ಬೆಂಗಳೂರು | ಸಹೋದ್ಯೋಗಿಯೊಂದಿಗೆ ಪತ್ನಿ ಸ್ನೇಹ: ಮನನೊಂದು ಪತಿ ಆತ್ಮಹತ್ಯೆ

Date:

  • ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ ಆಂಡ್ರ್ಯೂ ಅಕ್ಕ
  • ಆಸ್ಪತ್ರೆಯಲ್ಲಿ ಆಡಳಿತ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆಂಡ್ರ್ಯೂ ಪತ್ನಿ

42ರ ಹರೆಯದ ವ್ಯಕ್ತಿಯೊಬ್ಬ ತನ್ನ ಪತ್ನಿ ಆಕೆಯ ಸಹೋದ್ಯೋಗಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಮನನೊಂದು ಸುಬ್ರಹ್ಮಣ್ಯನಗರದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಘಟನೆ ಜೂನ್ 16ರಂದು ನಡೆದಿದೆ. ಮೃತ ವ್ಯಕ್ತಿಯ ಹೆಸರು ಆಂಡ್ರ್ಯೂ (ಹೆಸರು ಬದಲಾಯಿಸಲಾಗಿದೆ). ಇವರು ಖಾಸಗಿ ಬ್ಯಾಂಕ್‌ನಲ್ಲಿ ಸಹಾಯಕ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ದಂಪತಿಗೆ ಇಬ್ಬರು ಮಕ್ಕಳಿದ್ದರು. ಈ ಕುಟುಂಬ ಮೊದಲಿಗೆ ವಿದ್ಯಾರಣ್ಯಪುರದಲ್ಲಿ ವಾಸಿಸುತ್ತಿತ್ತು. ಆಂಡ್ರ್ಯೂ ಅವರ ಪತ್ನಿ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಆಡಳಿತ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಂಡ್ರ್ಯೂ ಪತ್ನಿ ತಾನು ಕಾರ್ಯನಿರ್ವಹಿಸುವ ಆಸ್ಪತ್ರೆಗೆ ಹತ್ತಿರವಾಗಲು ಸುಬ್ರಹ್ಮಣ್ಯನಗರದಲ್ಲಿ ತನ್ನ ವೈದ್ಯ ಸಹೋದ್ಯೋಗಿಯೊಬ್ಬರ ಸಹಾಯದಿಂದ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದರು.

ಬಳಿಕ ಮಹಿಳೆಯು ತನ್ನ ಸಹೋದ್ಯೋಗಿ ವೈದ್ಯರೊಂದಿಗೆ ನಿಕಟ ಸಂಬಂಧವನ್ನು ಬೆಳೆಸಿಕೊಂಡರು. ದಿನಕಳೆದಂತೆ ಕೆಲಸಕ್ಕೆ ಕರೆದುಕೊಂಡು ಹೋಗುವುದು ಮನೆಗೆ ಕರೆದುಕೊಂಡು ಬಂದು ಬಿಡುವ ಕೆಲಸವನ್ನು ವೈದ್ಯರೇ ಮಾಡಲು ಪ್ರಾರಂಭಿಸಿದರು. ಆಂಡ್ರ್ಯೂ ಅವರ ಕುಟುಂಬದ ವಿಷಯಗಳಲ್ಲಿ ವೈದ್ಯರು ಸಹ ತಲೆಹಾಕತೊಡಗಿದರು.

ಈ ವಿಚಾರ ಆಂಡ್ರ್ಯೂ ಅವರನ್ನು ಬಹಳ ವಿಚಲಿತಗೊಳಿಸಿತು. ಈ ಬಗ್ಗೆ ಆಂಡ್ರ್ಯೂ ಅವರು ತಮ್ಮ ಸಹೋದರಿಯೊಂದಿಗೆ ಹೇಳಿಕೊಂಡಿದ್ದರು ಹಾಗೂ ತಾವು ಇದರಿಂದ ತೀವ್ರ ಮಾನಸಿಕ ನೋವು ಅನುಭವಿಸುತ್ತಿದ್ದೇನೆ ಎಂದಿದ್ದರು.

ಈ ಬಗ್ಗೆ ಆಂಡ್ರ್ಯೂ ಅಕ್ಕ ಸುಬ್ರಹ್ಮಣ್ಯನಗರ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಪ್ರಕಾರ ಶುಕ್ರವಾರ ಬೆಳಗ್ಗೆ 8.30ಕ್ಕೆ ಆಂಡ್ರ್ಯೂ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪತ್ನಿಗೆ ಕರೆ ಮಾಡಿದ್ದರು. ಅವರ ತಮ್ಮನ ಸಾವಿಗೆ ವೈದ್ಯರೇ ಕಾರಣ ಎಂದು ದೂಷಿಸಿದರು.

ಈ ಸುದ್ದಿ ಓದಿದ್ದೀರಾ? ತನ್ನ ಶಾಲೆಗಳನ್ನು ಶಿಕ್ಷಣ ಇಲಾಖೆಯ ಸ್ವಾಧೀನಕ್ಕೆ ತೆಗೆದುಕೊಳ್ಳುವಂತೆ ಮನವಿ ಮಾಡಿದ ಬಿಬಿಎಂಪಿ

ಆಂಡ್ರ್ಯೂ ಅಕ್ಕ ನೀಡಿದ ದೂರಿನ ಆಧಾರದ ಮೇಲೆ ಸುಬ್ರಹ್ಮಣ್ಯನಗರ ಪೊಲೀಸರು ವೈದ್ಯರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 306ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವನ್ನು ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...