‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್‌ ಪ್ರಕರಣ: ಮೂವರ ವಿರುದ್ಧ ಎಫ್‌ಐಆರ್ ದಾಖಲು

Date:

ಬೆಂಗಳೂರಿನ ಶೇಷಾದ್ರಿಪುರದ ಜೆ.ಪಿ.ಭವನ ಜನತಾದಳ (ಜೆಡಿಎಸ್‌) ಕಚೇರಿ ಕಂಪೌಂಡ್‌ ಗೋಡೆಯ ಮೇಲೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಆಗಿ ಪೋಸ್ಟರ್‌ ಅಂಟಿಸಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಪೊಲೀಸ್‌ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹೆಚ್‌.ಎಂ.ರಮೇಶ್‌ಗೌಡ ನೀಡಿದ ದೂರಿನ ಮೇರೆಗೆ ಬಿಂದು, ನವೀನ್‌ಗೌಡ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೀಪಾವಳಿ ಹಬ್ಬದ ಹಿನ್ನೆಲೆ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಜೆಪಿ ನಗರದಲ್ಲಿರುವ ಮನೆಗೆ ದೀಪಾಲಂಕಾರ ಮಾಡಲಾಗಿತ್ತು. ರಸ್ತೆ ಬದಿ ಇರುವ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ತೆಗೆದುಕೊಳ್ಳಲಾಗಿತ್ತು. ಈ ಬಗ್ಗೆ ಕಾಂಗ್ರೆಸ್‌ ವಿಡಿಯೋ ಜತೆಗೆ ಟ್ವೀಟ್ ಮಾಡಿತ್ತು.

ವಿದ್ಯುತ್‌ ಕಳವು ಆರೋಪದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ಕೂಡ ದಾಖಲಾಗಿತ್ತು. ಈ ನಡುವೆ ನವೆಂಬರ್‌ 14ರಂದು ರಾತ್ರಿ 10 ಗಂಟೆ ಸುಮಾರಿಗೆ ಕಿಡಿಗೇಡಿಗಳು ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’, ʼಕರೆಂಟ್‌ ಕಳ್ಳ ಕುಮಾರಸ್ವಾಮಿʼ ಎಂದು ಅವಹೇಳನಕಾರಿ ಬರಹವುಳ್ಳ ಪೋಸ್ಟರ್‌ಗಳನ್ನು ಶೇಷಾದ್ರಿಪುರದ ಜೆ.ಪಿ. ಭವನ (ಜೆಡಿಎಸ್‌ ಕಚೇರಿ) ಕಂಪೌಂಡ್‌ ಮೇಲೆ ಅಂಟಿಸಿ ಪರಾರಿಯಾಗಿದ್ದಾರೆ ಎಂದು ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಎಚ್‌.ಎಂ.ರಮೇಶ್‌ಗೌಡ ಅವರು ಆರೋಪಿಸಿ ಠಾಣೆಗೆ ದೂರು ನೀಡಿದ್ದರು.

ಕುಮಾರಸ್ವಾಮಿ ಕರೆಂಟ್ 200 ಯುನಿಟ್ ಮಾತ್ರ ಉಚಿತ ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ. ಕರೆಂಟ್ ಕದ್ದರೂ ಎಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು ಎಂದು ಪೋಸ್ಟರ್‌ಗಳಲ್ಲಿ ಬರೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗುರುವಾರ ಬೆಳ್ಳಂಬೆಳಗ್ಗೆ ಡ್ರೈ ಫ್ರೂಟ್ಸ್​​ ಅಂಗಡಿ, ಮಾಲೀಕರ ಮನೆ ಮೇಲೆ ಐಟಿ ದಾಳಿ

ಆ ದಿನ ರಾತ್ರಿ ಆಟೋದಲ್ಲಿ ಬಂದ ಅಪರಿಚಿತರು ಜೆಡಿಎಸ್‌ ವಿರುದ್ಧ ಘೋಷಣೆ ಕೂಗಿದ್ದಾರೆ. ಭದ್ರತಾ ಸಿಬ್ಬಂದಿ ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಮಹಾದೇವ್‌ ರುವಾನಿಯವರನ್ನು ನಿಂದಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನವೀನ್‌ಗೌಡ ಹಾಗೂ ಬಿಂದು ಕೀಳುಮಟ್ಟದಲ್ಲಿ ಪೋಸ್ಟ್‌ ಹರಿಯಬಿಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಪೋಸ್ಟರ್‌ ಕುರಿತು ಜೆಡಿಎಸ್‌ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ನವೆಂಬರ್‌ 14ರಂದು ರಾತ್ರಿಯೇ ಪೋಸ್ಟರ್‌ ತೆರವುಗೊಳಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...