ಬೆಂಗಳೂರು | ಕೆಪಿಸಿಎಲ್ 622 ಹುದ್ದೆಗಳಿಗೆ ಪರೀಕ್ಷೆ ನಡೆದರೂ ನೇಮಕಾತಿಯಾಗಿಲ್ಲ; ಅರ್ಹರಿಗೆ ನೇಮಕಾತಿ ಪತ್ರ ನೀಡಲು ಆಗ್ರಹ

Date:

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ (ಕೆಪಿಸಿಎಲ್) ಖಾಲಿ ಇರುವ 622 ಎ.ಇ ಮತ್ತು ಜೆ.ಇ ಹುದ್ದೆಗಳ ಭರ್ತಿಗೆ ‘ಇಂಜನಿಯರ್ ಕೆಮಿಸ್ಟ್ ಕೆಮಿಕಲ್ ಸೂಪರ್ ವೈಸರ್’ ನೇಮಕಾತಿ ಪರೀಕ್ಷೆ ನಡೆದಿದೆ. ಪರೀಕ್ಷಾ ಫಲಿತಾಂಶವೂ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಉತೀರ್ಣರಾದವರಿಗೆ ಇನ್ನೂ ನೇಮಕಾತಿ ಪತ್ರ ನೀಡಿಲ್ಲ. ಕೂಡಲೇ ನೇಮಕಾತಿ ಪತ್ರ ನೀಡಬೇಕೆಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ ಒತ್ತಾಯಿಸಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸಿದೆ. “ಕೆಪಿಸಿಎಲ್ ನೇಮಕಾತಿಗೆ 2017ರಲ್ಲಿಯೇ ಅಧಿಸೂಚನೆ ಹೊರಡಿಸಲಾಗಿತ್ತು. 2024ರ ಫೆಬ್ರವರಿಯಲ್ಲಿ ಪರೀಕ್ಷೆ ನಡೆಸಿ, ಫಲಿತಾಂಶವನ್ನೂ ಪ್ರಕಟಿಸಲಾಗಿದೆ. 2024ರ ಸೆಪ್ಟೆಂಬರ್‌ನಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನೂ ಪ್ರಕಟಿಸಲಾಗಿದೆ. ಆದರೆ, ಈಗ ನೇಮಕಾತಿಗೆ ಕಾನೂನು ತೊಡಕಿದೆ ಎಂಬ ನೆಪವೊಡ್ಡಿ ಕಳೆದ 5 ತಿಂಗಳಿನಿಂದ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸದೆ ವಿಳಂಬ ಮಾಡಲಾಗಿದೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ 8 ವರ್ಷಗಳಾಗಿವೆ. ಈಗಾಗಲೇ 8 ವರ್ಷಗಳ ವಿಳಂಬವಾಗಿದೆ. ಪರೀಕ್ಷೆ ಬರೆದು, ಆಯ್ಕೆಯಾಗಿರುವ ಹಲವಾರು ಯುವಜನರು ನಿರುದ್ಯೋಗದ ಸಮಸ್ಯೆ, ಕೌಟಂಬಿಕ ಸಮಸ್ಯೆಗಳಿಂದ ನೊಂದು-ಬೆಂದು ನರಕಯಾತನೆ ಅನುಭವಿಸುತ್ತಿದ್ದೇವೆ. ಎಲ್ಲ ಅಭ್ಯರ್ಥಿಗಳ ಜೀವನ ಅತಂತ್ರ ಸ್ಥಿತಿಯಲ್ಲಿದೆ. ಎಲ್ಲರ ಭವಿಷ್ಯ ಕೆಪಿಸಿಎಲ್ ನೇಮಕಾತಿಯ ಮೇಲೆಯೇ ನಿರ್ಧಾರವಾಗಿದೆ. ಕೂಡಲೇ ನೇಮಕಾತಿ ಪೂರ್ಣಗೊಳಿಸಿ, ಆದೇಶ ಪ್ರತಿ ನೀಡಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಮತ್ತು ಇಂಧನ ಸಚಿವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘದ ಅದ್ಯಕ್ಷ ಕಾಂತ್ ಕುಮಾರ್, ಉಪಾಧ್ಯಕ್ಷರಾದ ಶ್ರೇಯಸ್ಸು, ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್, ಕಾರ್ಯದರ್ಶಿ ಅಭಿಲಾಶ ರವರು ಉತೀರ್ಣರಾದ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...