ಬೆಂಗಳೂರು | ಸೆ.21 ರಂದು ಮೆಟ್ರೋ ಸೇವೆಯಲ್ಲಿ ವ್ಯತ್ಯಯ; ಎಲ್ಲೆಲ್ಲಿ? ಇಲ್ಲಿದೆ ನೋಡಿ

Date:

ಕೃಷ್ಣರಾಜಪುರದಿಂದ ಗರುಡಾಚಾರ್‌ಪಾಳ್ಯ ನಡುವೆ ಸೆ.21 ರಂದು ಇಡೀ ದಿನ ನಮ್ಮ ಮೆಟ್ರೋ ರೈಲು ಸಂಚಾರ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಗಮ, “ಸೆ.21 ರಂದು ಕೃಷ್ಣರಾಜಪುರದಿಂದ ಗರುಡಾಚಾರ್‌ಪಾಳ್ಯ ನಡುವೆ ಪೂರ್ಣ ದಿನ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅದೇ ದಿನ ಬೈಯಪ್ಪನಹಳ್ಳಿ ಮತ್ತು ಇಂದಿರಾನಗರ ನಡುವೆ ಮಧ್ಯಾಹ್ನ 1.30 ಗಂಟೆಯಿಂದ 4.30 ಗಂಟೆಯವರೆಗೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ” ಎಂದು ಹೇಳಿದೆ.

“ಸೆ.21 ರಂದು ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಸುರಕ್ಷತಾ ಪರಿಶೀಲನೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ನಡೆಸಲಿದ್ದಾರೆ. ಮೆಟ್ರೋ ರೈಲು ಕಾರ್ಯಾಚರಣೆಗಳಲ್ಲಿ ಬದಲಾವಣೆ ಮಾಡಲಾಗಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ; ತಂಬಾಕು ಉತ್ಪನ್ನ ಖರೀದಿ ವಯೋಮಿತಿ 21 ವರ್ಷಕ್ಕೆ ಏರಿಕೆ: ದಿನೇಶ್ ಗುಂಡೂರಾವ್

“ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಗರುಡಾಚಾರ್ ಪಾಳ್ಯ ನಡುವೆ ಪೂರ್ಣ ದಿನ ಹಾಗೂ ಇಂದಿರಾನಗರ ಮತ್ತು ಕೆಂಗೇರಿ ನಡುವೆ ಮಧ್ಯಾಹ್ನ 1.30 ಗಂಟೆಯಿಂದ 4.30 ಗಂಟೆಯವರೆಗೆ ಮೆಟ್ರೋ ರೈಲು ಸೇವೆ ಲಭ್ಯವಿರಲಿದೆ. ಮಧ್ಯಾಹ್ನ 1.30 ವರೆಗೆ ಮತ್ತು ಸಂಜೆ 4.30 ಗಂಟೆಯ ನಂತರ ಬೈಯಪ್ಪನಹಳ್ಳಿ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳು ಎಂದಿನಂತೆ ರಾತ್ರಿ 11 ರವರೆಗೆ ಲಭ್ಯವಿರಲಿವೆ” ಎಂದು ಹೇಳಿದೆ.

ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಆದ ಬದಲಾವಣೆಯನ್ನು ಗಮನಿಸಬೇಕು. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ನಿಗಮ ವಿಷಾದಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...