ಬೆಂಗಳೂರು | ದುಪ್ಪಟ್ಟಾದ ತರಕಾರಿ ಬೆಲೆ

Date:

  • ರಾಜ್ಯಕ್ಕೆ ತಮಿಳುನಾಡಿನ ನಾಮಕ್ಕಲ್‌ನಿಂದ ಮೊಟ್ಟೆ ಆಮದು
  • ಊಟಿ ಸೇರಿದಂತೆ ಇನ್ನಿತರ ಪ್ರದೇಶಗಳಿಂದ ಹಾಪ್‌ಕಾಮ್ಸ್‌ಗೆ ತರಕಾರಿ

ಇತ್ತೀಚೆಗೆ ರಾಜ್ಯದ ಕೆಲವೆಡೆ ಸುರಿದ ಭಾರೀ ಮಳೆಯಿಂದಾಗಿ ತರಕಾರಿಗಳು ಕೊಳೆತು ನಾಶವಾಗಿವೆ. ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ತರಕಾರಿಗಳು ಸರಬರಾಜು ಆಗಿದೆ. ಈ ಹಿನ್ನೆಲೆ, ಬೆಂಗಳೂರಿನ ಮಾರುಕಟ್ಟೆಗಳಲ್ಲಿ ತರಕಾರಿಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ.

ಬೆಂಗಳೂರಿನ ಕಲಾಸಿಪಾಳ್ಯ, ಕೆ ಆರ್‌ ಮಾರುಕಟ್ಟೆ, ಮಲ್ಲೇಶ್ವರಂ, ಯಶವಂತಪುರ ಮಾರುಕಟ್ಟೆ ಸೇರಿದಂತೆ ಹಾಪ್‌ಕಾಮ್ಸ್‌ಗಳಲ್ಲಿಯೂ ಕೂಡ ತರಕಾರಿಗಳ ಬೆಲೆ ದುಪ್ಪಟ್ಟಾಗಿದೆ. ದರ ಏರಿಕೆಗೆ ಜನ ಕಂಗಾಲಾಗಿದ್ದಾರೆ.

ಹೊಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಸೇರಿದಂತೆ ನಾನಾ ಪ್ರದೇಶಗಳಿಂದ ಬೆಂಗಳೂರಿಗೆ ತರಕಾರಿ ಪೂರೈಕೆಯಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಪ್‌ಕಾಮ್ಸ್‌ಗೆ ಊಟಿ ಸೇರಿದಂತೆ ಇನ್ನಿತರ ಪ್ರದೇಶಗಳಿಂದ ತರಕಾರಿ ಬರುತ್ತದೆ. ಸಾಗಾಣಿಕ ವೆಚ್ಚ ಹೆಚ್ಚಾದ ಹಿನ್ನೆಲೆ ಇಲ್ಲಿಯೂ ಬೆಲೆ ಏರಿಕೆಯಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಕೆಜಿಗೆ ₹40 ಮಾರಾಟವಾಗುತ್ತಿದ್ದ ಬೀನ್ಸ್‌ ಬೆಲೆ ಇದೀಗ ₹120 ದಾಟಿದೆ. ಬದನೆಕಾಯಿ ಕೆಜಿಗೆ ₹35 ಇದ್ದ ದರ ಇದೀಗ ₹80 ದಾಟಿದೆ. ಇನ್ನುಳಿದಂತೆ ₹100 ಇದ್ದ ಹಸಿ ಶುಂಠಿ ದರ ಇದೀಗ ಚಿಲ್ಲರೆ ಮಾರುಕಟ್ಟೆಯಲ್ಲಿ ₹220 ಇದೆ. ಹಾಪ್‌ಕಾಮ್ಸ್‌ನಲ್ಲಿ ₹235 ಇದೆ.

ಮಳೆ ಅಬ್ಬರವೇ ತರಕಾರಿಗಳ ಬೆಲೆ ಗಗನಕ್ಕೇರಲು ಕಾರಣ. ಕೆಲ ದಿನಗಳ ಹಿಂದೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಬೆಂಗಳೂರಿನ ಸುತ್ತಮುತ್ತ ಸುರಿದ ಮಳೆಯಿಂದ ತರಕಾರಿ ಬೆಳೆಗಳಿಗೆ ಹಾನಿಯಾಗಿತ್ತು. ಹೀಗಾಗಿ, ಇಳುವರಿ ಕಡಿಮೆಯಾಗಿದ್ದು ರಾಜಧಾನಿಗೆ ಪೂರೈಕೆಯಾಗುವ ತರಕಾರಿಗಳ ಬೆಲೆ ಹೆಚ್ಚಾಗಿವೆ.

ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿನಿ ಸಾವು | ಬಸ್‌ ಚಾಲಕರಿಗೆ ನಿರ್ದೇಶನ ನೀಡಿದ ಕೆಎಸ್‌ಆರ್‌ಟಿಸಿ

ಈ ಬಗ್ಗೆ ಈ ದಿನ.ಕಾಮ್‌ ಜೊತೆಗೆ ಮಾತನಾಡಿದ ಹಾಪ್‌ಕಾಮ್ಸ್‌ನ ಪುಟ್ಟಸ್ವಾಮಿ, “ಈ ದಿನ ತರಕಾರಿ ದರಗಳು ಹೆಚ್ಚಾಗಿವೆ. ಮಳೆಯ ಕಾರಣ ತರಕಾರಿಗಳು ಕೊಳೆತಿದ್ದು, ಇಳುವರಿ ಕಡಿಮೆ ಆಗಿದೆ. ಮೆಣಸಿನಕಾಯಿ ಕೆಜಿಗೆ ₹99, ಬೀನ್ಸ್‌ ₹125, ಮೂಲಂಗಿ ₹48, ಗುಂಡುಬದನೆ ₹76, ಟೊಮೆಟೋ ₹46, ಬಟಾಣಿ ಕಾಳು ₹148, ಬ್ರೊಕೋಲಿ ₹200, ನವಿಲುಕೋಸು ₹63, ನುಗ್ಗೆಕಾಯಿ ₹80, ಕೊತ್ತಂಬರಿ ಸೊಪ್ಪು ₹108, ಬೆಂಡೆಕಾಯಿ ₹54, ₹ಪುದಿನಾ ಕೆಜಿಗೆ ₹60 ಇದೆ” ಎಂದು ತಿಳಿಸಿದರು.

ರಾಜ್ಯದ ಕೆಲವೆಡೆ ಬೇಸಿಗೆ ಹೆಚ್ಚಾದ ಪರಿಣಾಮ ಮೊಟ್ಟೆಯ ದರ ಒಂದಕ್ಕೆ ₹6 ರಿಂದ ₹7 ಇದೆ. ಈ ದರ ಇನ್ನೂ ಎರಡು ತಿಂಗಳು ಮುಂದುವರೆಯುವ ಸಾಧ್ಯತೆಯಿದೆ. ತಮಿಳುನಾಡಿನ ನಾಮಕ್ಕಲ್‌ನಿಂದ ರಾಜ್ಯಕ್ಕೆ ಮೊಟ್ಟೆ ಬರುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...