ಬೆಂಗಳೂರು | ಮದ್ಯ ಸೇವಿಸಿ ಟ್ಯಾಂಕರ್ ಚಾಲನೆ; ಪಾದಾಚಾರಿಗಳ ಸಾವು

Date:

ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿ ಬಳಿ ಟ್ಯಾಂಕರ್ ವಾಹನ ಹರಿದು ಇಬ್ಬರು ಪಾದಚಾರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.

ಆಶಿಕ್ (28), ಮನೋಜ್ ಕುಮಾರ್(30) ಮೃತ ದುರ್ದೈವಿಗಳು. ಟ್ಯಾಂಕರ್ ವಾಹನ ಚಾಲನೆ ಮಾಡುವ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನು. ಈ ವೇಳೆ, ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ ಬಯೋಕಾನ್ ಕಂಪನಿ ಮುಂಭಾಗದಲ್ಲಿ ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಟ್ಯಾಂಕರ್ ಹೆದ್ದಾರಿಯಲ್ಲಿದ್ದ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.

ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಹೆಬ್ಬಗೋಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್​​ನನ್ನು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...