ಬೆಂಗಳೂರು | ಬಿಲ್ಡರ್ ಅಪಹರಿಸಿ ಕಿರುಕುಳ ನೀಡಿದ 8 ಜನರ ವಿರುದ್ಧ ಎಫ್ಐಆರ್ ದಾಖಲು

Date:

ಕಳೆದ ಒಂದು ವರ್ಷದಿಂದ ಬಂಧನದಲ್ಲಿದ್ದ ಬಿಲ್ಡರ್‌ವೊಬ್ಬರು ತಪ್ಪಿಸಿಕೊಂಡು ಬಂದು ಪೊಲೀಸ್‌ ಠಾಣೆಗೆ ದೂರು ನೀಡಿದ್ದಕ್ಕೆ, ಮತ್ತೆ ಅಪಹರಿಸಿ ಅವರಿಗೆ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಿರುಕುಳ ನೀಡಿದ್ದ ಆರೋಪಿಗಳ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಶೋಕ್ ಶಿವರಾಜ್ ಎಂಬುವವರು ಹಲವು ವರ್ಷಗಳಿಂದ ಬಿಲ್ಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವ್ಯವಹಾರದಲ್ಲಿ ಕುಸಿತ ಕಂಡ ಹಿನ್ನೆಲೆ, ವೀರೇಶ್ ಮತ್ತು ರಶ್ಮಿ ಎಂಬುವವರು ಪರಿಚಯವಾಗಿ ಪಾರ್ಟ್ನರ್ ಆಗಿ ಜೊತೆಗೆ ಕಾರ್ಯನಿರ್ವಹಿಸುತ್ತಾರೆ.

ಅಶೋಕ್ ಶಿವರಾಜ್ ಅವರ ಬಳಿ ಇದ್ದ ಆಸ್ತಿಗೆ ಮಾರು ಹೋದ ವೀರೇಶ್ ಮತ್ತು ರಶ್ನಿ ಅವರ ಆಸ್ತಿಯನ್ನು ಕಬಳಿಸಲು ಸಂಚು ರೂಪಿಸಿ, ಅಶೋಕ್ ಶಿವರಾಜ್ ಅವರನ್ನು ಕಳೆದ ಒಂದು ವರ್ಷದಿಂದ ಬಂಧನದಲ್ಲಿರಿಸಿ, ಅವರಿಂದ ಬಲವಂತವಾಗಿ ಜಮೀನು, ಫ್ಲಾಟ್ ಸೇರಿದಂತೆ ಕೆಲವು ಆಸ್ತಿಗಳಿಗೆ ಸಹಿ ಹಾಕಿಸಿಕೊಂಡು ಕಬಳಿಸಿರುವ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳ ಬಂಧನದಿಂದ ತಪ್ಪಿಸಿಕೊಂಡು ಬಂದ ಅಶೋಕ್ ಶಿವರಾಜ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಆರೋಪಿಸಿದ್ದಕ್ಕೆ ಮತ್ತೆ ಆರೋಪಿಗಳು ಜನವರಿ 12 ರಂದು ಜ್ಞಾನಭಾರತಿ ಸಮುದಾಯ ಭವನ‌ ಬಳಿಯಿಂದ ಅಶೋಕ್ ಶಿವರಾಜ್ ಅವರನ್ನು ಅಪಹರಣ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಸಂಬಂಧಿ ಉಷಾ ಎಂಬುವವರು ನಿರಂತರ ಕರೆ ಮಾಡಿದಾಗ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ 112ಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಪೊಲೀಸರು ಕರೆ ಮಾಡಿದ ಬಳಿಕ ಅಶೋಕ್​ ಶಿವರಾಜ್ ಅವರನ್ನು ವಾಪಸ್​​ ಬಿಟ್ಟು ಹೋಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರೇಶ್, ರಶ್ಮಿ, ಕೃಷ್ಣಪ್ಪ, ರಾಜಶೇಖರ್, ರಘು ಸೇರಿ 8 ಜನರ ವಿರುದ್ಧ ದೂರು ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಜ.19ರಂದು ಪ್ರಧಾನಿ ಮೋದಿ ಆಗಮನ; ಸಂಚಾರ ಮಾರ್ಗ ಬದಲಾವಣೆಯ ವಿವರ ಇಲ್ಲಿದೆ

ಈ ಎಂಟು ಜನ ಆರೋಪಿಗಳು ಅಶೋಕ್​ ಅವರನ್ನು ಒಂದು ವರ್ಷ ಬಂಧನದಲ್ಲಿಟ್ಟು ಹಿಂಸೆ ನೀಡಿದ್ದರು ಎಂದು ಅಶೋಕ್ ಶಿವರಾಜ್ ಅವರು ಆರೋಪಿಸಿದ್ದಾರೆ.

ಇನ್ನು ಅಶೋಕ್ ಶಿವರಾಜ್​ ವಿರುದ್ಧವೂ ನಗರದ ನಾನಾ ಪೊಲೀಸ್ ಠಾಣೆಯಲ್ಲಿ ಹಲವು ವಂಚನೆ ಪ್ರಕರಣಗಳಿದ್ದು, ಎಫ್ಐಆರ್ ದಾಖಲಾಗಿರುವುದು ಪತ್ತೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...