುಗ್ಗಿರುವ ದುಷ್ಕರ್ಮಿಗಳು ಅಣ್ಣಾದೊರೈ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ವೇಳೆ, ಅವರ ಬಳಿಯಿದ್ದ ₹1.5 ಲಕ್ಷ ಮೌಲ್ಯದ ಎರಡು ಮೊಬೈಲ್ ಹಾಗೂ ಒಂದು ಎಲೆಕ್ಟ್ರಾನಿಕ್ ಗ್ಯಾಜೆಟ್ ಅನ್ನು ದೋಚಿದ್ದಾರೆ. ನಂತರ ಅವರ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ನಗದನ್ನು ಕಳುಹಿಸುವಂತೆ ಆರೋಪಿಗಳು ಒತ್ತಾಯಿಸಿದ್ದಾರೆ. ಅಷ್ಟೊಂದು ಹಣ ಇಲ್ಲದಿದ್ದಾಗ ಆತನ ಖಾತೆಗೆ ಹಣ ವರ್ಗಾವಣೆ ಮಾಡುವಂತೆ ಗೆಳೆಯನ ಬಳಿ ಮಾತನಾಡಿಸಿ, ಆತನಿಂದ ₹25 ಸಾವಿರ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಟನೆ ಬಳಿಕ ಮಾನಸಿಕ ಖಿನ್ನತೆಗೊಳಗಾಗಿದ್ದೆ, ಹೀಗಾಗಿ ರೂಮ್ ಖಾಲಿ ಮಾಡಿದೆ. ನನ್ನನ್ನು ಕೊಲ್ಲಬೇಡಿ ಎಂದು ಆರೋಪಿಗಳ ಕಾಲಿಗೆ ಬೀಳುವ ಮೂಲಕ ಅಕ್ಷರಶಃ ಬೇಡಿಕೊಂಡಿದ್ದೇನೆ. ಆರೋಪಿಯು ಏಕಾಏಕಿ ಮನೆಗೆ ನುಗ್ಗಿ ಬಾಗಿಲಿಗೆ ಬೀಗ ಹಾಕಿದ್ದಾರೆ. ಆರೋಪಿಗಳು ಸುಮಾರು ಎರಡೂವರೆ ಗಂಟೆಗಳ ಕಾಲ ಕೋಣೆಯಲ್ಲಿದ್ದರು. ಕಟಿಂಗ್ ಪ್ಲೇಯರ್ ನನ್ನ ಹಣೆಯ ಮೇಲೆ ಎಸೆದಿದ್ದರಿಂದ, ಗಾಯವಾಗಿದೆ. ಹಾಗಾಗಿ, ಭಯಗೊಂಡು ಏನಾದರೂ ಆಗಿದೆಯೇ ಎಂದು ತಿಳಿದುಕೊಳ್ಳಲು ಸಿಟಿ ಸ್ಕ್ಯಾನ್ ಮಾಡಿಸಿದ್ದೇನೆ. ನಾನು ನನ್ನ ಊರಿಗೆ ಹೋಗಿದ್ದೆ ಮತ್ತು ನಡೆದ ಘಟನೆಯನ್ನು ಯಾರಿಗೂ ಹೇಳಿಲ್ಲ. ನಾನು ಕಳೆದ 15 ವರ್ಷಗಳಿಂದ ನಗರದಲ್ಲಿದ್ದೇನೆ. ಇದೇ ಮೊದಲ ಬಾರಿಗೆ ಇಂತಹ ಘಟನೆಯನ್ನು ಎದುರಿಸಿದ್ದೇನೆ” ಎಂದು ಸಂತ್ರಸ್ತ ಅಣ್ಣಾದೊರೈ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೆಣ್ಣು ಮಕ್ಕಳಿಬ್ಬರನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ದಂಪತಿ

“ಆರೋಪಿಗಳು ಪರಾರಿಯಾದ ನಂತರ ನಾನು ಪಕ್ಕದಲ್ಲೇ ಇರುವ ಮನೆಗೆಲಸದ ಮಹಿಳೆಯ ಮನೆಗೆ ಹೋಗಿ, ಅವರ ಮೊಬೈಲ್ ಫೋನ್‌ನಿಂದ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದೆ. ಕೆಲವೇ ನಿಮಿಷಗಳಲ್ಲಿ ಪೊಲೀಸರ ತಂಡ ನನ್ನನ್ನು ಭೇಟಿ ಮಾಡಿ ದೂರು ಸ್ವೀಕರಿಸಿದರು. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು. ಪೊಲೀಸರು ಇಷ್ಟು ಬೇಗನೆ ಪ್ರತಿಕ್ರಿಯಿಸುತ್ತಾರೆ ಎಂದು ನಾನು ನಿರೀಕ್ಷಿಸಿರಲಿಲ್ಲ” ಎಂದರು.

“ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇವರು ದೊಡ್ಡ ಗ್ಯಾಂಗ್‌ನ ಭಾಗವಾಗಿರುವ ಶಂಕೆ ಇದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಇದೀಗ ಐಪಿಸಿ ಸೆಕ್ಷನ್ 397 ಮತ್ತು ಐಸಿಪಿ ಸೆಕ್ಷನ್ 506ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...