ಬೆಂಗಳೂರು | ಎಲ್ಲವನ್ನೂ ಪುಕ್ಸಟೆ ಕೊಡಲಾಗದು, ತೆರಿಗೆ ಪಾವತಿಸಲೇಬೇಕು: ಡಿ ಕೆ ಶಿವಕುಮಾರ್

Date:

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಆಸ್ತಿ ತೆರಿಗೆ ವಿಚಾರದಲ್ಲಿರುವ ಕೆಲವು ಸಮಸ್ಯೆಗಳು ಗಮನಕ್ಕೆ ಬಂದಿವೆ. ಕೂಡಲೇ ಆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಕಾನೂನು ಪರಿಮಿತಿಯೊಳಗೆ ಎಷ್ಟು ತೆರಿಗೆ ಕಡಿಮೆ ಮಾಡಲು ಸಾಧ್ಯವೋ ಅಷ್ಟು ತೆರಿಗೆ ಕಡಿಮೆ ಮಾಡುತ್ತೇವೆ. ಎಲ್ಲವನ್ನೂ ಪುಕ್ಸಟೆ ಕೊಡಲು ಆಗುವುದಿಲ್ಲ. ಕೊಟ್ಟರೆ, ಅದಕ್ಕೆ ಅರ್ಥವೂ ಇರುವುದಿಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು, ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಪಶ್ಚಿಮ ವಲಯದ ಗಾಂಧಿನಗರ, ಮಲ್ಲೇಶ್ವರ ಹಾಗೂ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಶೇಷಾದ್ರಿಪುರಂನ ಶಿರೂರ್ ಆಟದ ಮೈದಾ‌ನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಕಲ‌ ಚೇತನರು ಹಾಗೂ ಹಿರಿಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಅವರು, “ಬೆಂಗಳೂರು ದಕ್ಷಿಣ, ಹೆಬ್ಬಾಳದಲ್ಲಿ ತೆರಿಗೆ ಸಮಸ್ಯೆ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ಪತ್ರ ಬರೆದಿದ್ದಾರೆ. 2020ರಲ್ಲಿ ಬಿಬಿಎಂಪಿ ಏನು ಕಾಯಿದೆ ಮಾಡಿದೆ ಎಂಬ ಬಗ್ಗೆ ಗಮನಿಸುತ್ತೇನೆ. ಈ ಬಗ್ಗೆ ಪುನರ್ ಪರಿಶೀಲನೆ ಮಾಡುತ್ತೇವೆ. ತೆರಿಗೆ ಕಡಿಮೆ ಮಾಡಲು ಎಷ್ಟು ಸಾಧ್ಯವೋ ಅಷ್ಟು ತೆರಿಗೆ ಕಡಿಮೆ ಮಾಡುತ್ತೇವೆ. 30–40 ಸೈಟ್ ಇರುವವರಿಗೆ, ಬಡವರಿಗೆ ರಿಯಾಯಿತಿ ಕೊಡಬೇಕೆಂಬ ಚಿಂತನೆ ಇದೆ. ಹಾಗೆಯೇ, ನಿಯಮದಲ್ಲಿ ಸ್ವಲ್ಪ ಸಡಿಲಿಕೆ ನೀಡಬೇಕು ಎಂದುಕೊಂಡಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾರೂ ಕೂಡ ತೆರಿಗೆ ಬಗ್ಗೆ ಗಾಬರಿಯಾಗಬೇಡಿ. ಶೆಡ್, ಶೀಟ್ ಕಟ್ಟಿಕೊಟ್ಟಿರುವವರ ಬಗ್ಗೆ ಗಮನ ಹರಿಸುತ್ತೇವೆ. ಕಾನೂನು ಪರಿಮಿತಿಯೊಳಗೆ ತೆರಿಗೆ ಕಡಿಮೆ ಮಾಡಲು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡುತ್ತೇವೆ” ಎಂದರು.

“ಕೆಲವು ಜನ ಒಂದು ಅಂತಸ್ತು ಮನೆ ಕಟ್ಟುವುದಾಗಿ ಹೇಳಿ, ಮೂರು ಅಂತಸ್ತು ಮನೆ ಕಟ್ಟಿಸುತ್ತಿದ್ದಾರೆ. ಸರ್ಕಾರಕ್ಕೆ ತೆರಿಗೆ ಕಟ್ಟದೇ ಇರುವುದು ತಪ್ಪು. ಖಾತೆ ಯಾರ ಹೆಸರಲ್ಲಿದೆಯೇ ಅವರಿಗೆ ಉಚಿತವಾಗಿ ದಾಖಲೆಗಳನ್ನು ನೀಡಲು ಮುಂದಾಗುತ್ತೇವೆ. ಹಿಂದಿನ‌ ಸರ್ಕಾರ 1 ಲಕ್ಷ ವಸತಿ ಮನೆಗಳನ್ನು ಘೋಷಿಸಿ ಕೊಟ್ಟಿಲ್ಲ” ಎಂದು ಡಿಕೆ ಶಿವಕುಮಾರ್ ಹೇಳಿದರು.

“ರಾತ್ರಿ 10 ಗಂಟೆಯಾದರೂ ನಿಮ್ಮ ಎಲ್ಲರ ಸಮಸ್ಯೆಗಳನ್ನು ಕೇಳಿಯೇ ಹೋಗುತ್ತೇನೆ. ನಿಮ್ಮ ಸಮಸ್ಯೆಗಳನ್ನು ನೋಂದಾಯಿಸಿಕೊಳ್ಳಿ” ಎಂದು ಜನರಿಗೆ ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೊಲೀಸರ ಸಮ್ಮುಖದಲ್ಲಿಯೇ ಕೊಲೆ ಆರೋಪಿಯ ಮನೆಗೆ ಬೆಂಕಿ

ಈ ವೇಳೆ ಸಚಿವರು ಹಾಗೂ ಸ್ಥಳೀಯ ಶಾಸಕ ದಿನೇಶ್ ಗುಂಡೂರಾವ್, ಬಿ.ಝಡ್ ಜಮೀರ್ ಅಹ್ಮದ್ ಖಾನ್, ಮಲ್ಲೇಶ್ವರಂ ಶಾಸಕ ಡಾ. ಸಿ.ಎನ್ ಅಶ್ವತ್ಥ ನಾರಾಯಣ್, ಮಾಜಿ ರಾಜ್ಯಸಭಾ ಸದಸ್ಯ ರಾಜೀವ್ ಗೌಡ, ಆಡಳಿತಗಾರ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಜಯರಾಮ್, ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಹಾಗೂ ನಾನಾ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...