ಬೆಂಗಳೂರು | ₹25 ಸಾವಿರ ಲಂಚ ಪಡೆದ ಹೆಡ್ ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ ದಾಖಲು

Date:

ಕ್ರಿಮಿನಲ್ ಬೆದರಿಕೆ ಮತ್ತು ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯ ಹೆಸರನ್ನು ಚಾರ್ಜ್‌ಶೀಟ್‌ನಿಂದ ತೆಗೆದುಹಾಕಲು ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ವೊಬ್ಬರು ₹25,000 ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಕಾನ್‌ಸ್ಟೆಬಲ್‌ ಅನ್ನು ಅಧಿಕಾರಿಗಳು ಮಂಗಳವಾರ ರೆಡ್‌ಹ್ಯಾಂಡ್‌ ಆಗಿ ಸೆರೆಹಿಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಎನ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಎಂ ಲೋಕೇಶ್ ಬಂಧಿತ ಆರೋಪಿ. ಇವರು ಕ್ರಿಮಿನಲ್ ಬೆದರಿಕೆ, ದೌರ್ಜನ್ಯ ಮತ್ತು ಐಟಿ ಕಾಯ್ದೆ ಪ್ರಕರಣದ ಆರೋಪಿ ರಮೇಶ್ ಎಂಬಾತನ ಹೆಸರನ್ನು ಚಾರ್ಜ್‌ಶೀಟ್‌ನಿಂದ ತೆಗೆದುಹಾಕಲು ಮತ್ತು ಜಾಮೀನು ವ್ಯವಸ್ಥೆ ಮಾಡಲು ಆರೋಪಿ ರಮೇಶ್ ತಾಯಿ ಬಳಿ ₹50,000 ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಆರೋಪಿ ರಮೇಶ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಟ್ಟಡದಿಂದ ಬಿದ್ದು ಉದ್ಯಮಿ ಅನುಮಾನಾಸ್ಪದ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಡ್ ಕಾನ್‌ಸ್ಟೆಬಲ್‌ ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಆರೋಪಿ ರಮೇಶ್ ತಾಯಿ ರೂಪಾ ದೂರು ನೀಡಿದ್ದರು. ಹೆಡ್ ಕಾನ್‌ಸ್ಟೆಬಲ್‌ ಲೋಕೇಶ್, ರೂಪಾ ಅವರಿಂದ ₹25 ಸಾವಿರ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಬಲೆ ಬೀಸಿ ರೆಡ್ ಹ್ಯಾಂಡ್ ಹಿಡಿದಿದ್ದಾರೆ.

ಹೆಡ್ ಕಾನ್‌ಸ್ಟೆಬಲ್‌ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...