ಬೆಂಗಳೂರು | ಸಾಕಾಗಿದೆ ಸಾಯಿ ಲೇಔಟ್ ಬದುಕು; ಸಾಧಾರಣ ಮಳೆಗೆ ಮುಳುಗಿದ ಬಡಾವಣೆ

Date:

ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಮಳೆ ಅಬ್ಬರ ಹೆಚ್ಚಾಗಿದೆ. ಧಾರಾಕಾರವಾಗಿ ಮಳೆ ಸುರಿಯದಿದ್ದರೂ, ನಿರಂತರವಾಗಿ ಸಾಧಾರಣ ಮಳೆ ಸುರಿಯುತ್ತಿದೆ. ಸಣ್ಣ ಪ್ರಮಾಣದಲ್ಲಿ ಬೀಳುತ್ತಿರುವ ಮಳೆಗೆ ಬೆಂಗಳೂರು ಜಲಾವೃತಗೊಳ್ಳುತ್ತಿದೆ. ನೀರು ಹರಿಯಲು ಉತ್ತಮ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳು, ಬೀದಿಗಳಲ್ಲಿ ಪ್ರವಾಹದಂತೆ ನೀರು ಹರಿಯುತ್ತಿದೆ. ಅದರಲ್ಲೂ, ಶ್ರೀಸಾಯಿ ಲೇಔಟ್, ಮಾನ್ಯತಾ ಟೆಕ್‌ಪಾರ್ಟ್‌ಗಳು ನೀರಿನಲ್ಲಿ ಮುಳುಗಿಹೋಗಿವೆ. ಸಾಯಿ ಲೇಔಟ್‌ನ ಜನರ ಬದುಕು ದುಸ್ತರವಾಗಿದೆ.

ಸೋಮವಾರ ಸುರಿದ ಮಳೆಗೆ ಶೀಸಾಯಿ ಲೇಔಟ್‌ ನೀರಿನಲ್ಲಿ ಮುಳುಗಿಹೋಗಿತ್ತು. ರಸ್ತೆ, ಬೀದಿಗಳಲ್ಲಿ ಆಳೆತ್ತರಕ್ಕೆ ನೀರು ನಿಂತಿತ್ತು. ಮಳೆಗಳು, ಕಚೇರಿಗಳು, ಅಂಗಡಿ ಮುಂಗಟ್ಟುಗಳೂ ಜಲಾವೃತಗೊಂಡಿದ್ದವು. ಜನರು ತಮ್ಮ ಮನೆಯ ತಾರಸಿಗಳಲ್ಲಿ ರಾತ್ರಿ ಕಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಎಲ್ಲೆಡೆ ನೀರು ನುಗ್ಗಿದ್ದರಿಂದಾಗಿ ಗೃಹೋಪಯೋಗಿ ವಸ್ತುಗಳು, ಆಹಾರ ಪದಾರ್ಥಗಳು, ವಾಹನಗಳು ನೀರಿನಲ್ಲಿ ತೋಯ್ದು-ಕೊಚ್ಚಿ ಹೋಗಿವೆ. ಕೋಟ್ಯಂತರ ಮೌಲ್ಯದ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂದು ಹೇಳಲಾಗಿದೆ. ಅಲ್ಲಿನ ನಿವಾಸಿಗಳಿಗೆ ಬಿಬಿಎಂಪಿ ನೌಕರರು ಬೋಟ್‌ ಮತ್ತು ಟ್ರ್ಯಾಕ್ಟರ್‌ಗಳ ಮೂಲಕ ಆಹಾರದ ವಿತರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ: ಗುಲಬರ್ಗಾ ವಿವಿ ಕರ್ಮಕಾಂಡ-3: ಮೂರು ವರ್ಷಗಳಿಂದ 9,024 ಫಲಿತಾಂಶ ಪೆಂಡಿಂಗ್!

ಸ್ಥಳಕ್ಕೆ ಶಾಸಕ ಬೈರತಿ ಬಸವರಾಜು, ಬಿಬಿಎಂಪಿ ಅಡಳಿತಾಧಿಕಾರಿ ತುಷಾರ್ ಗಿರಿನಾಥ್ ಹಾಗೂ ಬಿಡಿಎ ಆಯುಕ್ತ ಜಯರಾಂ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

“ಲೇಔಟ್‌ನಲ್ಲಿನ ನೀರು ಸಂಪೂರ್ಣವಾಗಿ ಹರಿದು ಹೋಗಲು ಹೆಚ್ಚು ಸಮಯ ಬೇಕು. ಮಂಗಳವಾರ ರಾತ್ರಿಯೂ ಮತ್ತೆ ಮಳೆಯಾದರೆ, ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಜಲವೃತ ಪ್ರದೇಶಗಳಿಂದ ಹೊರಬರುವಂತೆ ಅಲ್ಲಿನ ನಿವಾಸಿಗಳಿಗೆ ತಿಳಿಸಿದ್ದೇವೆ. ಅಲ್ಲೇ ಇರುವವರಿಗೆ ಆಹಾರ ಪೂರೈಕೆ ಮಾಡುತ್ತಿದ್ದೇವೆ” ಎಂದು ಗಿರಿನಾಥ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...