ಬೆಂಗಳೂರು | ಭ್ರೂಣಲಿಂಗ ಹತ್ಯೆ ಪ್ರಕರಣ: ಮತ್ತೋರ್ವ ನರ್ಸ್​​ ಬಂಧನ

Date:

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕರ್ನಾಟಕದಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಲಿಂಗಾನುಪಾತದ ಸಮತೋಲನವನ್ನು ಕಾಪಾಡುವುದು ‘ಭ್ರೂಣ ಹತ್ಯೆ ನಿಷೇಧ’ ಕಾಯ್ದೆಯ ಮೂಲ ಉದ್ದೇಶ. ಆದರೂ, ರಾಜ್ಯದ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುವ ಗ್ಯಾಂಗ್‌ವೊಂದು ಸಕ್ರಿಯವಾಗಿರುವುದು ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಜನರನ್ನು ಬಂಧಿಸಿರುವ ಬೆಂಗಳೂರು ಪೊಲೀಸರು ಇದೀಗ ಮೈಸೂರಿನ ಖಾಸಗಿ ಆಸ್ಪತ್ರೆಯ ನರ್ಸ್‌ವೊಬ್ಬರನ್ನು ಬಂಧಿಸಿದ್ದಾರೆ.

ಉಷಾರಾಣಿ ಬಂಧಿತ ಆರೋಪಿ. ಬೈಯ್ಯಪ್ಪಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆಕೆಯ ಬಂಧನದಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಭ್ರೂಣ ಹತ್ಯೆ ಮಾಡುವ ವಿಚಾರ ಬೆಳಕಿಗೆ ಬಂದ ನಂತರ ಉಷಾರಾಣಿ ಕಾರ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಯಲ್ಲಿ ನರ್ಸ್‌ ಕೆಲಸ ಬಿಟ್ಟು, ಬೇರೆ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಕೆ ಗರ್ಭಪಾತ ಮಾಡಿಸುತ್ತಿದ್ದರು. ಜತೆಗೆ, ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು. ಉಷಾರಾಣಿ ಈ ಪ್ರಕರಣದ ಮತ್ತೋರ್ವ ಆರೋಪಿ ಬ್ರೋಕರ್ ಪುಟ್ಟರಾಜು ಅವರ ಸಂಬಂಧಿಯಾಗಿದ್ದಾರೆ. ಪುಟ್ಟರಾಜು ಹೇಳಿದ ಹಾಗೆ ಈಕೆ ಕೆಲಸ ನಿರ್ವಹಿಸುತ್ತಿದ್ದರು.

ಬೈಯ್ಯಪ್ಪಹಳ್ಳಿ ಪೊಲೀಸರು ಬ್ರೋಕರ್ಪುಟ್ಟರಾಜು ಅನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸತ್ಯ ಹೊರಬಂದಿದೆ. ಸದ್ಯ ಪುಟ್ಟರಾಜು ಜಾಮೀನು ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಇಬ್ಬರ ಬಂಧನ

ಸದ್ಯ ಉಷಾರಾಣಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...